ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಸೆ.26, 27 ರಂದು ಬೆಳಗ್ಗೆ 9 ಗಂಟೆಯಿಂದ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಾಲಿಬಾಲ್, ಕಬಡ್ಡಿ, ಖೋಖೋ, ಫುಟ್ಬಾಲ್, ಥ್ರೋಬಾಲ್, ಕ್ರೀಡೆಗಳಲ್ಲಿ ಪ್ರಥಮ ಹಾಗೂ ಅಥ್ಲೆಟಿಕ್ಸ್‌ನ ವೈಯಕ್ತಿಕ ಮತ್ತು ಯೋಗ ಕ್ರೀಡೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಜಿಲ್ಲಾಮಟ್ಟಕ್ಕೆ ಅರ್ಹರು. ತಾಲೂಕು ಕೇಂದ್ರದಿಂದ ಜಿಲ್ಲಾ ಕೇಂದ್ರಕ್ಕೆ ಹೋಗಿ ಬರುವ ಪ್ರಯಾಣ ಮತ್ತು ದಿನಭತ್ಯೆ ನೀಡಲಾಗುವುದು.
ಜಿಲ್ಲಾ ಕ್ರೀಡಾಕೂಟದಲ್ಲಿ ನೇರವಾಗಿ ಬಾಸ್ಕೆಟ್‌ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್‌ಟೆನಿಸ್, ನೆಟ್‌ಬಾಲ್ ಮತ್ತು ಈಜು ಕ್ರೀಡೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ ಮಾಡಲಾಗುವುದು. ಅವರಿಗೆ ಪ್ರಯಾಣ ಮತ್ತು ದಿನಭತ್ಯೆ ನೀಡಲಾಗುವುದಿಲ್ಲ. ಮಾಹಿತಿಗೆ ದೂರವಾಣಿ ಸಂಖ್ಯೆ 08194-235635ನ್ನು ಸಂಪರ್ಕಿಸಬಹುದೆಂದು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…