ಚಿತ್ರದುರ್ಗ: ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 7 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಏರ್ಪಡಿಸಲಾಗಿದೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಡಿಸಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಯುವ ಜನೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನವರಿ 12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆ ಅಂಗವಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಯುವ ಜನೋತ್ಸವ ಆಯೋಜಿಸಲಾಗುತ್ತದೆ. ಹೀಗಾಗಿ ಜಿಲ್ಲಾಮಟ್ಟದಲ್ಲಿ ವಿವಿಧ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ನಗದು ಬಹುಮಾನ ಹಾಗೂ ಪುರಸ್ಕಾರ ನೀಡುವ ಜತೆಗೆ, ರಾಜ್ಯಮಟ್ಟಕ್ಕೆ ಆಯ್ಕೆ ಮಾಡಲಾಗುವುದು ಎಂದರು.
ಜಾನಪದ ಗೀತೆ, ನೃತ್ಯ, ಕಥೆ ಹಾಗೂ ಕವನಬರಹ, ಭಾಷಣ, ಚಿತ್ರಕಲೆ, ವಿಜ್ಞಾನ ಮೇಳ, ಮೊಬೈಲ್ ಫೋಟೊಗ್ರಫಿ ಹಾಗೂ ಉತ್ತಮ ಕರಕುಶಲ ವಸ್ತು ಪ್ರದರ್ಶನ, ಸಿದ್ಧ ಉಡುಪು ಹಾಗೂ ಆಹಾರ ಸಂಸ್ಕರಣೆ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಶಾಲಾ-ಕಾಲೇಜುಗಳ ಮುಖ್ಯಸ್ಥರು ವಿದ್ಯಾರ್ಥಿಗಳನ್ನು ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದರು.
ಯುವಜನೋತ್ಸವ ಅಂಗವಾಗಿ ವಸ್ತು ಪ್ರದರ್ಶನ ಏರ್ಪಡಿಸಲಾಗುವುದು. ಸ್ಪರ್ಧಾಳುಗಳು ಸೂಕ್ತ ದಾಖಲೆ ಹಾಜರು ಪಡಿಸಬೇಕೆಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ ಹೇಳಿದರು.
ನೆಹರು ಯುವ ಕೇಂದ್ರದ ಯುವಜನಾಧಿಕಾರಿ ಸುಹಾಸ್ ಮಾತನಾಡಿ, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7760028435/9945038684ಗೆ ಸಂಪರ್ಕಿಸಬಹುದೆಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಪವಿತ್ರಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಹೇಮಣ್ಣ ಮತ್ತಿತರರು ಇದ್ದರು.
ಜಿಲ್ಲಾ ಮಟ್ಟದ ಯುವಜನೋತ್ಸವ ಡಿ. 7 ಕ್ಕೆ

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season
rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…
ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips
Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…