More

  ಜಿಲ್ಲಾ ವಕೀಲರ ಸಂಘಕ್ಕೆ ಪ್ರಶಂಸಾ ಪತ್ರ  -ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣ ಇತ್ಯರ್ಥ

  ದಾವಣಗೆರೆ: ಲೋಕ ಅದಾಲತ್ ಮೂಲಕ ಅತಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿದ ದಾವಣಗೆರೆ ಜಿಲ್ಲಾ ವಕೀಲರ ಸಂಘಕ್ಕೆ ಹೈಕೋರ್ಟ್‌ನ ನ್ಯಾಯಮೂರ್ತಿ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷ ಜಿ. ನರೇಂದ್ರ ಅವರು ಪ್ರಶಂಸಾಪತ್ರ ನೀಡಿದ್ದಾರೆ.
  ಜಿಲ್ಲಾ ವಕೀಲರ ಸಂಘದಲ್ಲಿ ಮಂಗಳವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣಕುಮಾರ್ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಅವರು ಪ್ರಶಂಸಾ ಪತ್ರವನ್ನು ಹಸ್ತಾಂತರಿಸಿದರು.
  ಸಂಘದ ಸದಸ್ಯರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರಲ್ಲದೆ ಮುಂದಿನ ದಿನಗಳಲ್ಲೂ ಲೋಕ ಅದಾಲತ್ ಕಾರ್ಯಕ್ರಮಗಳಲ್ಲಿ ಸಹಕಾರ ನೀಡುವಂತೆ ಕೋರಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ. ಕರಣ್ಣನವರ್ ವಕೀಲರ ಸಹಕಾರವನ್ನು ಸ್ಮರಿಸಿದರು.
  ಜಿಲ್ಲಾ ನ್ಯಾಯಾಧೀಶರಾದ ವಿಜಯಾನಂದ, ದಶರಥ, ಶ್ರೀಪಾದ್, ಪ್ರವೀಣ್‌ಕುಮಾರ್, ನ್ಯಾಯಾಧೀಶರಾದ ಶಿವಪ್ಪ ಸಲಗೆರೆ, ನಿವೇದಿತಾ, ರೇಷ್ಮಾ, ಅಫ್ತಾಬ್, ಸಮೀರ್ ಕೊಳ್ಳಿ, ಪ್ರಶಾಂತ್, ಮಲ್ಲಿಕಾರ್ಜುನ್, ಸಿದ್ಧರಾಜು, ನಾಜಿಯಾ ಕೌಸರ್, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎಸ್. ಬಸವರಾಜ್, ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts