ಜಿಲ್ಲೆಯಲ್ಲಿ ಪ್ರವಾಹ ಸಮರ್ಥ ನಿರ್ವಹಣೆ

ಬಾಗಲಕೋಟೆ: ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳಿಂದ ಉಂಟಾಗುವ ಪ್ರವಾಹ ನಿರ್ವಹಣೆಯನ್ನು ಜಿಲ್ಲಾಡಳಿತ ಸಮರ್ಥವಾಗಿ ನಿರ್ವಹಣೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.

ಶನಿವಾರ ಜಮಖಂಡಿ ತಾಲೂಕಿನ ಪ್ರವಾಹ ಪೀಡಿತ ಆಲಗೂರು ಮತ್ತು ಕಡಕೋಳ ಗ್ರಾಮ ಹಾಗೂ ಚಿಕ್ಕಪಡಸಲಗಿ ಸೇತುವೆ ವೀಕ್ಷಣೆ ಮಾಡಿದ ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಿದ ಮಾತನಾಡಿದ ಅವರು, ಜಲಾಶಯಕ್ಕೆ ಬರುವ ಒಳಹರಿವು ನೋಡಿಕೊಂಡು ಹೊರಗಡೆ ಬಿಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಆಗುವದನ್ನು ತಪ್ಪಿಸಲಾಗಿದೆ. ಪ್ರಸಕ್ತ ಸಾಲಿನ ಪ್ರವಾಹದಲ್ಲಿ ೩ ಜನರ ಜೀವ ಹಾನಿಯಾಗಿದ್ದು, ತಲಾ ೫ ಲಕ್ಷದಂತೆ ೧೫ ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದರು.

ಮುಧೋಳ ತಾಲೂಕಿನಲ್ಲಿ ಒಟ್ಟು ೧೩ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಒಟ್ಟು ೧೫೪೦ ಜನ ಆಶ್ರಯ ಪಡೆಯುತ್ತಿದ್ದಾರೆ. ರಬಕವಿ-ಬನಹಟ್ಟಿ ತಾಲೂಕಿನ ೭ ಕಾಳಜಿ ಕೇಂದ್ರಗಳಲ್ಲಿ ೯೫೧ ಜನ ಆಶ್ರಯ ಪಡೆದರೆ, ಬೀಳಗಿ ತಾಲೂಕಿನಲ್ಲಿ ೧ ಕಾಳಜಿ ಕೇಂದ್ರ ತೆರಯಲಾಗಿದ್ದು, ೮ ಜನ ಆಶ್ರಯ ಪಡೆದಿರುತ್ತಾರೆ, ಜಿಲ್ಲೆಯಲ್ಲಿ ಒಟ್ಟು ೨೨ ಕಾಳಜಿ ಕೇಂದ್ರಗಳಲ್ಲಿ ಒಟ್ಟು ೨೪೯೯ ಜನ ಆಶ್ರಯ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಜೂ.೧ ರಿಂದ ಜು.೩೧ ವರೆಗೆ ಒಟ್ಟು ೪೧೪ ಮನೆಗಳು ಹಾನಿಗೊಳಗಾಗಿದ್ದು, ಅದರಲ್ಲಿ ೨೫೫ ಭಾಗಶಃ ಹಾನಿಯಾದ ಮನೆಗಳಿಗೆ ನಿಯಮಾನುಸಾರ ಸಾರ ೧೬.೧೪ ಲಕ್ಷ ರೂ.ಗಳ ಪರಿಹಾರ ಪಾವತಿಸಲಾಗಿದೆ. ೪೪ ಮಳೆಗಳು ಇತ್ತೀಚಿನ ಮಳೆಯಿಂದ ಹಾನಿಯಾಗಿದ್ದು, ಸಮೀಕ್ಷೆ ಹಂತದಲ್ಲಿ ಬಾಕಿ ಇರುತವೆ. ಕಬ್ಬು, ಮೆಕ್ಕೆಜೋಳ, ಉದ್ದು ಮತ್ತು ಹೆಸರು ಹಾನಿಗೊಳಗಾಗಿದೆ. ಕೃಷಿ ೧೫೪೫೫ ಹೆಕ್ಟೇರ್ ಪ್ರದೇಶ ಹಾನಿಗೊಳಗಾದರೆ, ತೋಟಗಾರಿಕೆಯಲ್ಲಿ ೪೧೭ ಹೆಕ್ಟೆರ್ ಪ್ರದೇಶದಷ್ಟು ಹಾನಿಯಾಗಿರುತ್ತದೆ ಎಂದು ಹೇಳಿದರು.

ಪ್ರವಾಹ ಉಂಟಾದಾಗಲೆಲ್ಲ ಮುಧೋಳ ತಾಲೂಕಿನ ಅನೇಕ ಸೇತುವೆಗಳು ಮುಳಿಗಡೆ ಹೊಂದುತ್ತಿವೆ ಇದರಿಂದ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಚಿಚಖಂಡಿ ಸೇತುವೆಯನ್ನು ಎತ್ತರ ಮಾಡಲು ಪ್ರಸ್ತಾವನೆ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪೂರ್ಣ ಹಾನಿಯಾದ ಮನೆಗಳಿಗೆ ಮಾರ್ಗಸೂಚಿಯನ್ವಯ ೧.೨೦ ಲಕ್ಷ ರೂ.ಗಳ ಪರಿಹಾರ ಜೊತೆಗೆ ಹೆಚ್ಚುವರಿಯಾಗಿ ದೇವರಾಜ ಅರಸು ವಸತಿ ಯೋಜನೆಯಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸಾಮಾನ್ಯ ವರ್ಗಗಳಿಗೆ ಮಂಜೂರು ಮಾಡುವ ಮನೆಗೆ ೧.೨೦ ಲಕ್ಷ ಮತ್ತು ಎಸ್.ಸಿ, ಎಸ್‌ಟಿ ವರ್ಗಗಳಿಗೆ ೧.೫೦ ಲಕ್ಷ ರೂ.ಗಳ ಮಂಜೂರು ಮಾಡಲಾಗುತ್ತದೆ ಎಂದರು.

ಅನಧಿಕೃತ ಜಮೀನಿನಲ್ಲಿ ಸಂಪೂರ್ಣ ಹಾನಿಯಾದ ಮನೆಗಳಿಗೆ ಒಂದು ಬಾರಿ ಪರಿಹಾರವಾಗಿ ೧ ಲಕ್ಷ ರೂ. ಪಾವತಿಸಲಾಗುತ್ತದೆ. ಭಾಗಶಃ ಹಾನಿಯಾದ ಮನೆಗಳ ದುರಸ್ಥಿಗೆ ವಿಪತ್ತು ನಿಯಿಂದ ೬೫೦೦ ರೂ.ಗಳ ಜೊತೆಗೆ ರಾಜ್ಯ ಸರಕಾರದಿಂದ ಹೆಚ್ಚುವರಿಯಾಗಿ ೪೩೫೦೦ ರೂ ಸೇರಿ ಒಟ್ಟು ೫೦ ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಪ್ರವಾಹದಿಂದ ಬಟ್ಟೆ ಕಳೆದುಕೊಂಡರೆ ೨೫೦೦ ರೂ, ಗೃಹೋಪಯೋಗಿ ವಸ್ತುಗಳು ಹಾನಿಯಾದಲ್ಲಿ ೨೫೦೦ ರೂ. ಪರಿಹಾರ ಪಾವತಿಸಲು ನಿಗದಿಪಡಿಸಲಾಗಿದ್ದು, ವಿಪತ್ತು ನಿಧಿಯಿಂದ ೫ ಸಾವಿರ ರೂ.ಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಸೇರಿದಂತೆ ಇತರರು ಇದ್ದರು.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…