25.9 C
Bengaluru
Wednesday, January 22, 2020

ಜಿಲ್ಲೆಯಲ್ಲಿ 7 ಸಾವಿರ ಎಚ್​ಐವಿ ಸೋಂಕಿತರು

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಗದಗ: ಮಾರಣಾಂತಿಕ ಏಡ್ಸ್ ಕಾಯಿಲೆ ತಡೆಗಟ್ಟುವುದು ಅತ್ಯವಶ್ಯಕವಾಗಿದೆ. ಯುವಕರಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದು ತಾ.ಪಂ ಅಧ್ಯಕ್ಷ ಶರಣಬಸನಗೌಡ ಹೇಳಿದರು.

ನಗರದ ಜಗದ್ಗುರು ತೋಂಟದಾರ್ಯ ಕಾಲೇಜ್​ನಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ವಿವಿಧ ಇಲಾಖೆ ಹಾಗೂ ಶಾಲಾ ಕಾಲೇಜ್​ಗಳ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 7 ಸಾವಿರ ಎಚ್​ಐವಿ ಸೋಂಕಿತರಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸಿ ಆರೋಗ್ಯವಂತರನ್ನಾಗಿಸಬೇಕು. ಏಡ್ಸ್ ತಡೆಗಟ್ಟುವ ಕುರಿತು ವಿವಿಧ ಕಲಾತಂಡಗಳಿಂದ ಬೀದಿ ನಾಟಕ ಮತ್ತು ಭಿತ್ತಿ ಪತ್ರಗಳ ವಿತರಣೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ ಸಲಗೆರೆ ಮಾತನಾಡಿ, ಎಚ್​ಐವಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ ಪ್ರಾಸ್ತಾವಿಕವಾಗಿ ಮಾತನಾಡಿ, ಎಚ್​ಐವಿ ಸೋಂಕಿನ ಪ್ರಮಾಣ ಕಳೆದ ಹತ್ತು ವರ್ಷಗಳ ಅಂಕಿಅಂಶಗಳನ್ನು ಗಮನಿಸಿದಾಗ ಗಣನೀಯವಾಗಿ ಇಳಿಕೆ ಕಂಡುಬಂದಿದೆ. ಇದಕ್ಕೆ ಆರೋಗ್ಯ ಇಲಾಖೆಯ ಎಲ್ಲ ಸಿಬ್ಬಂದಿ, ಸಂಘ ಸಂಸ್ಥೆಗಳ ಸಹಕಾರ ಕಾರಣ. ಜಿಲ್ಲೆಯಲ್ಲಿ 9 ಕಡೆ ಐಸಿಟಿಸಿ ಕೇಂದ್ರ ಸ್ಥಾಪಿಸಲಾಗಿದ್ದು 3,696 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಡಾ. ಅರವಿಂದ ಕರಿನಾಗಣ್ಣವರ ಮಾತನಾಡಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಎಸ್.ಎಸ್. ನೀಲಗುಂದ, ಡಿಡಿಪಿಯು ಎಸ್.ಎಸ್.ಹಿರೇಮಠ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಡಿ ಸಾಮುದ್ರಿ, ಡಾ.ಅನಿಲ, ಎಸ್.ಎಸ್.ನಿರ್ಮಲ ಮತ್ತಿತರರು ಇದ್ದರು.

ಜೆ.ಟಿ. ಕಾಲೇಜ್ ಪ್ರಾಚಾರ್ಯ ಸಿ. ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಪ್ರಾರ್ಥಿಸಿದರು. ಬಸವರಾಜ ಲಾಳಗಟ್ಟಿ ಸ್ವಾಗತಿಸಿದರು. ರೂಪಾಲಿ ಪೀರಣ್ಣವರ ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...