ಜಿಲ್ಲೆಯಲ್ಲಿ 89 ಸಾವಿರ ಹೆಕ್ಟೇರ್ ಬೆಳೆ ಹಾನಿ

blank

ಧಾರವಾಡ: ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 89,148 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆಗಳು ಹಾನಿಯಾಗಿವೆ. ಹೆಸರು, ಉದ್ದು ಬೆಳೆಗಳ ಕೊಯ್ಲು ಸಾಧ್ಯವಾಗದೇ ರೈತರು ಸಂಕಷ್ಟದಲ್ಲಿದ್ದಾರೆ. ಸಮರ್ಪಕವಾಗಿ ಜಂಟಿ ಸಮೀಕ್ಷೆ ಕೈಗೊಂಡು ಹಾನಿಯ ನಿಖರ ಮಾಹಿತಿ ದಾಖಲಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ 89,000 ಹೆಕ್ಟೇರ್ ಕೃಷಿ ಬೆಳೆ ಹಾಗೂ 2,600 ಹೆಕ್ಟೇರ್ ತೋಟಗಾರಿಕೆ ಬೆಳೆಗಳಿಗೆ ಹಾನಿ ಆಗಿದೆ. ಎನ್​ಡಿಆರ್​ಎಫ್ ಹಾಗೂ ಎಸ್​ಡಿಆರ್​ಎಫ್ ಮಾನದಂಡಗಳ ಅನ್ವಯ ರೈತರ ಖಾತೆಗಳಿಗೆ ನೇರವಾಗಿ ಶೀಘ್ರವೇ ಪರಿಹಾರ ಪಾವತಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಮಳೆ ಹಾನಿ ಪರಿಶೀಲನಾ ಸಭೆಯ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಸುಮಾರು 61,000 ಹೆಕ್ಟೇರ್ ಹೆಸರು ಬೆಳೆಗೆ ಹಾನಿ ಆಗಿದ್ದು, ಕಟಾವಿನ ಹಂತದಲ್ಲಿದ್ದ ಬೆಳೆ ಮೊಳಕೆ ಒಡೆದಿದೆ. ಆದ್ದರಿಂದ ಕೃಷಿ, ಕಂದಾಯ, ಇತರ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಈ ಹಿಂದೆ ಪ್ರತಿ ಹೆಕ್ಟೇರ್​ಗೆ 6,800 ರೂ. ಇದ್ದ ಪರಿಹಾರವನ್ನು 13,600 ರೂ.ಗೆ ಏರಿಸಲಾಗಿದೆ. ಅಲ್ಲದೆ, ರೈತರ ನೆರವಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ವಾರ್ಷಿಕ 10,000 ರೂ.ಗಳನ್ನು ಪಿಎಂ ಕಿಸಾನ್ ಯೋಜನೆಯಡಿ ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ ಎಂದರು.
ಸದ್ಯಕ್ಕೆ ರೈತರ ಸಾಲ ಮನ್ನಾ ಮಾಡುವ ವಿಚಾರ ಇಲ್ಲ ಎಂದು ಸಚಿವ ಪಾಟೀಲ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.



Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…