ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ

ಭಾಲ್ಕಿ: ಬಿಜೆಪಿ ಸರ್ಕಾರ ಬರೀ ಆಶ್ವಾಸನೆ ನೀಡಿ ಜನರಿಗೆ ಮೋಸ ಮಾಡುತ್ತಿದೆ. ಬೀದರ್ ಜಿಲ್ಲೆಗೆ ಬೇಕಾದಷ್ಟು ಅನುದಾನ ತಂದು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮಾಡಿದ್ದೇನೆ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶ ಹಾಗೂ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಸಮಿತಿ ಪದಾಧಿಕಾರಿಗಳಿಗೆ ನೇಮಕ ಆದೇಶ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಚಿವರಾದ ರಾಜಶೇಖರ ಪಾಟೀಲ್, ರಹೀಮ್ ಖಾನ್, ಬಂಡೆಪ್ಪ ಖಾಶೆಂಪುರ, ಶಾಸಕ ಬಿ.ನಾರಾಯಣರಾವ ಮಾತನಾಡಿ, ಈಶ್ವರ ಖಂಡ್ರೆ ಅವರ ಉತ್ತಮ ಕಾರ್ಯಗಳನ್ನು ನೋಡಿ ಜನ ಮತ ನೀಡಬೇಕು. ರಾಜ್ಯದಲ್ಲೇ ಅತಿ ಹೆಚ್ಚಿನ ಮತಗಳ ಅಂತರದಿಂದ ಜಯ ಗಳಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಕೋರಿದರು.
ಕೆಪಿಸಿಸಿ ಅಸಂಘಟಿತ ಕಾರ್ಮಿಕರ ಸಮಿತಿ ರಾಜ್ಯ ಉಪಾಧ್ಯಕ್ಷ ಪಪ್ಪು ಪಾಟೀಲ್ ಖಾನಾಪುರ, ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ತಾಲೂಕು ಅಧ್ಯಕ್ಷ ಹಣಮಂತರಾವ ಚವ್ಹಾಣ್, ಬ್ಲಾಕ್ ಅಧ್ಯಕ್ಷ ಶೇಖ್ ಅಬ್ದುಲ್ ನಸೀರ್, ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ ಪಾಟೀಲ್, ಮೀನಾಕ್ಷಿ ಸಂಗ್ರಾಮ, ಜಿಪಂ ಸದಸ್ಯೆ ಗೀತಾ ಪಂಡಿತ ಚಿದ್ರಿ, ಪ್ರಮುಖರಾದ ಶೀತಲ್ ಚವ್ಹಾಣ್, ಅಂಬಾದಾಸ ಕೋರೆ, ವಿಜಯಕುಮಾರ ಪಾಟೀಲ್ ಗಾದಗಿ, ಅಮೃತರಾವ ಚಿಮಕೋಡೆ, ಪಂಡಿತ ಚಿದ್ರಿ ಇತರರಿದ್ದರು.

Leave a Reply

Your email address will not be published. Required fields are marked *