ಬಾಗಲಕೋಟೆ: ಜಿಲ್ಲೆಯ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಮಖಂಡಿ ತಾಲೂಕಿನ ಸೈದಾಪೂರ ಗ್ರಾಮದ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಮಹಾಲಿಂಗಪೂರದ ಕೆ.ಎಚ್‍ಡಿಸಿ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ನಿರ್ಮಾಣ ಕಾಮಗಾರಿ ಪರಿಶೀಲಿಸಿ ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಕೆ ಆದ್ಯತೆ ನೀಡಲು ಸೂಚಿಸಿದರು. ಚಿಮ್ಮಡ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿ, ಗುರುವ ತೋಟದ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟದ ದಾಸ್ತಾನು ಕೊಠಡಿಗೆ ತೆರಳಿ ದಾಸ್ತಾನುಗಳ ಪರಿಶೀಲನೆ ನಡೆಸಿದರು.
ಹಣಗಂಡಿ ತೋಟ ನಂ.1 ಶಾಲೆಯಲ್ಲಿ ಶೌಚಾಲಯ ಕಾಮಗಾರಿ ವೀಕ್ಷಣೆ, ಹನಗಂಡಿಯಲ್ಲಿ ನಿರ್ಮಿಸಲಾಗುತ್ತಿರುವ ಚರಂಡಿ ಕಾಮಗಾರಿ, ಯಲ್ಲಟ್ಟಿ ಗ್ರಾಮದ ಕುಡಿಯುವ ನೀರಿನ ಪೈಪಲೈನ್ ಕಾಮಗಾರಿ ಕುಲಹಳ್ಳಿ ಚಾಕ್‍ವೆಲ್ ಕಾಮಗಾರಿ, ಚಿಮ್ಮಡದ ಮೇಲ್ಪಟ್ಟ ಸಂಗ್ರಹಾಲಯ ಕಾಮಗಾರಿ, ಹನಗಂಡಿ ಅಮೃತ ಸರೋವರ ಕಾಮಗಾರಿ, ಹಳಿಂಗಳಿ ಸಿಸಿ ರಸ್ತೆ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭಗಳಲ್ಲಿ ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುತ್ತಿರುವ ಆಹಾರ ಪದಾರ್ಥ ಪರಿಶೀಲಿಸಿ ಗುಣಮಟ್ಟದ ಆಹಾರ ತಯಾರಿಸಿ ಮಕ್ಕಳಿಗೆ ನೀಡುವಂತೆ ಸೂಚಿಸಿದರು.
ಭೇಟಿ ಸಮಯದಲ್ಲಿ ರಬಕವಿ-ಬನಹಟ್ಟಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಾಟಿಹಾಳ, ಜಮಖಂಡಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಜಮಖಂಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈವರ್iಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜೆ.ಟಿ.ಶೆಟ್ಟಿ, ಪಂಚಾಯತ್ ರಾಜ್‍ನ ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ ನಾಡಗೌಡ ಸೇರಿದಂತೆ ಇತರರು ಇದ್ದರು.