ಜೀವಜಲಕ್ಕಾಗಿ ನಿತ್ಯ ಪರದಾಟ

Latest News

17ರಿಂದ ಬಾಗಲಕೋಟೆಯಲ್ಲಿ ಯೋಗ ಸಪ್ತಾಹ

ಬಾಗಲಕೋಟೆ: ಹರಿಹರದ ಶ್ವಾಸಯೋಗಪೀಠ, ಬಾಗಲಕೋಟೆಯ ಯೋಗ ಸಮಿತಿ, ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘ ಸಹಯೋಗದಲ್ಲಿ ನಗರದಲ್ಲಿ ಖ್ಯಾತ ಶ್ವಾಸಗುರು ಹರಿಹರದ ವೀರಶೈವ ಲಿಂಗಾಯತ...

VIDEO: ಕಗ್ಗತ್ತಲೆಯಲ್ಲಿ ಅಡಗಿ ನೆಗೆದರೂ ಗುರಿ ತಪ್ಪಿದ ಚಿರತೆ! ಸಾವಿಗೂ, ಜೀವಕೂ ಕೆಲವೇ ಸೆಕೆಂಡ್​ಗಳ ಅಂತರ

ನವದೆಹಲಿ: ಕಗ್ಗತ್ತಲೆಯಲ್ಲಿ ಅಡಗಿದ್ದು, ಆ ಮಾರ್ಗವಾಗಿ ಬಂದ ಬೈಕ್​ ಸವಾರರ ಮೇಲೆ ಚಿರತೆ ನೆಗೆದರೂ ಕೆಲವೇ ಸೆಕೆಂಡ್​ಗಳ ಅಂತರದಲ್ಲಿ ಸಾವಿನಿಂದ ಪಾರಾದರು. ಚಿರತೆ...

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ...

ಮಹಾರಾಷ್ಟ್ರದಲ್ಲಿ ಕಾಡುತ್ತಿದೆ ಶಾಸಕರ ಕುದುರೆ ವ್ಯಾಪಾರದ ಭೀತಿ: ಎನ್​ಸಿಪಿ ಮಾತ್ರ ನಿರಾತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ತರಾತುರಿ ತೋರುತ್ತಿವೆ. ಸರ್ಕಾರ ರಚನೆ ವಿಳಂಬವಾದಲ್ಲಿ ಬಿಜೆಪಿಯವರು ಆಪರೇಷನ್​ ಕಮಲ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸು: ಬಾಬಾ ರಾಮದೇವ್​

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿದೆ ಎಂದು ಯೋಗಗುರು ಬಾಬಾ ರಾಮದೇವ್​ ತಿಳಿಸಿದರು. ಐದು ದಿನಗಳ ಯೋಗ ಮತ್ತು...

ಲಕ್ಷ್ಮೇಶ್ವರ: ಸೂರಣಗಿ ಶುದ್ಧೀಕರಣ ಘಟಕದಲ್ಲಿನ ನೀರೆತ್ತುವ ಪಂಪ್​ಗಳು ದುರಸ್ತಿಯಲ್ಲಿದ್ದು, ಪಟ್ಟಣದ ಜನತೆ ನೀರಿಗಾಗಿ 15 ದಿನಗಳಿಂದ ತೊಂದರೆ ಅನುಭವಿಸುವಂತಾಗಿದೆ.

ಪಟ್ಟಣದ 50,000 ಜನಸಂಖ್ಯೆಯ 23 ವಾರ್ಡ್​ಗಳಲ್ಲಿ ಅಲ್ಲಲ್ಲಿ ಸಾರ್ವಜನಿಕ ನಳಗಳನ್ನು ಅಳವಡಿಸಿ ಬೋರ್​ವೆಲ್ ನೀರು ಪೂರೈಸಲಾಗುತ್ತಿದೆ. ಆದರೆ, ಈಶ್ವರ ನಗರ, ಲಕ್ಷ್ಮೀನಗರ, ಉಪನಾಳ ನಗರ ಮತ್ತಿತರ ಕೆಲ ವಾರ್ಡ್​ಗಳಿಗೆ ಈ ಸೌಲಭ್ಯವಿಲ್ಲದ್ದರಿಂದ ಇಲ್ಲಿನ ನಿವಾಸಿಗಳು ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಇದೆ. ಜನತೆ ಟ್ಯಾಂಕರ್ ನೀರಿಗೆ ಮೊರೆ ಹೋಗಿದ್ದರಿಂದ ಬೇಡಿಕೆ ಹೆಚ್ಚಾಗಿದ್ದು, ಪ್ರತಿ ಟ್ಯಾಂಕರ್ ನೀರಿಗೆ 350-400 ರೂ. ಆಗಿದೆ.

ಹೊಸ ಬಡಾವಣೆಗಳಲ್ಲಿನ ಬಹುತೇಕ ಮನೆಗಳಲ್ಲಿ ಕೊಳವೆ ಬಾವಿಗಳಿವೆ. ಪಟ್ಟಣದ ಅರ್ಧದಷ್ಟು ಜನರು ಕುಡಿಯಲು ನಿತ್ಯ ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಬಳಸುತ್ತಾರೆ. ಇನ್ನು ರೈತರೇ ಹೆಚ್ಚಿರುವ ಬಸ್ತಿಕೇರಿ, ಸೊಪ್ಪಿನಕೇರಿ, ಕದರಗೇರಿ, ಮ್ಯಾಗೇರಿ, ಬಳಿಗಾರ ಓಣಿ, ಹಳ್ಳದಕೇರಿ ಜಮೀನುಗಳ ಬದುವು, ಕೆರೆಗಳಲ್ಲಿ ನೀರು ನಿಂತಿರುವುದು ಈ ಭಾಗದ ಜನರಿಗೆ ಆಸರೆಯಾಗಿದೆ. ಆದರೆ, ನೀರಿನ ವ್ಯವಸ್ಥೆಯಿಲ್ಲದ ಬಡಾವಣೆಗಳ ಜನರು 15 ದಿನಗಳಿಂದ ನೀರಿಗಾಗಿ ಪರಿತಪಿಸುವಂತಾಗಿದೆ.

ಭಾನುವಾರ ಪಟ್ಟಣದ 5ನೇ ವಾರ್ಡ್ ನಿವಾಸಿಗಳಿಗೆ ಸ್ಥಳೀಯ ಮುಖಂಡ ಜಾಕೀರಹುಸೇನ ಹವಾಲ್ದಾರ ಅವರು ತಮ್ಮ ಟ್ಯಾಂಕರ್​ನಿಂದ ನೀರು ಪೂರೈಸಿದರು. ಉಪನಾಳ ನಗರ, ಎಪಿಎಂಸಿ ಹಮಾಲರ ಕಾಲನಿ ಜನರು ಪಟ್ಟಣಕ್ಕೆ ನೀರು ಪೂರೈಸುವ ಮೇಲ್ಮಟ್ಟದ ಜಲಾಗಾರ ಏರಿ ಹಗ್ಗದಿಂದ ನೀರೆತ್ತುವ ದೃಶ್ಯಗಳು ಸಾಮಾನ್ಯವಾಗಿವೆ.

ಪಟ್ಟಣದಲ್ಲಿ ಜು. 3ರಂದು ಉಂಟಾದ ನೀರಿನ ಸಮಸ್ಯೆ ಬಗೆಹರಿಸುವಂತೆ ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಆಗ ಅಧಿಕಾರಿಗಳು 15 ದಿನಗಳಲ್ಲಿ ನೀರೆತ್ತುವ ಪಂಪ್ ದುರಸ್ತಿ ಕೈಗೊಳ್ಳುವುದಾಗಿ ತಿಳಿಸಿದ್ದರು.

ಇಂದಿನಿಂದ ನೀರು ಪೂರೈಕೆ ಭರವಸೆ
ಈ ಕುರಿತು ಪುರಸಭೆ ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟೆ, ನೀರು ಸರಬರಾಜು ವಿಭಾಗ ಮುಖ್ಯಸ್ಥ ರಾಠೋಡ ಅವರನ್ನು ಮಾತನಾಡಿಸಿದಾಗ, ‘ಸೂರಣಗಿ ನೀರು ಶುದ್ಧೀಕರಣ ಘಟಕದಲ್ಲಿನ ನೀರೆತ್ತುವ ಎರಡು ಪಂಪ್​ಗಳು ಕೆಟ್ಟಿದ್ದರಿಂದ ಸಮಸ್ಯೆಯಾಗಿದೆ. ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪಂಪ್ ದುರಸ್ತಿಪಡಿಸಲು ತಡವಾಗಿದ್ದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಈಗ ಎಲ್ಲವೂ ಸರಿಯಾಗಿ ಪಟ್ಟಣಕ್ಕೆ ನೀರು ಬಂದಿದೆ. ಸೋಮವಾರದಿಂದ ನೀರು ಸರಬರಾಜಾಗಲಿದೆ’ ಎಂದು ತಿಳಿಸಿದರು.

- Advertisement -

Stay connected

278,480FansLike
564FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...