ಚಿತ್ರದುರ್ಗ: ಕೇಂದ್ರದ ಸಾಮಾಜಿಕ ಭದ್ರತೆ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ (ಪಿಎಂಜೆಜೆವೈ), ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಗಳಡಿ (ಪಿಎಂಎಸ್‌ಬಿವೈ) ಜಿಲ್ಲೆಯಲ್ಲಿ ಹೆಚ್ಚಿನ ನಾಗರಿಕರ ನೋಂದಣಿಗೆ ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಶನಿವಾರ ಯೋಜನೆಗಳ ನೋಂದಣಿ ಮತ್ತು ಇಲಾಖೆಗಳಲ್ಲಿ ಕ್ಲೇಮ್ ಮಾಡದಿರುವ ಖಾತೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾದಡಿ 18ರಿಂದ 50 ವಯಸ್ಸಿನವರೆಗಿನ ನಾಗರಿಕರು 436 ರೂ., ಪ್ರಧಾನಮಂತ್ರಿ ಸುರಕ್ಷಾ ಬಿಮಾದಡಿ 18ರಿಂದ 70 ವಯಸ್ಸಿನವರೆಗಿನ ನಾಗರಿಕರು 20 ರೂ. ಪ್ರೀಮಿಯಂ ಮೊತ್ತವನ್ನು ವಾರ್ಷಿಕವಾಗಿ ಪಾವತಿಸಿದರೆ, ಯಾವುದೇ ರೀತಿಯ ಮರಣ ಸಂಭವಿಸಿದರೂ, ಅವರ ವಾರಸುದಾರಿಗೆ ಪ್ರತಿ ಯೋಜನೆಯಡಿ 2 ಲಕ್ಷ ರೂ. ವರೆಗೆ ವಿಮಾ ಪರಿಹಾರ ದೊರೆಯಲಿದೆ. ಆದ್ದರಿಂದ ಜಿಲ್ಲೆಯ ಸರ್ಕಾರಿ ಅಧಿಕಾರಿ, ನೌಕರರು ಪ್ರತಿಯೊಬ್ಬ ಅರ್ಹ ನಾಗರಿಕರು ಈ ಯೋಜನೆಗಳಡಿ ನೋಂದಾಯಿಸಿಕೊಳ್ಳವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕುಮಾರ್‌ಬಾಬು ಮಾತನಾಡಿ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಪಘಾತ ವಿಮೆಯಾಗಿದೆ ಎಂದರು.
ಜಿಪಂ ಮುಖ್ಯಲೆಕ್ಕಾಧಿಕಾರಿ ಡಿ.ಆರ್.ಮಧು, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್, ಡಿಡಿಪಿಐ ಮಂಜುನಾಥ್ ಮತ್ತಿತರ ಅಧಿಕಾರಿಗಳಿದ್ದರು.
ಜೀವನ್ ಜ್ಯೋತಿ, ಸುರಕ್ಷಾ ಬಿಮಾ ನೋಂದಣಿ ಹೆಚ್ಚಿಸಿ
You Might Also Like
ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ
ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…
ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…
ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…
ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…