ತಿಪಟೂರು: ಜಾತ್ರೆ ಸಂದರ್ಭ ಅಕ್ರಮವಾಗಿ ಜೂಜಾಡುತ್ತಿದ್ದವರನ್ನು ತಡೆಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆದಿದ್ದು, ಓರ್ವ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಹೊನ್ನವಳ್ಳಿ ಹೋಬಳಿ ಘಟಕಿನಕೆರೆಯಲ್ಲಿ ಬುಧವಾರ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಸಮೀಪದ ತೋಟದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಮಾಹಿತಿ ತಿಳಿದ ಹೊನ್ನವಳ್ಳಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಂಧಿಸಲು ಮುಂದಾದಾಗ ಇದು ನಮ್ಮೂರಿನ ಜಾತ್ರೆ, ನಮ್ಮ ಇಷ್ಟವೆಂದ ಕೆಲವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ನಂದೀಶ್ಗೆ ಗಾಯಗಳಾಗಿವೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಠಾಣೆಯ ಎಸ್ಐ ಆರ್.ರಾಜೇಶ್ ಮತ್ತು ಸಿಬ್ಬಂದಿ ಜೂಜಾಡುತ್ತಿದ್ದ ಹರೀಶ್ ಮತ್ತು ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ. ಉಳಿದ 13 ಆರೋಪಿಗಳು ಪರಾರಿಯಾಗಿದ್ದಾರೆ. ಪಣಕ್ಕಿಟ್ಟಿದ್ದ 2,180 ರೂ. ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೂಜಾಡುತ್ತಿದ್ದವರಿಂದ ಪೊಲೀಸರ ಮೇಲೆ ಹಲ್ಲೆ
You Might Also Like
ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…