
ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಜೂ.21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಗ್ಗೆ 11.30 ಗಂಟೆಗೆ ಮಲೈಮಹದೇಶ್ವರಬೆಟ್ಟಕ್ಕೆ ಆಗಮಿಸುವರು. ಬಳಿಕ ಮಲೆಮಹದೇಶ್ವರಬೆಟ್ಟದ ನಾಗಮಲೆ ಭವನದ ಹೊರ ಆವರಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಹಾಗೂ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಇವರ ವತಿಯಿಂದ ಆಯೋಜಿಸಿರುವ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ-2025ರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
TAGGED:cha chamarajanagara news