ಜೆಡಿಎಸ್​ಗೆ ಬಿಜೆಪಿ ಜತೆ ಮೈತ್ರಿಯೇ ಸೂಕ್ತ!

ಬಳ್ಳಾರಿ: ಜನತಾ ಪರಿವಾರ ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ ಆಗಿದ್ದು, ಬಿಜೆಪಿ ಜತೆಗಿನ ಮೈತ್ರಿಯೇ ಜೆಡಿಎಸ್​ಗೆ ಸೂಕ್ತ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದರೆ ಎಚ್.ಡಿ.ಕುಮಾರಸ್ವಾಮಿ ತೊಂದರೆ ಅನುಭವಿಸಬೇಕಾಗಿರಲಿಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿಯಲ್ಲಿ ಹೊಂದಾಣಿಕೆ ಇಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿ ಇದೆಯೋ, ಇಲ್ಲವೋ? ಎನ್ನುವ ವಾತಾವರಣ ಇದೆ. ಎರಡೂ ಪಕ್ಷಗಳ ನಾಯಕರ ಧೋರಣೆಗಳನ್ನು ನೋಡಿ ಜನ ಬೇಸತ್ತಿದ್ದಾರೆ ಎಂದು ಆರೋಪಿಸಿದರು.