20.4 C
Bengaluru
Sunday, January 19, 2020

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು

ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ ಹೋಗಿದ್ದಾರೆ. ಇನ್ನು ನಾರಾಯಣಗೌಡ ಯಾವ ಲೆಕ್ಕ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಬಿಜೆಪಿ ನೂತನ ಶಾಸಕ ಕೆ.ಸಿ.ನಾರಾಯಣಗೌಡ ವಿರುದ್ಧ ಕಿಡಿಕಾರಿದರು.
ಭಾನುವಾರ ಪತ್ನಿ ನಾಗಮ್ಮ ಅವರೊಂದಿಗೆ ತಾಲೂಕಿನ ತೊಣ್ಣೂರು ಕೆರೆಗೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದ ಅವರು, ಆಕಾಶಕ್ಕೆ ಉಗಿದರೆ ಉಗುಳು ತಮ್ಮ ಮುಖದ ಮೇಲೆ ಬೀಳುತ್ತದೆ ಎಂಬುದನ್ನು ಅರಿತು ನಾರಾಯಣಗೌಡರು ಮಾತನಾಡಿದರೆ ಒಳಿತು. ಕಳೆದೆರಡು ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷದ ವರಿಷ್ಠರು ನಾರಾಯಣಗೌಡ ಅವರಿಗೆ ಬಿ ಫಾರಂ ನೀಡಲು ನಿರಾಕರಿಸಿದ್ದರು. ಪಕ್ಷದ ವರಿಷ್ಠರ ಮನವೊಲಿಸಿ ಬಿ ಫಾರಂ ಕೊಡಿಸಿದ್ದು ನಾನೇ. ಬಾಂಬೆಯಲ್ಲಿ ವ್ಯವಹಾರ ಮಾಡಲು ನಾನು ಸಹಕಾರ ನೀಡಿದ್ದೇನೆ. ನನ್ನಿಂದ ಸಹಾಯ ಪಡೆದು ನನ್ನ ವಿರುದ್ಧವೇ ಮಾತನಾಡುವ ಅವರಿಗೆ ಯಾವ ಯೋಗ್ಯತೆ ಮತ್ತು ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಜೆಡಿಎಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂಬ ನಾರಾಯಣಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿ ಹಳೇ ಮೈಸೂರು ಪ್ರಾಂತ್ಯದ ಯಾವೊಬ್ಬ ಶಾಸಕರು ಅವರ ಸಂಪರ್ಕದಲ್ಲಿಲ್ಲ. ಹಾಗೇನಾದರೂ ಇದ್ದರೆ ಸ್ಪಷ್ಟಪಡಿಸಲಿ. ಮತದಾರರು ಅಶೀರ್ವಾದ ಮಾಡಿದ್ದಾರೆ. ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲಿ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಗೆ ನೀಡಿರುವ 8.5 ಸಾವಿರ ಕೋಟಿ ರೂ. ಅನುದಾನವನ್ನು ಅನುಷ್ಠಾನಗೊಳಿಸಲಿ. ಎಚ್ಚರ ತಪ್ಪಿ ಮಾತನಾಡಿದರೆ ಅವರ ಮಾತುಗಳೇ ತಿರುಗು ಬಾಣವಾಗಲಿದೆ ಎಂದು ಎಚ್ಚರಿಸಿದರು.
ನನ್ನ ಮೇಲಿನ ಜಿದ್ದಿನಿಂದ ಸಣ್ಣ ನೀರಾವರಿ ಇಲಾಖೆ ಖಾತೆ ಪಡೆದು ನಾನು ಮಂತ್ರಿಯಾಗಿದ್ದ ವೇಳೆ ಕೆ.ಆರ್.ಪೇಟೆ ಕ್ಷೇತ್ರಕ್ಕೆ ನೀಡಿದ ಅನುದಾನವನ್ನೇ ನನ್ನ ಮೇಲುಕೋಟೆ ಕ್ಷೇತ್ರಕ್ಕೆ ನೀಡಿದರೆ ಸಾಕು ಎಂದು ವ್ಯಂಗ್ಯವಾಡಿದರು.
ಕೆರೆತೊಣ್ಣೂರು ಕೆರೆ ಅಭಿವೃದ್ಧಿ : 10 ಕೋಟಿ ರೂ. ಅನುದಾನದಲ್ಲಿ ತೊಣ್ಣೂರು ಕೆರೆ ಅಭಿವೃದ್ಧಿಪಡಿಸಲಾಗುವುದು. ಕೆರೆಯ ಎರಡು ಬೆಟ್ಟಗಳ ನಡುವೆ ತೂಗು ಸೇತುವೆ ಹಾಗೂ ಕೆರೆಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಂಡು ತೊಣ್ಣೂರು ಕೆೆರೆಯನ್ನು ವಿಶ್ವದರ್ಜೆ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಸರ್ಕಾರ ರೈತರ ಹಿತದೃಷ್ಟಿಯಿಂದ ಕಬ್ಬು ಮತ್ತು ಭತ್ತಕ್ಕೆ ಬೆಂಬಲ ಬೆಲೆ ನೀಡುವುದರ ಜತೆಗೆ ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...