More

  ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ

  ಮದ್ದೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ಪಷ್ಟ ಬಹುಮತ ಪಡೆಯುವುದರೊಂದಿಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ನಾಗಮಂಗಲ ವಿಧಾನಕ್ಷೇತ್ರದ ಶಾಸಕ ಸುರೇಶ್‌ಗೌಡ ವಿಶ್ವಾಸ ವ್ಯಕ್ತಪಡಿಸಿದರು.

  ತಾಲೂಕಿನ ಕೌಡ್ಲೆ ಮತ್ತು ಹಳೇಹಳ್ಳಿ ಗ್ರಾಮಗಳಲ್ಲಿ 1.60 ಕೋಟಿ ರೂ. ವೆಚ್ಚದಲ್ಲಿ ಸಿಸಿ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿ, ರಾಜ್ಯದ ಅಭಿವೃದ್ಧಿ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ ಎಂಬುದು ಜನತೆಗೆ ಗೊತ್ತಾಗಿದೆ. ಆದ್ದರಿಂದ, ಮತದಾರರು ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅನ್ನು ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದಾರೆ ಎಂದರು.

  ಜೆಡಿಎಸ್ ಅಧಿಕಾರಕ್ಕೆ ಬಂದರೆ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗುತ್ತಾರೆ. ಮುಸ್ಲಿಂ ಅಥವಾ ದಲಿತ ಸಮುದಾಯವನ್ನು ಉಪ ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ. ಇದನ್ನು ಬೇರೆಯವರು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ ಎಂದರು.

  ರಾಜಕಾರಣವನ್ನು ನೇರವಾಗಿ ಮಾಡಬೇಕು. ಬೆಳಗ್ಗೆ ಯಡಿಯೂರಪ್ಪ, ರಾತ್ರಿ ಸಿದ್ದರಾಮಯ್ಯ ಅವರ ಜತೆ ಇದ್ದುಕೊಂಡು ಕುಮಾರಸ್ವಾಮಿ ಅವರ ಬಗ್ಗೆ ಮಾತಾನಾಡುವ ನೈತಿಕತೆ ಇಲ್ಲ ಎಂದು ಎನ್.ಚಲುವರಾಯಸ್ವಾಮಿ ವಿರುದ್ಧ ಕಿಡಿಕಾರಿದರು.

  ಚುಂಚಶ್ರೀ ನಿರ್ಮಲಾ ನಂದನಾಥಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಶ್ರೀಗಳು ಮುಖ್ಯಮಂತ್ರಿ ಸ್ಥಾನಕ್ಕಿಂತ ದೊಡ್ಡ ಸ್ಥಾನದಲ್ಲಿದ್ದಾರೆ ಎಂದರು.

  ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಬಿದರಕೋಟೆ ಕುಶ, ಮುಖಂಡರಾದ ಚಿಕ್ಕೊನಹಳ್ಳಿ ತಮ್ಮಯ್ಯ, ರಾಮಕೃಷ್ಣ, ಸಿದ್ದಲಿಂಗಯ್ಯ, ಚಂದ್ರು, ಹೊಂಬಾಳೆ ಚೇತನ್, ನಾಗೇಶ್, ಹರೀಶ್, ಶ್ರೀಪತಿ, ಸ್ವಾಮಿ,ಕೆಂಪರಾಜು, ಗೌರಮ್ಮ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts