20.3 C
Bangalore
Sunday, December 15, 2019

ಜೋಡೆತ್ತುಗಳ ಆರ್ಭಟಕ್ಕೆ ಕೈ ಮಂಕು

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ಹಿರೇಕೆರೂರ: ಜಿಲ್ಲೆಯ ಹಿರೇಕೆರೂರ ಕ್ಷೇತ್ರದ ಉಪಚುನಾವಣೆ ಕಣವು ನಾಮಪತ್ರ ಸಲ್ಲಿಕೆಯೊಂದಿಗೆ ರಂಗೇರಿದೆ. ಬಿಜೆಪಿಯ ಜೋಡೆತ್ತುಗಳಾದ ಬಿ.ಸಿ.ಪಾಟೀಲ ಹಾಗೂ ಯು.ಬಿ.ಬಣಕಾರ ಅರ್ಭಟದ ಹಿನ್ನೆಲೆಯಲ್ಲಿ, ಕ್ಷೇತ್ರದ ಸ್ಥಳೀಯ ಸಂಸ್ಥೆಗಳಲ್ಲಿನ ಕಾಂಗ್ರೆಸ್​ನ ಸಾಕಷ್ಟು ಜನಪ್ರತಿನಿಧಿಗಳು ಸಾಮೂಹಿಕವಾಗಿ ಕಮಲದ ತೆಕ್ಕೆಗೆ ಬರುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ ಪಾಳಯದಲ್ಲಿ ಮಂಕುಕವಿದಂತಾಗಿದೆ.

ಕಳೆದ 2 ದಶಕಗಳಿಂದ ಕ್ಷೇತ್ರದಲ್ಲಿ ಸಂಪೂರ್ಣ ಹಿಡಿತ ಸಾಧಿಸಿದ್ದ ಬಿ.ಸಿ. ಪಾಟೀಲ ಹಾಗೂ ಯು.ಬಿ. ಬಣಕಾರ ಈಗ ಒಂದಾಗಿರುವುದರಿಂದ ಕಾಂಗ್ರೆಸ್​ನಿಂದ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಹಿಂದಿನ ಚುನಾವಣೆಯಲ್ಲಿ ಕೇವಲ 555 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದ ಬಿ.ಸಿ. ಪಾಟೀಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆಯೇ ಕಾಂಗ್ರೆಸ್​ನಲ್ಲಿ ಬಿ.ಸಿ. ಪಾಟೀಲರೊಂದಿಗಿದ್ದ ಚುನಾಯಿತ ಸದಸ್ಯರೆಲ್ಲರೂ ಸಾಮೂಹಿಕವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸ್ಥಳೀಯ ತಾಪಂ ಹಾಗೂ ಪಪಂನಲ್ಲಿ ವಿಪಕ್ಷವೂ ಇಲ್ಲದಂತಹ ವಾತಾವರಣವು ಚುನಾವಣೆ ಬಹಿರಂಗ ಪ್ರಚಾರ ಆರಂಭಕ್ಕೂ ಮುನ್ನವೇ ನಿರ್ವಣವಾಗಿದೆ.

ಅಲ್ಲದೆ, ಕಾಂಗ್ರೆಸ್ ಅಭ್ಯರ್ಥಿ ಬಿ.ಎಚ್. ಬನ್ನಿಕೋಡರು ಸಕ್ರಿಯ ರಾಜಕಾರಣದಿಂದ 2013ರಲ್ಲಿಯೇ ಹಿಂದೆ ಸರಿದಿದ್ದರು. 2018ರ ಚುನಾವಣೆಯಲ್ಲಿ ಬಿ.ಸಿ. ಪಾಟೀಲರನ್ನು ಬೆಂಬಲಿಸಿದ್ದರು. ಬದಲಾದ ರಾಜಕೀಯದಲ್ಲಿ ಬಿ.ಸಿ. ಪಾಟೀಲರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ತೊರೆದು ಬಂದರು. ಹೀಗಾಗಿ, ಕಾಂಗ್ರೆಸ್​ನಲ್ಲಿ ಪರ್ಯಾಯ ಶಕ್ತಿಯೇ ಇಲ್ಲದಂತಾಗಿತ್ತು. ಇದರಿಂದ ಅನಿವಾರ್ಯವಾಗಿ ಕಾಂಗ್ರೆಸ್ ಪಕ್ಷವು ಬಿ.ಎಚ್. ಬನ್ನಿಕೋಡರಿಗೆ ಟಿಕೆಟ್ ನೀಡಿ ಅಖಾಡಕ್ಕಿಳಿಸಿದೆ.

ಅಭಿವೃದ್ಧಿ ಆಶಾಕಿರಣದಲ್ಲಿ ಜನತೆ: ಹಿರೇಕೆರೂರ ಕ್ಷೇತ್ರದಲ್ಲಿ ಕಳೆದ 2 ದಶಕಗಳಿಂದ ಈವರೆಗೆ ಯಾರೊಬ್ಬರು ಸಚಿವ ಸ್ಥಾನಮಾನ ಗಳಿಸಿಲ್ಲ. ಅಲ್ಲದೆ, ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಪಕ್ಷದ ಬದಲು ಅನ್ಯ ಪಕ್ಷದ ಅಭ್ಯರ್ಥಿಗಳೇ ಇಲ್ಲಿ ಆಯ್ಕೆಯಾಗಿದ್ದಾರೆ. ಇದೀಗ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರದಲ್ಲಿದ್ದು, ಬಿ.ಸಿ. ಪಾಟೀಲರು ಗೆದ್ದರೆ ಸಚಿವ ಸ್ಥಾನವೂ ಖಾತ್ರಿಯಾಗಿದೆ. ಈಗಾಗಲೇ ನೂರಾರು ಕೋಟಿ ರೂ.ಗಳ ಅನುದಾನವನ್ನು ಸಿಎಂ ಇತ್ತೀಚೆಗೆ ಬಿಡುಗಡೆಗೊಳಿಸಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ನೆರವೇರಿಸಿ ಹೋಗಿದ್ದಾರೆ. ಶಂಕರರಾವ್ ಗುಬ್ಬಿ, ಬಿ.ಜಿ. ಬಣಕಾರ ನಂತರ ಕ್ಷೇತ್ರದಲ್ಲಿ ಬಿ.ಸಿ. ಪಾಟೀಲರಿಗೆ ಸಚಿವ ಸ್ಥಾನ ದೊರೆತು, ಕ್ಷೇತ್ರದ ಅಭಿವೃದ್ಧಿಯೂ ಆಗಲಿದೆ ಎಂಬ ಆಶಾಭಾವನೆ ಕ್ಷೇತ್ರದ ಜನರಲ್ಲಿ ಸದ್ಯ ಮೂಡಿದೆ.

ಅನುಕಂಪದ ಅಲೆಯಲ್ಲಿ ಬನ್ನಿಕೋಡ? ಕಾಂಗ್ರೆಸ್​ನಿಂದ ಸ್ಪರ್ಧಿಸಿರುವ ಬಿ.ಎಚ್. ಬನ್ನಿಕೋಡರು ಕ್ಷೇತ್ರದಲ್ಲಿ ಈಗಾಗಲೇ 1989 ಹಾಗೂ 1999ರಲ್ಲಿ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 2004ರಲ್ಲಿ ಕಾಂಗ್ರೆಸ್​ನಿಂದ, 2008ರಲ್ಲಿ ಜೆಡಿಎಸ್​ನಿಂದ ಹಾಗೂ 2013ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದರೂ ಕ್ಷೇತ್ರದ ಜನತೆ ಅವರಿಗೆ ಮನ್ನಣೆ ನೀಡಿಲ್ಲ. 2018ರಲ್ಲಿ ಬಿ.ಸಿ. ಪಾಟೀಲರನ್ನು ಬೆಂಬಲಿಸಿ ಇದೀಗ ಅವರ ವಿರುದ್ಧವೇ ಅಖಾಡಕ್ಕಿಳಿದಿದ್ದಾರೆ. 2 ದಶಕಗಳಿಂದ ಅಧಿಕಾರದಿಂದ ದೂರವಿರುವ ಅನುಕಂಪದ ಅಲೆ ನೆಚ್ಚಿಕೊಂಡು ಬನ್ನಿಕೋಡರು ಪ್ರಚಾರಕ್ಕಿಳಿದಿದ್ದಾರೆ.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...