20.4 C
Bengaluru
Sunday, January 19, 2020

ಜೋಳ ಬೆಳೆಗೆ ಹುಳು ಬಾಧೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ನರೇಗಲ್ಲ: ಪ್ರಸಕ್ತ ಸಾಲಿನ ಹಿಂಗಾರು ಮಳೆ ಹೆಚ್ಚಾಗಿದ್ದರಿಂದ ಜಮೀನುಗಳಲ್ಲಿ ಬಿತ್ತನೆ ಮಾಡಲಾದ ಬಹುತೇಕ ಬೆಳೆಗಳು ಬೆಳೆಗಳು ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರಿತ್ಯದಿಂದಾಗಿ ಬಿಳಿ ಜೋಳದ ಬೆಳೆಗೆ ಕಾಂಡ ಕೊರೆಯುವ ಹಾಗೂ ಲದ್ದಿಹುಳುಗಳ ಕಾಟ ಹೆಚ್ಚಾಗಿದ್ದು ರೈತರನ್ನು ಕಂಗಾಲಾಗಿಸಿದೆ.

ಹಿಂಗಾರು ಬಿಳಿ ಜೋಳದ ಬೆಳೆಗೂ ಎಲೆ ತಿನ್ನುವ ಕಾಂಡ ಕೊರೆಯವ ಹುಳುಗಳ ಹೆಚ್ಚಾಗಿ ಕಾಣಿಸಿಕೊಂಡಿದೆ. ನರೇಗಲ್ಲ ಹೋಬಳಿಯ ಅಬ್ಬಿಗೇರಿ, ಯರೇಬೇಲೇರಿ, ನಾಗರಾಳ, ಕುರುಡಗಿ, ಗುಜಮಾಗಡಿ, ಡ.ಸ. ಹಡಗಲಿ, ಜಕ್ಕಲಿ, ಮಾರನಬಸರಿ, ಬೂದಿಹಾಳ, ನಿಡಗುಂದಿ, ನಿಡಗುಂದಿಕೊಪ್ಪ, ಹಾಲಕೆರೆ, ಹೊಸಳ್ಳಿ, ಕಳಕಾಪುರ ಸೇರಿ ಅನೇಕ ಹಳ್ಳಿಗಳಿಲ್ಲಿ ಜೋಳದ ಬೆಳೆಗೆ ಹುಳುಗಳ ಬಾಧೆ ಹೆಚ್ಚಾಗಿದ್ದು, ಹಸಿರು ಎಲೆ ಹಾಗೂ ಕಾಂಡವನ್ನು ತಿಂದು ಹಾಕುತ್ತಿವೆ. ಸಸಿಗಳು ಒಣಗುವಂತೆ ಮಾಡುತ್ತಿವೆ.

6200 ಹೆಕ್ಟೇರ್​ನಲ್ಲಿ ಜೋಳದ ಬೆಳೆ: ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಈ ವರ್ಷದ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿರುವುದರಿಂದ ರೈತರು ಈ ಭಾಗದಲ್ಲಿ ಹೆಚ್ಚಾಗಿ ಬಿಳಿ ಜೋಳ, ಕಡಲೆ, ಗೋಧಿ ಸೇರಿ 38 ಸಾವಿರ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ಹೊಲಗಳಲ್ಲಿ ಬಿತ್ತನೆ ಮಾಡಲಾಗಿದೆ. ಅದರಲ್ಲಿ 6200 ಹೆಕ್ಟೇರ್​ಗೂ ಹೆಚ್ಚು ಪ್ರದೇಶದಲ್ಲಿ ಜೋಳ ಬೆಳೆ ಬೆಳೆದಿದ್ದು, ಹುಳು ಕಾಟ ಹೆಚ್ಚಾಗಿದ್ದು, ರೈತರನ್ನು ಆತಂಕಗೊಳಿಸಿದೆ.

ಕೀಟಬಾಧೆಯ ಲಕ್ಷಣ: ಜೋಳದ ಬೆಳೆಯ ಬೆಳವಣಿಗೆ ಹಂತದಲ್ಲಿ ಮರಿಹುಳು ಸಂಜೆ ಹೊತ್ತಿನಲ್ಲಿ ಸುಳಿ ಎಲೆಗಳನ್ನು ತಿಂದು ಗಿಡಗಳಲ್ಲಿ ಲದ್ದಿ ಇಡುತ್ತದೆ. ಇದರಿಂದ ಗಿಡಗಳು ಬೆಳೆದಂತೆ ಹಾನಿಗೊಳಗಾಗಿರುವ ಎಲೆಗಳು ನಾಶ ಹೊಂದಿ ಗಿಡಗಳ ಬೆಳೆವಣಿಗೆ ಕುಂಠಿತವಾಗುತ್ತದೆ. ಪ್ರಾರಂಭದಲ್ಲಿ ಹುಳು ಜೋಳದ ಎಲೆಯಲ್ಲಿ ಅಡ್ಡಡ್ಡ ಸಾಲಾಗಿ ರಂಧ್ರಗಳು ಕಾಣುವವು. ಎಲೆಗಳ ಮಧ್ಯಭಾಗದಲ್ಲಿ ಕೀಟಗಳು ಕೊರೆದು ತಿನ್ನುತ್ತವೆ. ಮರಿ ಕೀಟಗಳು ಕಾಂಡದ ಮಧ್ಯಭಾಗವನ್ನು ಸೇರಿ ಕಾಂಡ ಕೊರೆಯುವುದರಿಂದ ಸುಳಿ ಸಾಯುವುದು. ಹುಳುಗಳ ಸಂಖ್ಯೆ ಹೆಚ್ಚಾದಾಗ ಹಾನಿಯ ಪ್ರಮಾಣ ಹೆಚ್ಚುತ್ತದೆ. ಅಲ್ಲದೆ, ಬೆಳೆದ ದಂಟು ಕೊರೆಯುವುದರಿಂದ ಪೊಳ್ಳು ಕಾಂಡ, ಭಾಗಶಃ ಜೊಳ್ಳು ಆಗುವುದು ಶೇ. 25 ರಿಂದ 30 ರಷ್ಟು ಹಾನಿಯಾಗುವ ಸಾಧ್ಯತೆಗಳು ಇರುತ್ತದೆ.

ಹವಾಮಾನ ವೈಪರಿತ್ಯದ ಪರಿಣಾಮವಾಗಿ ಹಿಂಗಾರು ಬಿಳಿ ಜೋಳದ ಬೆಳೆಗೆ ಕಾಂಡ ಕೊರೆಯುವ ಹುಳು ಹಾಗೂ ಲದ್ದಿ ಹುಳುಗಳ ಬಾಧೆ ಕಂಡು ಬಂದಿದೆ. ಪ್ರತಿ ಎಕರೆಗೆ 3 ಕಿ.ಗ್ರಾಂ.ನಂತೆ ಕಾಬೋಫ್ಯುರಾನ್ ಶೇ.3 ರ ಹರಳು ಅಥವಾ ಕಾರ್ಬರಿಲ್ ಶೇ.4 ಹರಳು ಅಥವಾ ಲಿಂಡೇನ್ ಶೇ. 1ರ ಹರಳನ್ನು ಸುಳಿಯಲ್ಲಿ ಹಾಕಬೇಕು. ಅಥವಾ ಕ್ಲೊರಾಂಟ್ರಿನಿಲಿಪ್ರೋಲ್ 18.5 ಎಸ್.ಸಿ 0.2 ಪ್ರತಿ ಲೀ. ನೀರಿಗೆ ಬೆರಸಿ 20-25 ದಿವಸದ ಬೆಳೆಗೆ ಸಿಂಪಡಿಸಬೇಕು.
| ಜಗದೀಶ ಹಾದಿಮನಿ, ಕೃಷಿ ಸಂಪರ್ಕ ಇಲಾಖೆ ಅಧಿಕಾರಿ ನರೇಗಲ್ಲ

————

ಹಿಂಗಾರಿನ ಪ್ರಮುಖ ಅಹಾರ ಬೆಳೆಯಾದ ಜೋಳ ಪ್ರಾರಂಭದಲ್ಲಿ ಉತ್ತಮವಾಗಿ ಬೆಳೆದಿದ್ದು, ಈಗ ಕಾಂಡ ಕೊರೆಯುವ ಹುಳು ಹಾಗೂ ಲದ್ದಿ ಹುಳುಗಳ ಕಾಟ ಹೆಚ್ಚಾಗಿದೆ. ಕೇವಲ ಕಡಲೆ ಬೆಳೆಗೆ ಮಾತ್ರ ರಾಸಾಯನಿಕಗಳ ಸಿಂಪಡಣೆ ಮಾಡಲಾಗುತ್ತಿತ್ತು, ಆದರೆ, ಈ ಬಾರಿ ಜೋಳದ ಬೆಳೆಗೂ ರಾಸಾಯನಿಕ ಸಿಂಪಡಣೆ ಅನಿವಾರ್ಯವಾಗಿದೆ. ಖರ್ಚು ಸಹ ಹೆಚ್ಚಾಗಿದ್ದು, ನಿರೀಕ್ಷಿತ ಇಳುವರಿ ಬರುವುದು ಸಂಶಯವಿದೆ.
| ಬಸವರಾಜ ತಳವಾರ, ಅಬ್ಬಿಗೇರಿ ರೈತ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...