20.3 C
Bangalore
Sunday, December 15, 2019

ಟೆಂಪೋ ಟ್ರಾವೆಲರ್ ಪಲ್ಟಿ ಐವರಿಗೆ ಗಾಯ

Latest News

ವಿಶ್ವಸುಂದರಿ ವಿಜೇತೆಗೆ ಕೊನೆಯ ಪ್ರಶ್ನೋತ್ತರ ಸುತ್ತಿನಲ್ಲಿ ಕೇಳಿದ ಪ್ರಶ್ನೆಗಾಳವುವು? ಜಮೈಕಾ ಬ್ಯೂಟಿಯ ಉತ್ತರ ಹೇಗಿತ್ತು?

ಲಂಡನ್​: 2019ನೇ ಸಾಲಿನ ವಿಶ್ವಸುಂದರಿ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತೆಯಾಗುವ ಮೂಲಕ ಜಮೈಕಾದ ಟೋನಿ ಅನ್​ ಸಿಂಗ್​ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಸ್ಪರ್ಧೆಯ ಕೊನೆಯ ಪ್ರಶ್ನೋತ್ತರ...

ಶಿವಸೇನೆ ಕೈಯಲ್ಲಿರುವ ಗೃಹ ಇಲಾಖೆ ಮೇಲೆ ಎನ್​ಸಿಪಿ ಕಣ್ಣು; ಅಜಿತ್​ ಪವಾರ್​ಗೆ ಜವಾಬ್ದಾರಿ ವಹಿಸುವ ಪ್ರಯತ್ನ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್​ ನೇತೃತ್ವದ ಸರ್ಕಾರ ರಚನೆಯಾಗಿದ್ದರೂ ಇನ್ನು ಸಚಿವ ಸಂಪುಟ ರಚನೆಯಾಗಿಲ್ಲ. ಸದ್ಯ ಯಾವ ಪಕ್ಷಗಳಿಗೆ ಯಾವ ಖಾತೆ ಎಂಬುದನ್ನು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ...

ಸ್ಮಾರಕದ ಮೇಲೆ ಕುಳಿತ ಪಾರಿವಾಳದಲ್ಲಿ ನೆಚ್ಚಿನ ನಟ ದಿ.ಅಂಬರೀಶ್​ ಅವರನ್ನು ಕಂಡ ಅಭಿಮಾನಿಗಳು

ಮಂಡ್ಯ: ರೆಬಲ್​ಸ್ಟಾರ್​ ದಿ.ಅಂಬರೀಶ್​ ಅವರ ಸ್ಮಾರಕವನ್ನು ಯಲಿಯೂರು ಗ್ರಾಮದಲ್ಲಿ ಪುತ್ರ ಅಭಿಷೇಕ್​ ಅಂಬರೀಶ್​ ಲೋಕಾರ್ಪಣೆ ಮಾಡಿದರು. ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಅಭಿಮಾನಿಗಳು ದಿ....

ವಾಣಿಜ್ಯ ಬಾಂಕ್​ಗಳ ನಿಯಮಗಳನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ, ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಆರ್​ಬಿಐ ಚಿಂತನೆ

ನವದೆಹಲಿ: ವಾಣಿಜ್ಯ ಬಾಂಕ್​ಗಳಲ್ಲಿ ಅಳವಡಿಸಲಾಗಿರುವ ಜಾರಿ ನೀತಿ ಮತ್ತು ಚೌಕಟ್ಟನ್ನು ಬ್ಯಾಂಕೇತರ ಹಣಕಾಸು ಸಂಸ್ಥೆ(ಎನ್​ಬಿಎಫ್​ಸಿ) ಮತ್ತು ಸಹಕಾರಿ ಬ್ಯಾಂಕ್​​ಗಳಿಗೂ ವಿಸ್ತರಿಸಲು ಭಾರತೀಯ ರಿಸರ್ವ್​...

ಕಬ್ಬುಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಮಾತುಕತೆ ವಿಫಲ: ಮಂಗಳವಾರದಿಂದ ಕಾರ್ಖಾನೆಗೆ ಕಬ್ಬು ಪೂರೈಕೆ ಬಂದ್​

ಬಾಗಲಕೋಟೆ: ಕಬ್ಬು ಕಟಾವು ಹಾಗೂ ಸಾಗಣಿಕೆ ವೆಚ್ಚ ಪಾವತಿ ಮಾಡಲು ಜಿಲ್ಲೆಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಂಗಳವಾರದಿಂದ ಸಕ್ಕರೆ...

ನರಗುಂದ: ಮದುವೆ ಮುಗಿಸಿಕೊಂಡು ವಾಪಸ್ ಮರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಐವರು ಗಾಯಗೊಂಡಿರುವ ಘಟನೆ ಸಮೀಪದ ಕುರ್ಲಗೇರಿ ರಸ್ತೆಯಲ್ಲಿರುವ ಕುರ್ಲಗೇರಿ ವೃತ್ತದ ಬಳಿ ಭಾನುವಾರ ರಾತ್ರಿ ಸಂಭವಿಸಿದೆ.
ಟೆಂಪೋ ಟ್ರಾವೆಲರ್ ವಾಹನದ ಚಾಲಕ ಮಂಜುನಾಥ ಹಕಾರಿ, ಯಶಸ್ವಿನಿ ಶಿವಕುಮಾರ, ಅರ್ಪಿತಾ ಕೋಟ್ರೇಶ, ಸಿದ್ದಪ್ಪ ಕೋಟ್ರೇಶ, ಶಿವಕುಮಾರ ಕೆ.ಎಸ್. ಎಂಬುವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಗಲಕೋಟೆಯಲ್ಲಿ ಏರ್ಪಡಿಸಿದ್ದ ಮದುವೆ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಪಟ್ಟಣದ 12 ಜನರು ಟೆಂಪೋ ಟ್ರಾವೆಲರ್ ಮೂಲಕ ತೆರಳಿದ್ದರು. ಮದುವೆ ಮುಗಿಸಿಕೊಂಡು ನರಗುಂದ- ಗದಗ ಮಾರ್ಗವಾಗಿ ವಾಪಸ್ ಹರಪನಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಟೆಂಪೋ ಟ್ರಾವೆಲರ್​ನಲ್ಲಿದ್ದ 12 ಜನರ ಪೈಕಿ 5 ಜನರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದ 7 ಜನರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಕುರ್ಲಗೇರಿ ಕ್ರಾಸ್ ಹತ್ತಿರ ವಾಹನ ಚಲಿಸುತ್ತಿದ್ದಾಗ ಟೆಂಪೋದಲ್ಲಿದ್ದವರು ಕೂಗಿದರು ಎಂದು ಚಾಲಕ ಹಿಂದೆ ನೋಡಿದ. ಈ ಸಂದರ್ಭದಲ್ಲಿ ವಾಹನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿ ಬಿದ್ದಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಾತ್ರಿ 7 ಗಂಟೆ ವೇಳೆಗೆ ಘಟನೆ ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ವಿಜಯವಾಣಿಗೆ ತಿಳಿಸಿದ್ದಾರೆ. ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುರ್ಲಗೇರಿ ವೃತ್ತದ ಹಲವಾರು ಅಪಘಾತಗಳು ಸಂಭವಿಸುತ್ತಿದ್ದು, ಡಿಸೆಂಬರ್ ತಿಂಗಳಲ್ಲೇ ಮೂರು ವಾಹನಗಳ ಪಲ್ಟಿಯಾಗಿವೆ. ಇಷ್ಟಾದರೂ ಈ ಕ್ರಾಸ್ ಬಳಿ ಸೂಚನೆ ಫಲಕ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...