18.1 C
Bangalore
Saturday, December 7, 2019

ಡಬ್ಬಾ ಅಂಗಡಿಕಾರರ ಅನಿರ್ದಿಷ್ಟಾವಧಿ ಧರಣಿ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...


ಮುದ್ದೇಬಿಹಾಳ: ಡಬ್ಬಾ ಅಂಗಡಿಕಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಸ್ತೆ ವಿಸ್ತರಣೆ ನೆಪದಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುವುದು ಸರಿಯಲ್ಲ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಡಬ್ಬಾ ಅಂಗಡಿಕಾರರ ಕ್ಷೇಮಾಭಿವೃದ್ಧಿ ಸಂಘದಿಂದ ಹಮ್ಮಿಕೊಂಡ ಧರಣಿ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಒಂದು ವೇಳೆ ತೆರವು ಅನಿವಾರ್ಯ ಎಂದಾದರೆ ಅಂಗಡಿಕಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದರು.

ಸಂಘದ ಅಧ್ಯಕ್ಷ ಅಮೀನಸಾ ಮುಲ್ಲಾ, ಈರಣ್ಣ ಮಾಡಗಿ, ಹುಸೇನ್ ಮುಲ್ಲಾ ಮಾತನಾಡಿ, ರಾಜ್ಯ ಹೆದ್ದಾರಿ ಕಾಮಗಾರಿ ಅಂದಾಜು ಪತ್ರಿಕೆಯಲ್ಲಿ ಅನುಮೋದಿಸಿದಂತೆ ನಡೆಸಬೇಕು. ಪರಿಹಾರ ನೀಡದೆ ಪುರಸಭೆ ಮಳಿಗೆಗಳನ್ನು ನೆಲಸಮಗೊಳಿಸಿದ್ದು, ಅಲ್ಲಿದ್ದ ಮಾಲೀಕರಿಗೆ ಸರ್ಕಾರದ ನಿಯಮದಂತೆ ಪರಿಹಾರ ನೀಡಬೇಕು. ಡಬ್ಬಾ ಅಂಗಡಿಕಾರರ ಮೇಲೆ ವಿನಾಕಾರ ದಬ್ಬಾಳಿಕೆ ಮಾಡುತ್ತಿರುವ ಮುಖ್ಯಾಧಿಕಾರಿ ಮೇಲೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಕೌಸರಬಾನು ಬಿದರಕುಂದಿ, ಈರಣ್ಣ ತಾರನಾಳ, ಅಶೋಕ ಇರಕಲ್, ನಿಂಗಯ್ಯ ಪತ್ರಿ, ಸಿದ್ದಯ್ಯ ಪತ್ರಿ, ಮುನ್ನಾ ಬಾಗವಾನ, ಚಂದ್ರಶೇಖರ ಹಡಪದ, ರಾಜು ಜಾಧವ, ಬಾಬು ಹೂಗಾರ,ಬಸವರಾಜ ಬೆನಕಟ್ಟಿ ಇದ್ದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...