ಡಾ.ರಾಜ್ ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಜ.೨೭ ರಂದುಡಾ.ವಿಷ್ಣುವರ್ಧನ್ ಸ್ಮರಣಾರ್ಥ ಸಂಗೀತ ಸಂಜೆ

ಮೈಸೂರು: ಡಾ.ರಾಜ್ ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸ್ಮರಣಾರ್ಥ ಜ.೨೭ ರಂದು ಸಿಂಹ ಘರ್ಜನೆ ಎಂಬ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಿದೆ.
ಅಂದು ಸಂ.೫ ಗಂಟೆಗೆ ಟೌನ್ ಹಾಲ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಗಾಯಕ ಜಯರಾಂ ವಿಷ್ಣುವರ್ಧನ್ ಅವರ ವಿಶೇಷ ಗೀತೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ನಗರಪಾಲಿಕೆ ಮಾಜಿ ಸದಸ್ಯ ಪಾರ್ಥಸಾರಥಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ತಿಳಿಸಿದರಯ.
ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಸ್.ಬಾಲರಾಜ್ ಚಾಲನೆ ನೀಡಲಿದ್ದು, ಮುಖಂಡ ಆರ್.ಸೋಮಸುಂದರ್ ಭಾಗವಹಿಸಲಿದ್ದಾರೆ ಎಂದರು.
ಮುಖಂಡರಾದ ವಿಕ್ರಂ ಅಯ್ಯಂಗಾರ್, ಕೆ.ಎಂ.ಆನಂದ್, ವೆಂಕಟೇಶ್ ಇತರರು ಇದ್ದರು.