More

    ಡಿ,ಎಡ್-ಬಿ,ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

    ಬೆಳಗಾವಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮುಸ್ಲಿಂ, ಜೈನ್, ಕ್ರಿಶ್ಚಿಯನ್. ಬೌದ್ಧ, ಸಿಖ್ ಹಾಗೂ ಪಾರ್ಸಿ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧ ನೀಡಲು ಡಿ.ಎಡ್ ಹಾಗೂ ಬಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿsಸಲಾಗಿದೆ.
    ಅರ್ಹ ವಿದ್ಯಾರ್ಥಿಗಳು ಕಡ್ಢಾಯವಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ https://sevasindhu.karnataka.gov.in) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿಬೇಕು ಹಾಗೂ National Council for  teacher Education ಹಾಗೂ Department of State Education Research and Training ಇದರಡಿ ಮಾನ್ಯತೆ ಪಡೆದ ಸರ್ಕಾರಿ/ಅರೆ ಸರ್ಕಾರಿ/ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ ರೂ.೬ ಲಕ್ಷಕ್ಕಿಂತ ಕಡಿಮೆ ಇರಬೇಕು. ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ,.ಎಡ್ ಕೋರ್ಸುಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು.
    ಸದರಿ ಅಭ್ಯರ್ಥಿಗಳು ಹಿಂದಿನ ಸಾಲಿನಲ್ಲಿ ಕನಿಷ್ಠ ಶೇ.೫೦ ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯ ಯೋಜನೆ (DBT) ಮುಖಾಂತರ ಹಣ ಸಂದಾಯ ಮಾಡಲಾಗುವುದು ಹಾಗೂ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ ಜೋಡನೆ (link) ಮಾಡಿಕೊಂಡಿರಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣ ಸಂಖ್ಯೆ 8277799990 ಮತ್ತು ಸಂಬಂದಪಟ್ಟ ತಾಲೂಕಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ದೂರವಾಣಿ ಸಂಖ್ಯೆ:0831-2950348 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ರಾಜ್ಯೋತ್ಸವ ರಸಪ್ರಶ್ನೆ - 27

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts