ಕೊಳ್ಳೇಗಾಲ: ಚಿಲಕವಾಡಿ ಬೆಟ್ಟದ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಅಥವಾ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಸೈನ್ಸ್ (ಸಿಎಸ್), ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ (ಇಸಿ), ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ (ಇ.ಇ) ಕೋರ್ಸ್‌ಗಳು ಲಭ್ಯವಿದ್ದು, ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಪ್ರವೇಶ ನೀಡಲಾಗುವುದು. ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ವರ್ಗಾವಣೆ ಪತ್ರ, ಜಾತಿ/ಆದಾಯ ಪ್ರಮಾಣ ಪತ್ರ, ಕನ್ನಡ/ಗ್ರಾಮೀಣ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ವಿದ್ಯಾರ್ಥಿಯ ಆಧಾರ್ ಪ್ರತಿಯ 2 ಸೆಟ್ ಜೆರಾಕ್ಸ್ ಪ್ರತಿಗಳು ಮತ್ತು 6 ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ.ನಂ. 9972014274, ಸಂಪರ್ಕಿಸಬಹುದೆಂದು ಪ್ರಾಂಶುಪಾಲ ಕೆ.ಜಿ.ಕಲ್ಲೇಶ್ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.