ಡೆಂಘೆ ರೋಗ ತಡೆಗೆ ಸಹಕಾರ ಅಗತ್ಯ

ಶಹಾಪುರ: ಡೆಂಘೆ ಸೇರಿ ಇತರೆ ಸಾಂಕ್ರಾಮಿಕ ರೋಗ ಹರಡದಂತೆ ನಿಯಂತ್ರಣ ಮಾಡುವಲ್ಲಿ ಸರ್ಕಾರಿ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಸಹಕಾರ ಬಹಳ ಅಗತ್ಯವಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ಹೇಳಿದರು.

ಡೆಂಘೆ ವಿರೋಧಿ ಮಾಸಾಚರಣೆ ಜುಲೈ-2024 ನಿಮಿತ್ತ ಆರೋಗ್ಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಗುರುವಾರ ಕರೆದಿದ್ದ ಡೆಂಘೆ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದರು.

ಗ್ರಾಮಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಿ, ರಸ್ತೆ, ಚರಂಡಿ, ತಗ್ಗು ಗುಂಡಿಗಳಲ್ಲಿ ನೀರು ನಿಲ್ಲದಂತೆ ಅಗತ್ಯ ಕ್ರಮಕೈಗೊಂಡು ಕುಡಿಯುವ ನೀರಿನ ಮೂಲಗಳೊಂದಿಗೆ ಕಲುಷಿತ ನೀರು ಸೇರದಂತೆ ಎಚ್ಚರ ವಹಿಸಬೇಕು ಎಂದು ಪಿಡಿಒಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರು ಉಪಯೋಗಿಸುವ ಗ್ರಾಮಗಳಲ್ಲಿನ ತೆರೆದ ಬಾವಿಗಳ ನೀರನ್ನು ಪರೀಕ್ಷೆ ಮಾಡಿಸಿ, ಕುಡಿಯಲು ಯೋಗ್ಯವಲ್ಲದಿದ್ದರೆ, ಬಾವಿಯ ಹತ್ತಿರ ಜನರಿಗೆ ಕಾಣುವಂತೆ ನೀರು ಕುಡಿಯಲು ಯೋಗ್ಯವಲ್ಲ ಎಂದು ಸೂಚನಾ ಫಲಕ ಹಾಕಿ, ಪ್ರತಿ ಹದಿನೈದು ದಿನಕ್ಕೊಮ್ಮೆ ಕುಡಿಯುವ ನೀರನ್ನು ಪರೀಕ್ಷೆ ಮಾಡಿಸಿ, ವಾರದಲ್ಲಿ ಏಳು ದಿನಕ್ಕೊಮ್ಮೆ ಎಲ್ಲ ಗ್ರಾಮಗಳಲ್ಲಿ ಫಾಗಿಂಗ್ ಮಾಡಿಸಬೇಕು ಎಂದು ತಾಕೀತು ಮಾಡಿದರು.

ಮಳೆಗಾಲ ಆರಂಭವಾಗಿದ್ದರಿAದ ಮುಂದಿನ ಎರಡು ತಿಂಗಳವರೆಗೆ ಸಾರ್ವಜನಿಕರು ಕುಡಿಯುವ ನೀರನ್ನು ಕುದಿಸಿ, ಸೋಸಿ, ಆರಿಸಿ ಕುಡಿಯಬೇಕು. ಮನೆಯ ಸುತ್ತ-ಮುತ್ತ ಟ್ಯೂಬ್, ಟೈಯರ್, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಬಾಟಲï ಹಾಗೂ ಇತರೆ ಘನತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಧ್ವನಿವರ್ಧಕದ ಹಾಗೂ ಡಂಗೂರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮುಡಿಸಲು ಕ್ರಮವಹಿಸಿ ಎಂದು ಪಿಡಿಒ ರವರಿಗೆ ತಿಳಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ.ರಮೇಶ ಗುತ್ತೇದಾರ್ ಮಾತನಾಡಿದರು. ಸಭೆಯಲ್ಲಿ ತಾಪಂ ಸಹಾಯಕ ನಿರ್ದೇಶಕ ಭೀಮಣ್ಣಗೌಡ ಬಿರಾದಾರ, ಯೋಜನಾಧಿಕಾರಿ ಸುಬ್ಬರಾಯ ಚೌದ್ರಿ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು. ತಾಲೂಕಿನ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯP್ಷÀರು ಭಾಗವಹಿಸಿದ್ದರು.

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…