18.1 C
Bangalore
Saturday, December 7, 2019

ತಂಬಾಕು ದುಷ್ಪರಿಣಾಮದ ಅರಿವು ಮೂಡಿಸಿ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಗದಗ: ವಿಶ್ವದಾದ್ಯಂತ ಪ್ರತಿ ವರ್ಷ 60 ಲಕ್ಷಕ್ಕೂ ಹೆಚ್ಚು ಜನರು ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅವಶ್ಯಕ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಪಂ ಸಹಯೋಗದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ, ತಂಬಾಕು ನಿಯಂತ್ರಣ ಅಧಿನಿಯಮ ಕೋಟ್ಪಾ- 2003 ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದಲ್ಲಿ ತಂಬಾಕು ಸೇವನೆಯಿಂದ ವರ್ಷಕ್ಕೆ 10 ಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ. ಯುವಕರು ತಂಬಾಕಿಗೆ ಬಲಿಯಾಗದಂತೆ ಮುಂಜಾಗ್ರತೆ ವಹಿಸುವುದು ಮುಖ್ಯ. ಈ ಅನಿಷ್ಟ ಪದ್ಧತಿ ಹೋಗಲಾಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದರು.

ಮಂಜುನಾಥ ಬಮ್ಮನಕಟ್ಟಿ ಮಾತನಾಡಿ, ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನದಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಹಾಗೂ ತಂಬಾಕು ನಿಯಂತ್ರಣ ಕುರಿತು ತಾಲೂಕು ಮಟ್ಟದಲ್ಲಿಯೂ ತರಬೇತಿ ಕಾರ್ಯ ಜರುಗಿಸುವುದು ಅವಶ್ಯವಾಗಿದೆ ಎಂದು ಹೇಳಿದರು.

ಡಿಎಚ್​ಒ ಡಾ. ವಿರೂಪಾಕ್ಷರೆಡ್ಡಿ ಮಾದಿನೂರ ಮಾತನಾಡಿ, ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಕಾರ್ಯಾಗಾರ ಆಯೋಜಿಸಲಾಗುವುದು ಎಂದರು.

ಜಿಮ್್ಸ ವೈದ್ಯ ಡಾ. ಅರವಿಂದ ಕರಿನಾಗಣ್ಣವರ ಮಾತನಾಡಿ, ತಂಬಾಕು ವಸ್ತುಗಳಲ್ಲಿರುವ 60ಕ್ಕೂ ಹೆಚ್ಚು ರಾಸಾಯನಿಕಗಳು ಕ್ಯಾನ್ಸರ್ ಉಂಟುಮಾಡುತ್ತವೆ. ತಂಬಾಕು ಸೇವಿಸುವ ಮಹಿಳೆಯರು ಬಂಜೆತನ, ಗರ್ಭಪಾತ, ಗರ್ಭಧಾರಣೆಯಲ್ಲಿ ಕುಂಠಿತ, ದಂತ ಕ್ಷಯ, ಕಡಿಮೆ ತೂಕದ ಮಗುವಿನ ಜನನ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಾರೆ ಎಂದರು.

ಜಿಲ್ಲಾ ಸಮೀಕ್ಷಾಧಿಕಾರಿ ಡಾ. ಸತೀಶ ಬಸರಿಗಿಡದ ಮಾತನಾಡಿದರು. ಆರೋಗ್ಯ ಇಲಾಖೆಯ ಮೇಲ್ವಿಚಾರಕ ಬಸವರಾಜ ಲಾಳಗಟ್ಟಿ ನಿರೂಪಿಸಿ, ವಂದಿಸಿದರು.

ಬಾಕ್ಸ್

ಆರೋಗ್ಯಕರ ಸಮಾಜ ನಿರ್ವಣಕ್ಕೆ ಕೈಜೋಡಿಸಿ

ಯುವಕರು ಕೌಟುಂಬಿಕ ಹಿನ್ನೆಲೆ, ಗೆಳೆತನ, ಕೆಲಸದೊತ್ತಡ ಹಾಗೂ ಮಾನಸಿಕ ಖಿನ್ನತೆಯಿಂದ ತಂಬಾಕು ಸೇವನೆಯ ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ತಂಬಾಕು ವ್ಯಸನಿಗಳಿಗೆ ನಿಕೋಟಿನ್ ಮಾತ್ರೆ ಸೇವನೆ, ಸೂಕ್ತ ಸಮಾಲೋಚನೆ, ತಿಳಿವಳಿಕೆ ನೀಡಬೇಕು. ತಂಬಾಕು ವ್ಯಸನಮುಕ್ತಿ ಕೇಂದ್ರ ಸಂರ್ಪಸಿ ಆರೋಗ್ಯಕರ ಸಮಾಜ ನಿರ್ವಿುಸುವಲ್ಲಿ ಸಾರ್ವಜನಿಕರು ಮುಂದಾಗಬೇಕು ಎಂದು ವೈದ್ಯ ಡಾ. ಅರವಿಂದ ಕರಿನಾಗಣ್ಣವರ ಹೇಳಿದರು.

ಕೋಟ್

ಕೋಟ್ಪಾ ಕಾಯ್ದೆ ಸೆಕ್ಷನ್ 4 ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಅಪರಾಧವಾಗಿದ್ದು, ಉಲ್ಲಂಘನೆಯಾದಲ್ಲಿ 200 ರೂ. ದಂಡ ವಿಧಿಸಲಾಗುತ್ತಿದೆ. ಸೆಕ್ಷನ್ 5 ಪ್ರಕಾರ ತಂಬಾಕಿನ ಕುರಿತು ಜಾಹೀರಾತು ಬಿಡುಗಡೆ ನಿಷೇಧಿಸಲಾಗಿದೆ.

| ಗೋಪಾಲ ಸುರಪುರ, ತಂಬಾಕು ನಿಯಂತ್ರಣ ಕೋಶದ ಸಲಹೆಗಾರ</

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...