18.5 C
Bangalore
Monday, December 16, 2019

ತಂಬಾಕು ಹರಾಜು ಪ್ರಕ್ರಿಯೆ ಆರಂಭ

Latest News

‘ದಿಶಾ ರೈಡ್ ಆಂಡ್ ವಾಕ್’ ಜಾಗೃತಿ ಜಾಥಾ

ಹುಬ್ಬಳ್ಳಿ: ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ತೋಳನಕೆರೆಯಿಂದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್​ವರೆಗೆ ಭಾನುವಾರ ಬೆಳಗ್ಗೆ ‘ದಿಶಾ ರೈಡ್ ಆಂಡ್ ವಾಕ್’ ಘೋಷಣೆಯೊಂದಿಗೆ...

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಎಚ್.ಡಿ.ಕೋಟೆ: 2019-20ನೇ ಸಾಲಿನ ತಂಬಾಕು ಹರಾಜು ಪ್ರಕ್ರಿಯೆಗೆ ಸೋಮವಾರ ಚಾಲನೆ ದೊರೆಯಿತು. ತಾಲೂಕಿನ ಶಾಂತಿಪುರ(ಹೆಬ್ಬಳ್ಳ) ಗ್ರಾಮದಲ್ಲಿರುವ ಹರಾಜು ಮಾರುಕಟ್ಟೆ ಸಂಖ್ಯೆ 1 ಮತ್ತು 65ರಲ್ಲಿ ಶಾಸಕ ಅನಿಲ್ ಚಿಕ್ಕಮಾದು ಚಾಲನೆ ನೀಡಿದರು.

ಮೊದಲ ದಿನ ರೈತರು ಮಾರುಕಟ್ಟೆಗೆ ತಂದಿದ್ದ ಎಕ್ಸ್1ಎಲ್, ಎಕ್ಸ್2ಎಲ್ ಗ್ರೇಡ್ ತಂಬಾಕಿಗೆ 175 ರೂ. (1 ಕೆ.ಜಿ) ಲಭಿಸಿತು. ಕನಿಷ್ಠ 161 ರೂ. ದರವಿದ್ದು, ಗರಿಷ್ಠ 175 ರೂ.ಗೆ ಏರಿಕೆಯಾಯಿತು. ಕಳೆದ ಸಾಲಿನಲ್ಲಿ ಮೊದಲ ದಿನ 165 ರೂ. ಲಭಿಸಿದ್ದು, ಈ ಬಾರಿ 10 ರೂ. ಹೆಚ್ಚಳವಾಗಿದೆ. ಮಾರುಕಟ್ಟೆಗೆ ಮೊದಲ ದಿನ ತಲಾ 10 ಬೇಲ್‌ಗಳನ್ನು ತರಲಾಗಿತ್ತು.

ಹರಾಜು ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ನಮ್ಮಲ್ಲಿ ಹತ್ತಿ ಮೊದಲ ಬೆಳೆಯಾಗಿದ್ದು, ತಂಬಾಕಿಗೆ 2ನೇ ಸ್ಥಾನ ಇದೆ. ಈ ಸಂದರ್ಭದಲ್ಲಿ ತಂಬಾಕು ಖರೀದಿದಾರರು ತಂಬಾಕಿಗೆ ಉತ್ತಮ ಬೆಲೆ ನೀಡಬೇಕು. ಕನಿಷ್ಠ 185 ರೂ. ಗಳಿಂದ 190 ರೂ. ಬೆಲೆ ನಿಗದಿ ಮಾಡಬೇಕು ಎಂದು ಮನವಿ ಮಾಡಿದರು.

ತಂಬಾಕು ಮಂಡಳಿ ನಿರ್ದೇಶಕ (ಹರಾಜು) ಟಿ.ವಿ. ರವಿ ಮಾತನಾಡಿ, ಈ ಬಾರಿ ತಂಬಾಕಿಗೆ ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ. ರೈತರು ದರ ಇನ್ನೂ ಹೆಚ್ಚಾಗಲಿದೆ ಎಂದು ಕಾಯುವುದು ಬೇಡ. ದಸರಾ ಹಬ್ಬಕ್ಕೆ 10 ದಿನಗಳ ರಜೆ ಇರಲಿದೆ. ಬಳಿಕ ಬೆಲೆ ಇಳಿಕೆಯಾಗಬಹುದು. ಆದ್ದರಿಂದ ಆದಷ್ಟು ಬೇಗ ತಮ್ಮ ಬೇಲ್‌ಗಳನ್ನು ತಂದು ಮಾರಾಟ ಮಾಡಿಕೊಳ್ಳಬೇಕು. ಎನ್‌ಒಜಿ, ಬಿಪಿಎಲ್ ಸೇರಿದಂತೆ ಕಡಿಮೆ ಗುಣಮಟ್ಟದ ತಂಬಾಕು ಹರಾಜಿಗೆ ಒಂದು ದಿನ ನಿಗದಿ ಮಾಡಿ. ಅಂದು ಹರಾಜು ಮಾಡುವ ವ್ಯವಸ್ಥೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಒಂದೇ ದಿನ ಎಲ್ಲ ಗ್ರೇಡ್ ತಂಬಾಕು ಹರಾಜಿಗೆ ತಂದರೆ ಬೆಲೆಯಲ್ಲಿ ವ್ಯತ್ಯಾಸವಾಗಿ ಕಡಿಮೆ ದರ ಸಿಗುತ್ತದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಬಳಿಕ ತಂಬಾಕು ಮಂಡಳಿ ನಿರ್ದೇಶಕ(ಹರಾಜು) ಟಿ.ವಿ. ರವಿ ಹಾಗೂ ಶಾಸಕ ಅನಿಲ್ ರೈತ ಮುಖಂಡರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಇದೇ ವೇಳೆ ಶಾಸಕ ಮಳೆಯಿಂದ ಹಾನಿಯಾದ ಬ್ಯಾರನ್ ಹಾಗೂ ತಂಬಾಕಿಗೆ ಪರಿಹಾರ ಒದಗಿಸುವಂತೆ ರೈತರು ಮನವಿ ಮಾಡಿದರು.

ಹರಾಜು ಅಧೀಕ್ಷಕರಾದ ರಮೇಶ್, ಆರ್. ಶ್ರೀನಿವಾಸ್, ಕ್ಷೇತ್ರಾಧಿಕಾರಿ ನೇತ್ರಾ ಕಮ್ಮಾರ್, ಐಟಿಸಿ ಮಾರ್ಕೆಟಿಂಗ್ ಮ್ಯಾನೇಜರ್ ವಿವಿಆರ್ ದೀಕ್ಷಿತ್, ಖರೀದಿದಾರರಾದ ಉಲ್ಲಾಸ್, ಟಿ.ಕೆ. ವೆಂಕಟೇಶ್, ರೈತ ಮುಖಂಡರಾದ ಕಾಳೇಗೌಡ, ಜಯರಾಮು, ಸತೀಶ್, ಮೊತ್ತ ಬಸವರಾಜಪ್ಪ, ಬಸವರಾಜು, ಎಎಂಎ ಫ್ರಾನ್ಸಿಸ್ ಶರವಣ, ಕ್ಷೇತ್ರ ಸಹಾಯಕರಾದ ಸಿದ್ದನಾಯಕ, ಮಂಜುನಾಥ್ ಹಾಗೂ ಆಂಧ್ರಪ್ರದೇಶದಿಂದ ಆಗಮಿಸಿದ್ದ ಖರೀದಿದಾರರು ಇದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...