21.7 C
Bengaluru
Tuesday, January 21, 2020

ತಡವಾಗಿದೆ ಕಾಮಗಾರಿ, ಸಾರ್ವಜನಿಕರಿಗೆ ಕಿರಿಕಿರಿ

Latest News

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಮುಂಬೈ ಸಿದ್ಧಿವಿನಾಯಕನಿಗೆ 35 ಕಿಲೋ ಚಿನ್ನ | ದೆಹಲಿ ಮೂಲದ ಉದ್ಯಮಿಯ ಕಾಣಿಕೆಯ ಮೌಲ್ಯ 14 ಕೋಟಿ ರೂಪಾಯಿ!

ಮುಂಬೈ: ಕಳೆದ 200ಕ್ಕೂ ಹೆಚ್ಚು ವರ್ಷಗಳ ಅವಧಿಯಲ್ಲಿ ಮುಂಬೈ ಸಿದ್ಧಿವಿನಾಯಕ ದೇವರಿಗೆ ಇದೇ ಮೊದಲ ಬಾರಿಗೆ 35 ಕಿಲೋ ಚಿನ್ನ ಕಾಣಿಕೆ ರೂಪದಲ್ಲಿ...

ಗಜೇಂದ್ರಗಡ: ಪಟ್ಟಣದ 4ನೇ ವಾರ್ಡ್​ನಲ್ಲಿ 2018-19ನೇ ಸಾಲಿನ ನಗರೋತ್ಥಾನ ಯೋಜನೆಯಡಿ ಕೈಗೊಂಡ ಕಾಂಕ್ರೀಟ್ ರಸ್ತೆ ಕಾಮಗಾರಿ ಸ್ಥಗಿತಗೊಂಡು ಹಲವು ತಿಂಗಳುಗಳೇ ಗತಿಸಿದ್ದು, ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಭಾನುವಾರ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಐದಾರು ತಿಂಗಳ ಹಿಂದೆ ಉತ್ತಮ ರಸ್ತೆಯನ್ನು ಹಾಳು ಮಾಡಿ, ಕಾಂಕ್ರೀಟ್ ರಸ್ತೆ ನಿರ್ವಿುಸಲು ಜಲ್ಲಿಕಲ್ಲು ರಾಶಿಯನ್ನು ಸುರಿಯಲಾಗಿದೆ. ಇದರಿಂದ ಪ್ರತಿದಿನ ಸೈಕಲ್ ಹಾಗೂ ದ್ವಿಚಕ್ರ ವಾಹನಗಳ ಮೂಲಕ ಪೂರೈಕೆಯಾಗುತ್ತಿದ್ದ ದಿನಪತ್ರಿಕೆ, ಹಾಲು, ಹೂವು ಸ್ಥಗಿತಗೊಂಡಿದೆ. ಜನರು ಪಕ್ಕದಲ್ಲಿನ ದೇವಸ್ಥಾನಕ್ಕೆ ತೆರಳಲು ಸಾಕಷ್ಟು ತೊಂದರೆ ಪಡುತ್ತಿದ್ದಾರೆ. ಬೈಕ್ ಸವಾರರು ಜಾರಿ ಬಿದ್ದು ಅಪಘಾತ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ ಎಂದು ದೂರಿದರು.
ಕಾಮಗಾರಿಯಿಂದಾಗಿ ರಸ್ತೆಯಲ್ಲಿ ತೆಗ್ಗು ಪ್ರದೇಶ ನಿರ್ವಣವಾಗಿದ್ದು, ಅಲ್ಲಲ್ಲಿ ಕೊಳಚೆ ನೀರು ಯಥೇಚ್ಛವಾಗಿ ನಿಲ್ಲುತ್ತಿದೆ. ಹೀಗಾಗಿ, ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ಓಡಾಡಲು ಪರದಾಡಬೇಕಾದ ಸ್ಥಿತಿ ಬಂದಿದೆ. ಕೊಳಚೆ ನೀರಿನಿಂದ ಸಂಪೂರ್ಣ ಬಡಾವಣೆಯೇ ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆ ಉತ್ಪತ್ತಿಯ ತಾಣವಾಗಿ ಮಾರ್ಪಟ್ಟಿದೆ. ಸಾಂಕ್ರಾಮಿಕ ರೋಗಗಳ ಭೀತಿ ತಲೆದೋರಿದೆ. ಈ ಕುರಿತು ಹಲವು ಬಾರಿ ಗುತ್ತಿಗೆದಾರರು ಹಾಗೂ ಮುಖ್ಯಾಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗುತ್ತಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಗುಣಮಟ್ಟದ ಕಾಮಗಾರಿ ಪ್ರಾರಂಭಿಸಬೇಕು. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ನಿವಾಸಿಗಳಾದ ಚನ್ನು ಸಮಂಗಡಿ, ರಾಘು ಖೋಡೆ, ವೀರಣ್ಣ ಬಣ್ಣದ, ಬೆನಕಪ್ಪ ರಾಜೋಳ್ಳಿ, ವಿರೂಪಾಕ್ಷಪ್ಪ ಅಳವಂಡಿ, ನಾರಾಯಣ ಖೋಡೆ, ಲಕ್ಷ್ಮೀಬಾಯಿ ಖೋಡೆ, ಮಂಜುಳಾ ಖೋಡೆ, ಲಲಿತವ್ವ ಕಾತರಕಿ, ಸುಭದ್ರವ್ವ ಬಣ್ಣದ, ಬಾಬಣ್ಣ ಪವಾರ ಎಚ್ಚರಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...