ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಹ್ಯ ಗ್ರಾಮದ ಬಳಿ ಇರುವ ಕಾವೇರಿ ನದಿ ದಂಡೆಯ ಕೃಷಿ ಜಮೀನುಗಳ ರಕ್ಷಣೆಗಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಗುರುವಾರ ಶಾಸಕ ಎ.ಎಸ್ ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು ಪ್ರತಿ ವರ್ಷ ಮಳೆಗಾಲದಲ್ಲಿ ಕಾವೇರಿ ನದಿ ಉಕ್ಕಿ ಹರಿಯುವ ಸಂದರ್ಭದಲ್ಲಿ ಈ ಭಾಗದ ಕೃಷಿ ಜಮೀನಿಗೆ ಹಾನಿಯಾಗುತ್ತಿತ್ತು. ಈ ಸಮಸ್ಯೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರತೀಶ್, ಕಾಂಗ್ರೆಸ್ ಮುಖಂಡರು, ಗ್ರಾಮಸ್ಥರು ಹಾಗೂ ಪ್ರಮುಖರು ಇದ್ದರು.
