25.9 C
Bengaluru
Wednesday, January 22, 2020

ತನಿಖಾ ಠಾಣೆಗಳೇ ಸ್ಥಗಿತ!

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಡಂಬಳ: ಜಿಲ್ಲೆಯಲ್ಲಿ ಅಕ್ರಮ ಮರಳು, ಗಣಿಗಾರಿಕೆ ಎಗ್ಗಿಲ್ಲದೆ ಸಾಗಿದೆ. ಗಣಿ ಮತ್ತು ಭೂವಿಜ್ಞಾನ ಸಚಿವರ ತವರು ಜಿಲ್ಲೆ ಇದಾಗಿದ್ದರೂ ಅಕ್ರಮ ಮರಳು ದಂಧೆಕೋರರು ಯಾವುದೇ ಭಯವಿಲ್ಲದೆ ತಮ್ಮ ದಂಧೆ ಮುಂದುವರಿಸಿದ್ದಾರೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಾಗಿದ್ದ ತನಿಖಾ ಠಾಣೆಗಳು ಕಾರ್ಯನಿರ್ವಹಿಸದೆ ಪಾಳು ಬಿದ್ದಿವೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯು 2016ರಲ್ಲಿ ಗದಗ ಜಿಲ್ಲೆಯ 16 ಸ್ಥಳಗಳಲ್ಲಿ ಲಕ್ಷಾಂತರ ರೂ. ವ್ಯಯಿಸಿ ತನಿಖಾ ಠಾಣೆಗಳನ್ನು ಸ್ಥಾಪಿಸಿದೆ. ಈ ಪೈಕಿ ನರಗುಂದ ಹಾಗೂ ಕೊರ್ಲಹಳ್ಳಿಯಲ್ಲಿ ಮಾತ್ರ ಈ ಠಾಣೆಗಳು ಕಾರ್ಯನಿರ್ವಹಿಸುತ್ತಿವೆ. ಆದರೆ, ಡಂಬಳ ಹೋಬಳಿ ವ್ಯಾಪ್ತಿಯ ಹಳ್ಳಿಕೇರಿ ಗ್ರಾಮದಲ್ಲಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗಣಿ ಮತ್ತು ಭೂವಿಜ್ಞಾನ ತನಿಖಾ ಠಾಣೆಯು ಪಾಳುಬಿದ್ದು, ಕುಡುಕರ ಅಡ್ಡೆಯಾಗಿದೆ. ಅದರ ಸುತ್ತಮುತ್ತ ಮುಳ್ಳುಕಂಟಿಗಳು ಆವರಿಸಿಕೊಂಡಿವೆ. ಕಟ್ಟಡ ಬಿರುಕು ಬಿಟ್ಟಿದೆ.

ಎಲ್ಲೆಲ್ಲಿ ತನಿಖಾ ಠಾಣೆಗಳು?:

ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಅಕ್ರಮ ಮರಳು, ಗಣಿಗಾರಿಕೆ ತಡೆಯಲು ಗದಗ ಜಿಲ್ಲೆಯ ದುಂದೂರು ಕ್ರಾಸ್, ಬಸಾಪುರ ಕ್ರಾಸ್, ಅಡವಿಸೋಮಾಪುರ ಕ್ರಾಸ್, ಗೋನಾಳ ಕ್ರಾಸ್, ಮಾಗಡಿ-ಮಾಢಳ್ಳಿ ಕ್ರಾಸ್, ರಾಮಗಿರಿ ಕ್ರಾಸ್, ಹಳ್ಳಿಕೇರಿ, ಕೊರ್ಲಹಳ್ಳಿ, ಕುರವಿನಕೊಪ್ಪ, ಬೆಳವಣಕಿ, ಹೊಳೆಆಲೂರ, ಹಿರೇಹಳ್ಳ, ಅಚ್ಚಮಟ್ಟಿ ಕ್ರಾಸ್, ಕಣಿಕಿಕೊಪ್ಪ, ಹುಣಿಸಿಕಟ್ಟಿ, ಕೊಣ್ಣೂರು ಗ್ರಾಮದ ಬಳಿ ಸೇರಿ 16 ಚೆಕ್​ಪೋಸ್ಟ್​ಗಳನ್ನು ತೆರೆದಿತ್ತು.

ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಪ್ರತಿ ತನಿಖಾ ಠಾಣೆಗೆ ಒಬ್ಬ ಸಿಬ್ಬಂದಿಯನ್ನು ಮಾತ್ರ ನಿಯೋಜಿಸಲಾಗಿತ್ತು. ಆದರೆ, ಈಗ ಸಿಬ್ಬಂದಿ ಕೊರತೆಯಿಂದ ಜಿಲ್ಲೆಯ 16 ತನಿಖಾ ಠಾಣೆಗಳ ಪೈಕಿ 14 ಠಾಣೆಗಳು ಕಾರ್ಯನಿರ್ವಹಿಸುತ್ತಿಲ್ಲ.

ಎಲ್ಲೆಲ್ಲಿ ಅಕ್ರಮ ದಂಧೆ?:

ಮೇವುಂಡಿ ಗ್ರಾಮದ ದೊಡ್ಡ ಹಳ್ಳ, ಜಂತ್ಲಿ-ಶಿರೂರ ಗ್ರಾಮದ ಹಿರೇಹಳ್ಳ, ಯಕ್ಲಾಸಪುರ ಹೊರವಲಯದ ಹಳ್ಳದಲ್ಲಿ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ. ಅಲ್ಲದೆ, ಕಪ್ಪತ್ತಗುಡ್ಡದ ಅಂಚಿನ ಡೋಣಿ, ಹಿರೇವಡ್ಡಟ್ಟಿ, ಡಂಬಳ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಸಾಗಣೆ ನಡೆಯುತ್ತಿದೆ ಎಂಬ ದೂರುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿವೆ.

ದಂಧೆಕೋರರು ಸರ್ಕಾರಕ್ಕೆ ತೆರಿಗೆ ಪಾವತಿಸುವಲ್ಲಿ ವಂಚನೆ ಮಾಡಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳು ಕಡಿವಾಣ ಹಾಕುತ್ತಿಲ್ಲವೇಕೆ ಎಂಬುದು ಪರಿಸರವಾದಿಗಳು, ಸಾರ್ವಜನಿಕರ ಪ್ರಶ್ನೆಯಾಗಿದೆ.

ನನ್ನ ಗಮನಕ್ಕೆ ಇವಾಗ ಬಂದಿದೆ. ಜಿಲ್ಲೆಯ 16 ಕಡೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ತನಿಖಾ ಠಾಣೆ ಇವೆ. ನರಗುಂದ ಮತ್ತು ಕೊರ್ಲಹಳ್ಳಿಯಲ್ಲಿ ಕಾರ್ಯನಿರ್ವಹಣೆಯಲ್ಲಿವೆ. ಇನ್ನುಳಿದ 14 ಠಾಣೆಗಳ ಬಗ್ಗೆ ಜಿಲ್ಲೆಯ ಎಲ್ಲ ತಹಸೀಲ್ದಾರರೊಂದಿಗೆ ರ್ಚಚಿಸಿ ಕಾರ್ಯಾರಂಭ ಮಾಡಲಾಗುತ್ತದೆ.

| ರಾಜೇಶ ಡಿ.ಎಸ್., ಹಿರಿಯ ಭೂವಿಜ್ಞಾನಿ, ಗದಗವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...