28.5 C
Bengaluru
Monday, January 20, 2020

ತಹಸೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಶಿರಹಟ್ಟಿ: ಶವ ಸಂಸ್ಕಾರಕ್ಕಾಗಿ ಗ್ರಾಮದಲ್ಲಿ ಜಾಗವಿಲ್ಲದ ಕಾರಣ ಆಕ್ರೋಶಗೊಂಡ ಹರಿಪುರ ಗ್ರಾಮಸ್ಥರು ಇಲ್ಲಿನ ತಹಸೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಸೋಮವಾರ ಪ್ರತಿಭಟನೆ ನಡೆಸಿದರು.

ಅಂತ್ಯ ಸಂಸ್ಕಾರ ನೆರವೇರಿಸಲು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ ಹಳ್ಳದ ಬದಿ ಅಂತ್ಯ ಸಂಸ್ಕಾರ ನಡೆಸಲಾಗುತ್ತಿತ್ತು. ಹೀಗಾಗಿ ಸ್ಮಶಾನಕ್ಕಾಗಿ ಗ್ರಾಮದ ಬಾಬಣ್ಣ ಹಾಲಪ್ಪನವರ ಅವರು ತಮ್ಮ 2 ಎಕರೆ ಭೂಮಿ ನೀಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿಗಳು ದರ ನಿಗದಿ ಪಡಿಸಿ 2012ರಲ್ಲಿ ಸರ್ಕಾರದಿಂದ ಮಂಜೂರಾತಿ ಪಡೆದು ನಂತರ ಭೂಮಿ ಖರೀದಿಗೆ ಹಣ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ, ಹಣ ಬಿಡುಗಡೆಯಾಗದ ಕಾರಣ ಭೂ ಮಾಲೀಕ ಶವ ಸಂಸ್ಕಾರಕ್ಕೆ ತಡೆ ಒಡಿದ್ದರು.

ಏಳು ವರ್ಷವಾದರೂ ಸರ್ಕಾರದಿಂದ ಹಣ ಬಂದಿಲ್ಲ ಎಂದು ಭೂಮಿ ನೀಡಿದ ಮಾಲೀಕ ಬಾಬಣ್ಣ ಶವ ಸಂಸ್ಕಾರಕ್ಕೆ ಅವಕಾಶ ನೀಡದ ಕಾರಣ ಉದ್ರಿಕ್ತರಾದ ಗ್ರಾಮಸ್ಥರು, ಸೋಮವಾರ ಮೃತಪಟ್ಟ ಪ್ರಬಣ್ಣ ಮೊರಬದ ಅವರ ಶವವನ್ನು ತಹಸೀಲ್ದಾರ್ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದರು.

ಕಾರ್ಯದ ನಿಮಿತ್ತ ತಹಸೀಲ್ದಾರ್ ಅವರು ಬೇರೆಡೆ ತೆರಳಿದ್ದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ‘ತಹಸೀಲ್ದಾರ್ ಬರುವ ವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ. ಇಲ್ಲವಾದಲ್ಲಿ ಆವರಣದಲ್ಲೇ ಶವ ಸಂಸ್ಕಾರ ನಡೆಸಲಾಗುವುದು’ ಎಂದು ಎಚ್ಚರಿಸಿದರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ತಹಸೀಲ್ದಾರ್ ಯಲ್ಲಪ್ಪ ಗೊಣೆಣ್ಣವರ, ‘ಜಿಲ್ಲಾಧಿಕಾರಿಯನ್ನು ಸಂರ್ಪಸಿ ವಾರದೊಳಗೆ ಸ್ಮಶಾನ ಭೂಮಿ ಖರೀದಿ ಸಮಸ್ಯೆ ಬಗೆ ಹರಿಸಲಾಗುವುದು’ ಎಂದು ಭರವಸೆ ನೀಡಿದರು. ಆದರೆ, ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಆಗಮನಕ್ಕೆ ಪಟ್ಟು ಹಿಡಿದರು. ಪ್ರತಿಕ್ರಿಯಿಸಿದ ತಹಸೀಲ್ದಾರ್, ‘ಅವರು ಬಂದರೂ ಇದೇ ಭರವಸೆ ನೀಡುತ್ತಾರೆ. ನನ್ನ ಭರವಸೆಗೆ ಸ್ಪಂದಿಸಿ’ ಎಂದು ಮನವಿ ಮಾಡಿದ ನಂತರ ಗ್ರಾಮಸ್ಥರು ವಾರದ ಗಡುವು ನೀಡಿದರು. ಶವ ಸಾಗಿಸಲು ವಾಹನ ನೀಡದ ಪಪಂ ಮುಖ್ಯಾಧಿಕಾರಿ ಶೋಭಾ ಬೆಳ್ಳಿಕೊಪ್ಪ ಹಾಗೂ ಸಿಬ್ಬಂದಿ ವಿರುದ್ಧ ವಾರ್ಡ್ ಸದಸ್ಯ ಮಹಾದೇವ ಗಾಣಿಗೇರ, ವಕೀಲ ಮಹೇಶ ದಾನಪ್ಪನವರ, ಅಕ್ಬರ್ ಯಾದಗೀರ ಆಕ್ರೋಶ ವ್ಯಕ್ತಪಡಿಸಿದರು. ಭೂಮಿ ಮಾಲೀಕ ಸಂಬಂಧಿ ಹಾಲಪ್ಪ ಹಾಲ್ಲಪ್ಪನವರ ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...