18 C
Bangalore
Friday, December 6, 2019

ತಾಂಡಾ ಜನರಿಗೆ ಗಡಸು ನೀರೇ ಗತಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯವಾಣಿ ವಿಶೇಷ ರಾಣೆಬೆನ್ನೂರ: ತಾಲೂಕಿನ ಎಲ್ಲ ತಾಂಡಾಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಆದರೆ, ಅಧಿಕಾರಿಗಳ ನಿಷ್ಕಾಳಜಿಯಿಂದ ಹಲವೆಡೆ ನೀರಿನ ಘಟಕಗಳು ಬಂದ್ ಆಗಿದ್ದು, ತಾಂಡಾ ಜನತೆಗೆ ಕುಡಿಯಲು ಗಡಸು ನೀರೇ ಗತಿಯಾಗಿದೆ.

ತಾಲೂಕಿನ 22 ತಾಂಡಾಗಳಿವೆ. ಭೂಸೇನಾ ನಿಗಮ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಎಲ್ಲ ತಾಂಡಾಗಳಲ್ಲಿ ನೀರಿನ ಘಟಕ ಸ್ಥಾಪಿಸಲಾಗಿದೆ. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದವು. ಆದರೆ, ಅವುಗಳ ತಾಂತ್ರಿಕ ದೋಷ, ವಿದ್ಯುತ್ ಸರಬರಾಜು, ಪೈಪ್​ಲೈನ್ ಒಡೆದಿರುವುದು ಸೇರಿ ಹಲವು ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಕಾರಣ ಪದ್ಮಾವತಿಪುರ ತಾಂಡಾ, ಸಿದ್ದಾಪುರ ತಾಂಡಾ, ಗೋವಿಂದ ಬಡಾವಣೆ, ಗಂಗಾಜಲ ತಾಂಡಾ, ಹುಲ್ಲತ್ತಿ ತಾಂಡಾ, ಚನ್ನಾಪುರ ತಾಂಡಾ ಸೇರಿ 15ಕ್ಕೂ ಅಧಿಕ ತಾಂಡಾಗಳಲ್ಲಿ ಬಂದ್ ಆಗಿವೆ.

ಬಹುತೇಕ ತಾಂಡಾಗಳಲ್ಲಿ ಶುದ್ಧ ಕುಡಿಯುವ ನೀರು ಹೊರತು ಪಡಿಸಿದರೆ ಬೋರ್​ವೆಲ್ ನೀರು ಸರಬರಾಜು ಮಾಡಲಾಗುತ್ತಿದೆ. ಇದೀಗ ಮಳೆಗಾಲದ ಹಿನ್ನೆಲೆಯಲ್ಲಿ ಬೋರ್​ನಿಂದ ಮಣ್ಣು ಮಿಶ್ರಿತ ಕೆಂಪು ನೀರು ಬರುತ್ತಿದೆ. ನೀರನ್ನು ತುಂಬಿಟ್ಟ ಒಂದೇ ದಿನದಲ್ಲಿ ದುರ್ವಾಸನೆ ಬರುತ್ತಿದೆ. ಆದ್ದರಿಂದ ಬೋರ್​ವೆಲ್ ನೀರನ್ನು ಕುಡಿಯಲು ಆಗುತ್ತಿಲ್ಲ. ಕುಡಿದರೂ ರೋಗದ ಭೀತಿ ಎದುರಾಗಿದೆ. ಇದರಿಂದಾಗಿ ಅಕ್ಕಪಕ್ಕದ ಗ್ರಾಮಗಳಿಗೆ ಹೋಗಿ ಕುಡಿಯುವ ನೀರನ್ನು ತರುವ ಪರಿಸ್ಥಿತಿ ನಿರ್ವಣವಾಗಿದೆ ಎಂದು ತಾಂಡಾ ನಿವಾಸಿಗಳು ದೂರಿದ್ದಾರೆ.

ನೀರಿನ ಘಟಕಗಳು ಬಂದ್ ಆಗಿರುವ ಕುರಿತು ಗ್ರಾಪಂ, ಭೂ ಸೇನಾ ನಿಗಮ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಮಳೆ ಕಾರಣ ಹೇಳಿ ಇಂದು-ನಾಳೆ ಎನ್ನುತ್ತ ಅಧಿಕಾರಿಗಳು ಜಾರಿಕೊಳ್ಳುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲೂ ಸಮಸ್ಯೆ: ತಾಲೂಕಿನ ಗ್ರಾಮ ಹಾಗೂ ತಾಂಡಾ ಸೇರಿ ಒಟ್ಟು 151 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಇವುಗಳಲ್ಲಿ 26 ಘಟಕಗಳಿಗೆ ಇನ್ನೂ ಚಾಲನೆಯೇ ದೊರೆತಿಲ್ಲ. ಚಾಲನೆ ದೊರೆತ 125 ಘಟಕಗಳ ಪೈಕಿ ಕೆಟ್ಟು ನಿಂತವುಗಳ ಸಂಖ್ಯೆಯೇ ಅಧಿಕವಾಗಿದೆ. ಹೀಗಾಗಿ, ಗ್ರಾಮೀಣ ಭಾಗದ ಜನತೆ ಕೂಡ ಅಶುದ್ಧ ಅಥವಾ ಬೋರ್​ವೆಲ್​ನಿಂದ ಬರುವ ಫ್ಲೋರೈಡ್​ಯುುಕ್ತ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆಯಿದೆ.

ತಾಲೂಕು ಆಡಳಿತದ ನಿರ್ಲಕ್ಷ್ಯಂದ ತಾಂಡಾಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳು ಬಂದ್ ಆಗಿವೆ. ಈ ಕುರಿತು ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ತಾಂಡಾದಲ್ಲಿ ಶುದ್ಧ ನೀರಿಲ್ಲದ ಕಾರಣ ಮಕ್ಕಳು, ವೃದ್ಧರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಕೂಡಲೆ ನೀರಿನ ಘಟಕಗಳನ್ನು ದುರಸ್ತಿ ಪಡಿಸಬೇಕು. ಇಲ್ಲವಾದರೆ ತಾಪಂ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು.

| ಭೀರಪ್ಪ ಲಮಾಣಿ, ತಾಂಡಾ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ

ತಾಂಡಾಗಳಲ್ಲಿನ ಶುದ್ಧ ಕುಡಿಯುವ ನಿರ್ವಹಣೆಯನ್ನು ಗ್ರಾಪಂಗಳಿಗೆ ವಹಿಸಿದರೆ ಸಮಸ್ಯೆ ಎದುರಾಗುವುದಿಲ್ಲ. ಆದರೆ, ನೀರಿನ ಘಟಕಗಳನ್ನು ಸ್ಥಾಪಿಸಿದ್ದಕ್ಕೆ ಭೂಸೇನಾ ನಿಗಮಕ್ಕೆ ಹಣ ಬಂದಿಲ್ಲ ಎನ್ನುವ ಕಾರಣಕ್ಕೆ ಅವುಗಳನ್ನು ಗ್ರಾಪಂಗೆ ಕೊಡಲು ತಡ ಮಾಡುತ್ತಿದ್ದಾರೆ. ಈ ಕುರಿತು ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲ ನೀರಿನ ಘಟಕಗಳನ್ನು ಕೂಡಲೆ ಆರಂಭಿಸಲು ಸೂಚಿಸಲಾಗುವುದು.

| ಎಸ್.ಎಂ. ಕಾಂಬಳೆ, ತಾಪಂ ಇಒ ರಾಣೆಬೆನ್ನೂರ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...