ತಾಪಂ ಸಭೆಯಲ್ಲಿ ಪ್ರತಿಧ್ವನಿಸಿದ ಪೈಪ್ ಕಳ್ಳತನ

Latest News

ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಹುಲ್​ ಗಾಂಧಿ ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು, ಹೀಗೆಂದವರು ಯಾರು?

ಪಣಜಿ: ಕಾಂಗ್ರೆಸ್​ ಮುಖಂಡ ರಾಹುಲ್​ ಗಾಂಧಿ ನನ್ನ ತಂದೆಯ ಅನಾರೋಗ್ಯದ ಸ್ಥಿತಿಯನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದರು ಎಂದು ಮಾಜಿ ರಕ್ಷಣಾ ಸಚಿವ ಮನೋಹರ್​...

ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ

ಕಾರ್ಗಲ್: ಪಪಂ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಒದಗಿಸುವುದು ಬಿಜೆಪಿಯ ಆದ್ಯ ಕರ್ತವ್ಯ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಡಿ.ಮೇಘರಾಜ್ ತಿಳಿಸಿದರು. ಕಾರ್ಗಲ್​ನಲ್ಲಿ ಗುರುವಾರ...

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಐನ್​ಸ್ಟೀನ್​ ಸಿದ್ಧಾಂತಕ್ಕೇ ಸವಾಲು ಹಾಕಿದ್ದ ಭಾರತದ ಗಣಿತಜ್ಞ ವಶಿಷ್ಠ ನಾರಾಯಣ ಸಿಂಗ್​ ನಿಧನ

ಪಟನಾ: ಜರ್ಮನಿ ಮೂಲದ ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೀನ್​ ಅವರ ಸಾಪೇಕ್ಷೆ ಸಿದ್ಧಾಂತಕ್ಕೆ ಸವಾಲು ಹಾಕಿದ್ದ ಭಾರತದ ಪ್ರಖ್ಯಾತ ಗಣಿತಜ್ಞ ವಶಿಷ್ಠ ನಾಯಾರಣ...

ಹಾವೇರಿ: ಕನವಳ್ಳಿ ಗ್ರಾಮದ ಕೆರೆಗೆ ನೀರು ತುಂಬಿಸಲು ಒಯ್ದಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧೀನದಲ್ಲಿನ ಪೈಪ್​ಗಳ ಕಳ್ಳತನ ಪ್ರಕರಣ ತಾಪಂ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿ, ಕೈ, ಕಮಲ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಯಿತು.
ಸಭೆ ಆರಂಭದಲ್ಲಿ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ಮುಗಿದ ಕೂಡಲೆ ಬಿಜೆಪಿ ಸದಸ್ಯರಾದ ಸತೀಶ ಸಂದಿಮನಿ, ಮಾಲತೇಶ ಬನ್ನಿಮಟ್ಟಿ, ಅಶೋಕ ಯಲಿಗಾರ, ವಿರೂಪಾಕ್ಷಪ್ಪ ಹುಲ್ಲೂರ, ಕನವಳ್ಳಿ ಗ್ರಾಮದ ಕೆರೆ ತುಂಬಿಸಲು ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್​ಪೋರ್ಸ್ ಸಮಿತಿ ಸಭೆಯಲ್ಲಿ ರ್ಚಚಿಸಿದಂತೆ ಆರ್​ಡಿಡಬ್ಲ್ಯೂಎಸ್ ಇಲಾಖೆ ಅಧಿಕಾರಿಗಳೇ ಪೈಪ್​ಗಳನ್ನು ಕೊಟ್ಟಿದ್ದಾರೆ. ನಂತರ ಪೈಪ್​ಗಳನ್ನು ಕೊಟ್ಟ ಅಧಿಕಾರಿಯೇ ಜಿಪಂ ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ ಒತ್ತಡಕ್ಕೆ ಮಣಿದು ಕನವಳ್ಳಿ ಗ್ರಾಮದ ರೈತರ ಮೇಲೆ ಕಳ್ಳತನ ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳೇ, ನೀವು ಜನರ ಕೆಲಸ ಮಾಡೋಕೆ ಇದ್ದೀರಾ ಅಥವಾ ರಾಜಕೀಯ ಮಾಡಿ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡೋಕೋ ಇದ್ದೀರಾ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಪೈಪ್​ಗಳನ್ನು ಕೊಡಲು ಟಾಸ್ಕ್​ಪೋರ್ಸ್ ಸಭೆಯಲ್ಲಿ ಚರ್ಚೆಯಾದಾಗ ನೀವೇನು ಮಾಡ್ತಾ ಇದ್ದೀರಿ. ಆಗಲೇ ಕೊಡಲು ಬರುವುದಿಲ್ಲ ಎಂದಿದ್ದರೆ ಠರಾವು ಮಾಡುತ್ತಿರಲಿಲ್ಲ. ಠರಾವು ಪಾಸು ಮಾಡಿ ಪೈಪ್​ಗಳನ್ನು ಕೊಟ್ಟು ಈಗ ರೈತರ ಮೇಲೇಕೆ ದೂರು ದಾಖಲಿಸಿದ್ದೀರಿ. ಪೈಪ್​ಗಳನ್ನು ಶಾಸಕರು, ಕನವಳ್ಳಿ ಗ್ರಾಮಸ್ಥರು ತಮ್ಮ ಮನೆಗೆ ಒಯ್ದಿದ್ದಾರಾ. ನಿಮ್ಮಿಂದ, ಸರ್ಕಾರದಿಂದ ಕನವಳ್ಳಿ ಜನರಿಗೆ ನೀರು ಕೊಡಲು ಆಗುತ್ತಿಲ್ಲ. ಆರೇಳು ವರ್ಷದಿಂದ ಬಿಸಿಲಿಗೆ ಬಿದ್ದು ಹಾಳಾಗಿ ಹೋಗುತ್ತಿದ್ದ ಪೈಪ್​ಗಳನ್ನು ಬಳಸಿ ಜನರಿಗೆ ಅನುಕೂಲ ಕಲ್ಪಿಸಲಾಗಿದೆ. ಟ್ಯಾಂಕರ್ ಮೂಲಕವೇ ಎಲ್ಲಿಯವರೆಗೆ ಜನರಿಗೆ ನೀರು ಕೊಡ್ತೀರಿ. ಜನರಿಗಿಂತ ನಿಮಗೆ ಜಿಪಂ ಸದಸ್ಯರ ಮಾತೇ ಹೆಚ್ಚಾಯಿತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಗ ಆರ್​ಡಿಡಬ್ಲ್ಯೂಎಸ್ ಅಧಿಕಾರಿ ರಾಕೇಶ, ಈ ವಿಷಯದ ಕುರಿತು ಪೂರ್ಣ ಮಾಹಿತಿ ನನಗಿಲ್ಲ ಎಂದಾಗ ಮತ್ತಷ್ಟು ರೊಚ್ಚಿಗೆದ್ದ ಸದಸ್ಯರು, ಹಾಗಾದರೆ ಅದಕ್ಕೆ ಸಂಬಂಧಿಸಿದ ಅಧಿಕಾರಿಯನ್ನೇ ಸಭೆಗೆ ಕರೆಯಿಸಿ ಎಂದು ಪಟ್ಟು ಹಿಡಿದರು. ಅಲ್ಲದೆ, ಅಂದಿನ ಟಾಸ್ಕ್​ಪೋರ್ಸ್ ಸಮಿತಿ ಸಭೆಯಲ್ಲಿ ಇಒ ಹಾಜರಿದ್ದು, ಅವರಾದರೂ ಉತ್ತರಿಸಬೇಕು ಎಂದು ಒತ್ತಾಯಿಸಿದರು. ಇಒ, ಸದಸ್ಯರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ಕೈ, ಕಮಲ ಸದಸ್ಯರ ನಡುವೆ ವಾಗ್ವಾದ: ಇಒ ಪ್ರತಿಕ್ರಿಯಿಸದಿದ್ದಾಗ ಸದಸ್ಯರೆಲ್ಲರೂ ಈ ವಿಷಯವಾಗಿ ಮತ್ತಷ್ಟು ಅಧಿಕಾರಿಗಳ ವಿರುದ್ಧ ಹರಿಹಾಯತೊಡಗಿದರು. ಆಗ ಕಾಂಗ್ರೆಸ್ ಸದಸ್ಯರು ಸಭೆಯಲ್ಲಿ ಒಂದೇ ವಿಷಯವನ್ನು ರ್ಚಚಿಸಬೇಕಾ. ನಮ್ಮವೂ ಸಾಕಷ್ಟು ಸಮಸ್ಯೆಗಳಿವೆ ಎಂದು ಜೋರು ಮಾಡಿದರು. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಸದಸ್ಯರು ಇದು ಗಂಭೀರ ವಿಷಯವಾಗಿದೆ. ತಪ್ಪು ಮಾಡದ ಗ್ರಾಮಸ್ಥರ ವಿರುದ್ಧ ಕಳ್ಳತನದ ದೂರು ದಾಖಲಿಸಲಾಗಿದೆ. ಇಂತಹ ವಿಷಯದ ಪೂರ್ಣ ಚರ್ಚೆಯಾಗಲೇಬೇಕು ಎಂದರು. ಆಗ ಕೈ, ಕಮಲ ಸದಸ್ಯರ ನಡುವೆ ವಾಗ್ವಾದ ಆರಂಭಗೊಂಡಿತು. ಇದರಿಂದ ಬೇಸರಗೊಂಡ ಬಿಜೆಪಿ ಸದಸ್ಯರು ನಮ್ಮ ಸಮಸ್ಯೆ ರ್ಚಚಿಸಲು ಅವಕಾಶವಿಲ್ಲವಾದರೇ ನಾವೇಕೆ ಸಭೆಯಲ್ಲಿ ಇರಬೇಕು ಎಂದು ಸಭೆಯಿಂದ ಹೊರನಡೆದರು.
ತಾಪಂ ಇಒ ಅನ್ನಪೂರ್ಣ ಮುದಕಮ್ಮನವರ, ಉಪಾಧ್ಯಕ್ಷೆ ಸಾವಿತ್ರಮ್ಮ ಮರಡೂರ, ಸ್ಥಾಯಿ ಸಮಿತಿ ಅಧ್ಯಕ್ಷೆ ಶಿಲ್ಪಾ ಗೋಟನವರ ಸೇರಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಅಧ್ಯಕ್ಷರಿಂದ ಮನವೊಲಿಕೆ: ಸಭೆಯಿಂದ ಹೊರಬಂದ ಬಿಜೆಪಿ ಸದಸ್ಯರ ಮನವೊಲಿಸಲು ತಾಪಂ ಅಧ್ಯಕ್ಷ ಕರಿಯಪ್ಪ ಉಂಡಿ ತಾವೂ ಸಭೆಯಿಂದ ಹೊರಬಂದರು. ಆಗ ಸದಸ್ಯರು, ‘ಪೈಪ್​ಗಳನ್ನು ಕೊಟ್ಟವರೇ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸರಿಯೇ. ಇಒ ಅವರಾದರೂ ನಮ್ಮ ಪ್ರಶ್ನೆಗೆ ಉತ್ತರಿಸಬೇಕಿತ್ತು. ನಮ್ಮ ಪ್ರಶ್ನೆಗಳಿಗೆ ಉತ್ತರವಿಲ್ಲವಾದರೇ ನಾವು ಸಭೆಗೆ ಬಂದು ಏನು ಮಾಡಬೇಕು’ ಎಂದು ಸದಸ್ಯ ಸತೀಶ ಸಂದಿಮನಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಅಧ್ಯಕ್ಷರು ಸಂಬಂಧಿಸಿದ ಅಧಿಕಾರಿಯನ್ನು ಸಭೆಗೆ ಕರೆಯಿಸುವ ಭರವಸೆ ನೀಡಿದ ನಂತರ ಸಭೆ ಆರಂಭವಾಯಿತು.

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...