25.9 C
Bengaluru
Wednesday, January 22, 2020

ತಾಲೂಕು ಮಟ್ಟದ ಅಧಿಕಾರಿಗಳು ಚುರುಕಾಗಲಿ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಶಿವಮೊಗ್ಗ: ತಾಲೂಕು ಹಂತದಲ್ಲಿ ಅಧಿಕಾರಿಗಳು ಜನರ ಅಹವಾಲಿಗೆ ಸ್ಪಂದಿಸದ ಕಾರಣ ಅವರೆಲ್ಲರೂ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವಂತಾಗಿದೆ. ಇದರಿಂದ ಜಿಲ್ಲಾಡಳಿತದ ಮೇಲೆ ಒತ್ತಡ ಹೆಚ್ಚಾಗುತ್ತದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಸೇವೆ ಸಲ್ಲಿಸುತ್ತಿರುವ ನೌಕರರು, ಸಕಾಲದಲ್ಲಿ ಸಾರ್ವಜನಿಕರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸಬೇಕು ಎಂದರು.

ಯಾವುದೆ ವ್ಯಕ್ತಿ ಸಮಸ್ಯೆಗೆ ಪರಿಹಾರ ಕೇಳಲು ಸರ್ಕಾರಿ ಕಚೇರಿಗೆ ಬರುತ್ತಾರೆ. ಇದನ್ನು ಅಧಿಕಾರಿಗಳು ಅರ್ಥ ಮಾಡಿಕೊಂಡು ಕಾನೂನು ಮಿತಿಯೊಳಗೆ ಪರಿಹಾರ ಒದಗಿಸಬೇಕು. ಆಗ ಇಲಾಖೆ ಗೌರವ ಹೆಚ್ಚುತ್ತದೆ. ಅಧಿಕಾರಿಗೆ ಉತ್ತಮ ಕೆಲಸ ಮಾಡಿದ ತೃಪ್ತಿಯೂ ಸಿಗುತ್ತದೆ ಎಂದು ಹೇಳಿದರು.

ಕಡತ ವಿಲೇವಾರಿಗೆ ಸಭೆ: ಕಚೇರಿಗಳಲ್ಲಿ ಬಹುದಿನಗಳಿಂದ ವಿಲೇವಾರಿ ಆಗದಿರುವ ಕಡತಗಳನ್ನು ತ್ವರಿತವಾಗಿ ವಿಲೇ ಮಾಡುವ ಸಂಬಂಧ ಇಲಾಖಾ ಅಧಿಕಾರಿಗಳು ಸಿಬ್ಬಂದಿ ಸಭೆ ಕರೆದು ಸೂಚಿಸಬೇಕು. ಅಧಿಕಾರಿಗಳು ಪ್ರತಿ ಹಂತದಲ್ಲೂ ಕಡತಗಳ ವಿಲೇವಾರಿ ಬಗ್ಗೆ ಗಮನಹರಿಸಬೇಕು ಎಂದು ಕೆ.ಬಿ.ಶಿವಕುಮಾರ್ ತಿಳಿಸಿದರು.

ದೇಶದ ಪ್ರತಿ ನಾಗರಿಕನೂ ಜಾಗರೂಕನಾಗಿದ್ದು, ಎಲ್ಲ ಸಂದರ್ಭದಲ್ಲೂ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿರಬೇಕು. ಭ್ರಷ್ಟಾಚಾರ ವಿರುದ್ಧದ ಹೋರಾಟ ಬೆಂಬಲಿಸಬೇಕು. ಪ್ರತಿಯೊಬ್ಬರೂ ತಮ್ಮ ಕಾರ್ಯಕ್ಷೇತ್ರದಲ್ಲಿ ಕಾನೂನು ನಿಯಮ ಅನುಸರಿಸುವ ಜತೆಗೆ ಪ್ರಾಮಾಣಿಕವಾಗಿರಬೇಕು. ಲಂಚ ಕೊಡುವುದು ಮತ್ತು ಪಡೆಯುವುದನ್ನು ವಿರೋಧಿಸಬೇಕು. ಪಾರದರ್ಶಕವಾಗಿ ಸಾರ್ವಜನಿಕ ಹಿತಾಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ, ಉಪವಿಭಾಗಾಧಿಕಾರಿ ಟಿ.ವಿ.ಕೃಷ್ಣಮೂರ್ತಿ, ಯೋಜನಾ ನಿರ್ದೇಶಕ ನಾಗೇಂದ್ರ ಎಫ್. ಹೊನ್ನಳ್ಳಿ ಉಪಸ್ಥಿತರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...