ಗುರುಮಠಕಲï: ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಖುz್ದÁಗಿ ಅರಿಯಲು ತಿಂಗಳಲ್ಲಿ ಎರಡು ಬಾರಿ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಾಸ್ತವ್ಯ ಮಾಡಲಾಗುವುದು ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.
ಪಟ್ಟಣದಲ್ಲಿ ಗುರುವಾರ ಡಿ.ದೇವರಾಜ ಅರಸ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 3.50 ಕೋಟಿ ರೂ.ವೆಚ್ಚದಲ್ಲಿ ಮೇಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಉದ್ಘಾಟಿಸಿ ಮಾತನಾಡಿದ ಅವರು, ದೇವರಾಜ ಅರಸ್ ಅವರು ತಮ್ಮ ಕಾಲದಲ್ಲಿಯೇ ಹಿಂದುಳಿದ ವರ್ಗಗಳ ಬಗ್ಗೆ ಆಳವಾಗಿ ಚಿಂತನೆ ನಡೆಸಿ ವಿವಿಧ ಯೋಜನೆ ಜಾರಿ ಮಾಡಿದ್ದರಿಂದ ಇಂದು ಇಂತಹ ಉನ್ನತ ಕಟ್ಟಡಗಳಲ್ಲಿ ಅಭ್ಯಾಸ ಮಾಡಲು ಅನುಕೂಲವಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದಲ್ಲಿದ್ದು ಸರಿಯಾಗಿ ಅಭ್ಯಾಸ ಮಾಡುವ ಮೂಲಕ ತಮ್ಮ ಗುರಿ ಸಾಧಿಸಬೇಕು ಎಂದು ಹೇಳಿದರು. ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಂತೋಷರೆಡ್ಡಿ ಮಾತನಾಡಿದರು.
ತಹಸೀಲ್ದಾರ್ ನೀಲಪ್ರಭಾ, ಮುಖ್ಯಾಧಿಕಾರಿ ಭಾರತಿ. ದಂಡೋತಿ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಸಂತೋಷ, ದಶರಥ ಅಂಬರಾಯ ಪಾಟೀಲ್, ಶರಣಬಸಪ್ಪ , ಪುರಸಭೆ ಸದಸ್ಯರು ಸೇರಿದಂತೆ ಜೆಡಿಎಸ್ ಮುಖಂಡರು ಇದ್ದರು.