ಬೆಂಗಳೂರು: ಗ್ರಾಮ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಲಾದ ಎರಡು ಅರ್ಜಿಗಳ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿಗಳಾದ ವಿಕ್ರಂ ಬಳ್ಳಾರಿ, ಕೀರ್ತಿಕುಮಾರ ಬಸವರಾಜ ಕುರಹಟ್ಟಿ, ಸಂದೀಪ್ ಸೌದತ್ತಿ, ವಿನಾಯಕ ಕಟಗಿ, ಮಹಾಬಲೇಶ್ವರ ಹೊಂಗಲ್ ಅಲಿಯಾಸ್ ಮುದುಕ, ಆರೋಪಿ ಬಸವರಾಜ ಮುತ್ತಗಿ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ತೀರ್ಪು ಕಾಯ್ದಿರಿಸಿತು.
ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ೨೦೧೬ರ ಜೂ.೧೫ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಮೊದಲಿಗೆ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು ೬ನೇ ಆರೋಪಿಗಳ ಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಶಾಸಕ ವಿನಯ ಕುಲಕರ್ಣಿ ಹೆಸರು ಕೈಬಿಡಲಾಗಿತ್ತು. ನಂತರ ಸಿಬಿಐ ತನಿಖೆ ನಡೆಸಿ, ದೋಷಾರೋಪ ಪಟ್ಟಿಯಲ್ಲಿ ಸಲ್ಲಿಸಿದ್ದು, ಹೊಸದಾಗಿ ೭ ರಿಂದ ೨೧ ಆರೋಪಿಗಳನ್ನು ಸೇರ್ಪಡೆ ಮಾಡಿತ್ತು.
ಹೊಸ ಆರೋಪಿಗಳು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸುವ ಅಗತ್ಯವಿದೆ ಸಿಬಿಐ ವಿಶೇಷ ನ್ಯಾಯಾಲಯವು ೨೦೨೪ರ ಜೂ.೨೮ರಂದು ಆದೇಶಿಸಿತ್ತು. ಇದರಿಂದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿ, ಹೊಸದಾಗಿ ವಿಚಾರಣೆ ನಡೆಸುವುದರಿಂದ ಕಾನೂನು ತೊಡಕು ಉಂಟಾಗಲಿದೆ. ವಿಚಾರಣೆ ಸಹ ವಿಳಂಬವಾಗುತ್ತದೆ. ಆದ್ದರಿಂದ ಹೊಸ ಆರೋಪಿಗಳು ಸೇರ್ಪಡೆಯಾದಾಗ ಪ್ರಕರಣ ಯಾವ ಹಂತದಲ್ಲಿತ್ತೋ, ಅಲ್ಲಿಂದಲೇ ವಿಚಾರಣೆ ಮುಂದುರಿಸಲು ವಿಶೇಷ ನ್ಯಾಯಾಲಯಕ್ಕೆ ಆದೇಶಿಸಬೇಕು ಎಂದು ಕೋರಿದ್ದಾರೆ.
Court reserved judgment
ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
You Might Also Like
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ಚೆಕ್ ಮಾಡಿ ನೋಡಿ… ಇದ್ರೆ ನೀವು ರಾಜಯೋಗ ಅನುಭವಿಸುತ್ತೀರಿ!
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!
ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…
ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್ ಬರೋದು ಪಕ್ಕಾ! ಇರಲಿ ಎಚ್ಚರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…