20.1 C
Bangalore
Friday, December 6, 2019

ತುಮಕೂರಿಗೂ ನಮ್ಮ ಮೆಟ್ರೋ ರೈಲು ಓಡಾಟ

Latest News

ಅಪರಿಚಿತರ ಬಗ್ಗೆ ಎಚ್ಚರವಿರಲಿ

ಐಮಂಗಲ; ಅಪರಿಚಿತರ ಬಗ್ಗೆ ಎಚ್ಚರ ವಹಿಸದಿದ್ದರೆ ಅಪಾಯ ಎದುರಾಗುವುದು ಖಚಿತ ಎಂದು ಎಎಸ್‌ಐ ಕೆ.ಪ್ರಾಣೇಶ್ ಎಚ್ಚರಿಸಿದರು. ಹೋಬಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ...

ಸಂವಹನಕ್ಕೆ ಇಂಗ್ಲಿಷ್ ಕಲಿಕೆ ಅನಿವಾರ್ಯ

ಐಮಂಗಲ; ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಂವಹನ ನಡೆಸಲು ಹಾಗೂ ತನಿಖೆ ವೇಳೆ ಮಾಹಿತಿ ಕಲೆ ಹಾಕಲು ಇಂಗ್ಲೀಷ್ ಕಲಿಕೆ ಪೊಲೀಸರಿಗೆ ಅವಶ್ಯ...

ಸಾರ್ವಜನಿಕರಿಗೆ ಸಿಗಲಿ ಗುಣಮಟ್ಟ ಆರೋಗ್ಯ ಸೇವೆ

ಚಿತ್ರದುರ್ಗ: ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯೊಂದಿಗೆ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಪಾಲಾಕ್ಷ,...

ಋಣುಮುಕ್ತ ಕಾಯ್ದೆ ಅವಧಿ ವಿಸ್ತರಿಸಿ

ಚಳ್ಳಕೆರೆ: ಋಣಮುಕ್ತ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಅಧಿಕಾರಿಗಳಿಂದ ಆಗಿಲ್ಲ ಎಂದು ಆರೋಪಿಸಿ ನಗರಸಭೆ ಮಾಜಿ ಸದಸ್ಯರಾದ ಟಿ.ಜೆ.ವೆಂಕಟೇಶ್, ಜಿ.ಕೆ.ರವಿ...

ಅಹವಾಲು ಸ್ವೀಕರಿಸಿದ ಎಸಿಬಿ

ಹಿರಿಯೂರು: ತಾಪಂ ಸಭಾಂಗಣದಲ್ಲಿ ಗುರುವಾರ ಚಿತ್ರದುರ್ಗ ಜಿಲ್ಲಾ ಭಷ್ಟಾಚಾರ ನಿಗ್ರಹದಳದ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಎಸಿಬಿ ಡಿವೈಎಸ್‌ಪಿ ನರಸಿಂಹ ವಿ ತಾಮ್ರಧ್ವಜ ಮಾತನಾಡಿ,...

ತುಮಕೂರು: ಬೆಂಗಳೂರು-ತುಮಕೂರು ಪ್ರತ್ಯೇಕ ಸಬರ್ಬನ್ ರೈಲು ಮಾರ್ಗ ನಿರ್ವಿುಸಲು ಡಿಪಿಆರ್​ನಲ್ಲಿ ಸೇರಿಸಲಾಗಿದ್ದು, ಬೆಂಗಳೂರು ಹಾಗೂ ತುಮಕೂರು ನಗರದಲ್ಲಿ ಏಕಕಾಲದಲ್ಲಿ ರೈಲು ಓಡಾಟ ಆರಂಭಿಸಲಿ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ಆಶಿಸಿದರು.

ಶನಿವಾರ ಗಣರಾಜ್ಯೋತ್ಸವದಲ್ಲಿ ಭಾಗಿಯಾದ ನಂತರ ಸುದ್ದಿಗಾರರ ಜತೆ ಮಾತನಾಡಿದರು. ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ‘ನಮ್ಮ ಮೆಟ್ರೋ’ ಸಂಚಾರ ವಿಸ್ತರಣೆಗೆ ಸರ್ಕಾರ ಚಿಂತಿಸಿದ್ದು, ಉಪನಗರ ರೈಲು ಇರುವುದರಿಂದ ರೈಲ್ವೆ ಇಲಾಖೆಯ ಅನುಮತಿ ಅಗತ್ಯವಿದೆ ಎಂದರು.

ಸ್ಥಳೀಯರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕೈಗಾರಿಕೆಗಳ ಜತೆ ಸಭೆ ನಡೆಸುವಂತೆ ಡಿಸಿಗೆ ಸೂಚಿಸಿದ್ದೇನೆ ಎಂದರು. ಘನತ್ಯಾಜ್ಯ ನಿರ್ವಹಣೆ ಬಗ್ಗೆ ಜರ್ಮನಿ ಹಾಗೂ ಫ್ರಾನ್ಸ್ ತಂತ್ರಜ್ಞಾನವನ್ನು ಬೆಂಗಳೂರು ಹಾಗೂ ತುಮಕೂರು ನಗರದಲ್ಲಿ ಬಳಸಲು ತೀರ್ವನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರಲ್ಲಿ 6 ಘಟಕ ಹಾಗೂ ತುಮಕೂರು ನಗರದ ಅಜ್ಜಗೊಂಡನಹಳ್ಳಿ ಘಟಕದಲ್ಲಿ ಒಂದು ಘಟಕ ಸ್ಥಾಪನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಕಸ ವಿಲೇವಾರಿಯಲ್ಲಿ ಸೃಷ್ಟಿಯಾಗುವ ಹಾರುಬೂದಿಯನ್ನು ಇಟ್ಟಿಗೆ, ಸಿಮೆಂಟ್ ತಯಾರಿಕೆಗೆ ಬಳಸಲಾಗುವುದು ಎಂದರು.

ಮುಂದಿನ ಬಜೆಟ್​ನಲ್ಲಿ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು. ಬಯಲು ಸೀಮೆಯ ಜಿಲ್ಲೆಗಳಿಗೆ ಅನುಕೂಲವಾಗುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಗೆ ಭೂಮಿ ಕಳೆದುಕೊಳ್ಳುವ ರೈತರಿಗೆ ಬೆಂಗಳೂರು ಜಿಲ್ಲೆಯಲ್ಲಿ ನೀಡುವ ಮೊತ್ತದ ಪರಿಹಾರ ನೀಡಲು ತೀರ್ವನಿಸಲಾಗಿದೆ ಎಂದರು.

ಸಂಸದ ಎಸ್.ಪಿ.ಮುದ್ದಹನುಮೇಗೌಡ, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್​ಕುಮಾರ್, ಜಿಪಂ ಸಿಇಒ ಅನ್ನಿಸ್ ಕೆ.ಜಾಯ್ ಮತ್ತಿತರರು ಇದ್ದರು.

ತುಮಕೂರು ನಗರದ ಅಭಿವೃದ್ಧಿಯಲ್ಲಿ ನಮ್ಮ ಕನಸುಗಳ ಈಡೇರಿಕೆಗೆ ಪಾಲಿಕೆ ಆಯುಕ್ತರನ್ನಾಗಿ ಐಎಎಸ್ ಅಧಿಕಾರಿಯನ್ನು ನೇಮಿಸಲಾಗಿದೆ. ಸ್ಮಾರ್ಟ್​ಸಿಟಿ ಯೋಜನೆಗೂ ಐಎಎಸ್ ಅಧಿಕಾರಿ ನೇಮಿಸಲು ಸಿಎಂಗೆ ಮನವಿ ಮಾಡಿದ್ದೇನೆ. ಜಿಲ್ಲಾಡಳಿತವೂ ಮತ್ತಷ್ಟು ಚುರುಕಾಗಬೇಕು.

| ಡಾ.ಜಿ.ಪರಮೇಶ್ವರ್ ಡಿಸಿಎಂ

ಭಾರತರತ್ನ ನೀಡದ್ದಕ್ಕೆ ನಿರಾಸೆ: ಸಿದ್ಧಗಂಗಾ ಡಾ.ಶಿವಕುಮಾರ ಸ್ವಾಮೀಜಿಗೆ ಅರ್ಹವಾಗಿಯೇ ‘ಭಾರತರತ್ನ’ ಪ್ರಶಸ್ತಿ ಲಭಿಸಬೇಕಿತ್ತು. ಪ್ರಶಸ್ತಿಯ ಗೌರವ ಹೆಚ್ಚುತ್ತಿತ್ತು. ಎಸ್.ಎಂ.ಕೃಷ್ಣ ಹಾಗೂ ಸಿದ್ದರಾಮಯ್ಯ ಸರ್ಕಾರದಲ್ಲಿ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಎಂಬ ಶಿಫಾರಸು ಮಾಡಲಾಗಿತ್ತು. ಯಾವ ಮಾನದಂಡದಲ್ಲಿ ಪ್ರಶಸ್ತಿ ನೀಡಲಾಗಿಲ್ಲ ಎಂಬ ಮಾಹಿತಿಯಿಲ್ಲ. ಮಠದ ಭಕ್ತನಾಗಿ ನನಗೂ ನಿರಾಸೆಯಾಗಿದೆ ಎಂದು ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯಿಸಿದರು.

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...