17.8 C
Bengaluru
Wednesday, January 22, 2020

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

Latest News

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಎಲ್ಲರನ್ನೂ ಪ್ರೀತಿ, ಗೌರವದಿಂದ ಕಾಣಿ

ರಟ್ಟಿಹಳ್ಳಿ: ಸಮಾಜದಲ್ಲಿ ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಂಡರೆ ಎಲ್ಲರ ಮನಸ್ಸು ಗೆಲ್ಲಬಹುದು. ಯಾವುದೇ ವ್ಯಕ್ತಿ ಅಥವಾ ಸಮಾಜದ ವಿರುದ್ಧ ದ್ವೇಷ ಸಾಧಿಸಬಾರದು....

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ ಜಪಿಸಬೇಕು. ಜನಗಣಮನ ರಾಷ್ಟ್ರಗೀತೆಯಾದರೆ, ಗಾಯತ್ರಿ ಮಂತ್ರ ವಿಶ್ವಗೀತೆ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
ಶನಿವಾರ ಪರ್ಯಾಯ ಪಲಿಮಾರು ಮಠ, ಶ್ರೀ ಕೃಷ್ಣಮಠ ಆಶ್ರಯದಲ್ಲಿ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ ಮಾತನಾಡಿ, ವಿಶ್ಯಾದ್ಯಂತ ಪಸರಿಸಿರುವ ತುಳು ಶಿವಳ್ಳಿ ಬ್ರಾಹ್ಮಣರು ಜೀವನೋಪಾಯಕ್ಕಾಗಿ ವಿವಿಧ ವೃತ್ತಿಗಳಲ್ಲಿ ತೊಡಗಿದ್ದರೂ ಬ್ರಾಹ್ಮಣ್ಯದ ರಕ್ಷಣೆಗಾಗಿ ಸಂಸ್ಕೃತಿ ಉಳಿಸಿಕೊಳ್ಳಬೇಕು ಎಂದು ಆಶಿಸಿದರು.
ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹಾಗೂ ಪಲಿಮಾರು ಕಿರಿಯ ಯತಿ ಶ್ರೀ ವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಸಮ್ಮೇಳನ ಸಮಿತಿ ಪ್ರಮುಖರಾದ ರಾಮದಾಸ ಮಡ್ಮಣ್ಣಾಯ, ವೆಂಕಟರಮಣ ಪೋತಿ, ಡಾ.ಬಾಲಕೃಷ್ಣ ಮೂಡಂಬಡಿತ್ತಾಯ ಪುತ್ತೂರು, ರಾಮದಾಸ ಭಟ್ ಕಿದಿಯೂರು, ಶಿವಳ್ಳಿ ಬ್ರಾಹ್ಮಣರ ಪುರೋಹಿತರ ಸಂಘ ಅಧ್ಯಕ್ಷ ರಾಮದಾಸ ಭಟ್, ಮಂಜುನಾಥ ಉಪಾಧ್ಯ ಪರ್ಕಳ, ಧರ್ಮದರ್ಶಿ ಹರಿಕೃಷ್ಣ ಪುನರೂರು ಮೊದಲಾದವರಿದ್ದರು.
ದಿ.ಕೆ.ಅನಂತರಾಮ ರಾವ್ ವಿರಚಿತ, ವಿನೋದಾ ಅನಂತರಾಮ್ ಪ್ರಕಾಶಿಸಿದ ಭಾಗವತ ಐದನೇ ಆವೃತ್ತಿಯನ್ನು ಪೇಜಾವರ ಶ್ರೀಗಳು ಅನಾವರಣಗೊಳಿಸಿದರು. ಸಮ್ಮೇಳನ ಪ್ರಧಾನ ಸಂಚಾಲಕ ಪ್ರೊ.ಎಂ.ಬಿ.ಪುರಾಣಿಕ್ ಸ್ವಾಗತಿಸಿದರು. ಪ್ರೊ.ಎಂ.ಎಲ್.ಸಾಮಗ ಕಾರ್ಯಕ್ರಮ ನಿರೂಪಿಸಿದರು. ಯು.ಕೆ.ಪುರಾಣಿಕ್ ಮೈಸೂರು ವಂದಿಸಿದರು. ಸಭಾ ಕಾರ್ಯಕ್ರಮ ಬಳಿಕ ವಿವಿಧ ಗೋಷ್ಠಿಗಳು ನಡೆದವು.

ಇತರ ಸಮುದಾಯಗಳಿಗೆ ಹೋಲಿಸಿದರೆ, ತುಳು ಶಿವಳ್ಳಿ ಬ್ರಾಹ್ಮಣರಲ್ಲಿ ಒಗ್ಗಟ್ಟಿನ ಕೊರತೆ ಇದೆ. ನಮ್ಮ ಸಂಸ್ಕೃತಿ ಸಂಪ್ರದಾಯಗಳ ವಿಸ್ತರಣೆ ಆಗುತ್ತಿದೆ. ರಾಜಕೀಯ ಶಕ್ತಿಯ ಕೊರತೆ ಇದೆ. ಪುರೋಹಿತರ ಕೊರತೆ, ವಿವಾಹ ಸಮಸ್ಯೆ ಇತ್ಯಾದಿಗಳೂ ಇವೆ. ಅವುಗಳೆಲ್ಲದರ ನಿವಾರಣೆಗೆ ಈ ಸಮ್ಮೇಳನ ಆಯೋಜಿಸಲಾಗಿದೆ.
ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಪರ್ಯಾಯ ಪಲಿಮಾರು ಮಠ

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...