25.7 C
Bangalore
Sunday, December 15, 2019

ತೆರಿಗೆ ಪಾವತಿಸದಿದ್ದರೂ ಸೌಲಭ್ಯ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಹುಬ್ಬಳ್ಳಿ: ಸ್ಥಳೀಯ ಸಂಸ್ಥೆಗಳಿಗೆ ಯಾವುದೇ ರೀತಿಯ ತೆರಿಗೆ ಪಾವತಿಸದಿದ್ದರೂ ವಿದ್ಯುತ್, ನೀರಿನಂತಹ ಸೌಲಭ್ಯ ಕೊಡಬಹುದೆ? ಸಮರ್ಪಕ ದಾಖಲೆಗಳಿಲ್ಲದ ಪ್ರದೇಶವನ್ನು ಕೊಳಚೆ ಪ್ರದೇಶವೆಂದು ಘೋಷಿಸಬಹುದೇ?

ಇಲ್ಲಿನ ಬೆಂಗೇರಿಯ ಹೂಗಾರ ಪ್ಲಾಟ್​ನಲ್ಲಿ ಪೊಲೀಸ್ ಇಲಾಖೆ ತೆರವುಗೊಳಿಸಿದ 52ಕ್ಕೂ ಹೆಚ್ಚು ಮನೆಗಳ ಮಾಲೀಕರು ಮಹಾನಗರ ಪಾಲಿಕೆಗೆ ಯಾವುದೇ ರೀತಿಯ ತೆರಿಗೆ ಪಾವತಿಸಿರಲಿಲ್ಲ. ಆದರೂ ಇಲ್ಲಿನ ಮನೆಗಳಿಗೆ ವಿದ್ಯುತ್, ನೀರಿನ ಸಂಪರ್ಕ ಕಲ್ಪಿಸಲಾಗಿತ್ತು.

ಅಕ್ರಮ ಬಡಾವಣೆಗಳಿದ್ದರೂ ಸಾಮಾನ್ಯವಾಗಿ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸಿರುವ ತೆರಿಗೆಯ ರಸೀದಿ ಅಥವಾ ಸ್ಥಳೀಯ ಸಂಸ್ಥೆಗಳು ನೀಡುವ ಪತ್ರದ ಆಧಾರದ ಮೇಲೆ ಆಯಾ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತದೆ.

ಆದರೆ, ಮಹಾನಗರ ಪಾಲಿಕೆ ಮೂಲಗಳ ಪ್ರಕಾರ ಹೂಗಾರ ಪ್ಲಾಟ್​ನ ನಿವಾಸಿಗಳು ಪಾಲಿಕೆಗೆ ತೆರಿಗೆ ಪಾವತಿಸಿಲ್ಲ. ಪಾಲಿಕೆ ವಲಯ ಕಚೇರಿ ನಂ. 6ರ ಸಿಬ್ಬಂದಿ ಸಹ ಈವರೆಗೆ ಆ ಪ್ಲಾಟ್​ಗೆ ತೆರಿಗೆ ವಸೂಲಿಗೆ ಹೋಗದಿರುವುದು ಅಚ್ಚರಿ ಮೂಡಿಸುತ್ತದೆ.

ವಕೀಲ ಮಂಕಣಿ ಸಿ.ಎಸ್. ಎಂಬುವರಿಗೆ ಸೇರಿದ್ದ 2 ಎಕರೆ 28 ಗುಂಟೆ ಜಾಗವನ್ನು ಮಹಾನಗರ ಪಾಲಿಕೆ ಮಾಜಿ ಸದಸ್ಯ ಹೂವಪ್ಪ ದಾಯಗೋಡಿ 10, 20 ರೂ. ಬಾಂಡ್ ಪೇಪರ್ ನೀಡಿ ಅಕ್ರಮವಾಗಿ ಮಾರಾಟ ಮಾಡಿದ್ದರು.

ಅಕ್ರಮ ಮನೆಗಳಿದ್ದರೂ ಮೂಲ ಜಾಗದ ಮಾಲೀಕರು ನೀಡಿರುವ ಬಾಂಡ್ ಪೇಪರ್ ಆಧಾರದ ಮೇಲೆ ಅಲ್ಲಿನ ನಿವಾಸಿಗಳು ಪಾಲಿಕೆಗೆ ತೆರಿಗೆ ಪಾವತಿಸಬಹುದಾಗಿತ್ತು. ಆದರೆ, ಹೂಗಾರ ಪ್ಲಾಟ್ ನಿವಾಸಿಗಳ ಬಳಿ ಮೂಲ ಮಾಲೀಕರು ನೀಡಿದ ಬಾಂಡ್ ಪೇಪರ್ ಇರಲೇ ಇಲ್ಲ. ಪಾಲಿಕೆ ಮಾಜಿ ಸದಸ್ಯ ದಾಯಗೋಡಿ ನೀಡಿರುವ ಬಾಂಡ್ ಆಧಾರದ ಮೇಲೆ ಅಲ್ಲಿ ಜಾಗ ಖರೀದಿಸಿದ್ದವರು ಮನೆ ಕಟ್ಟಿಕೊಂಡಿದ್ದರು. ಹೀಗಾಗಿ ಪಾಲಿಕೆ ಸಿಬ್ಬಂದಿ ಇದುವರೆಗೂ ಹೂಗಾರ ಪ್ಲಾಟ್​ನಿಂದ ತೆರಿಗೆ ಆಕರಿಸಿಲ್ಲ.

ಕೊಳಚೆ ಪ್ರದೇಶ ಘೊಷಿಸಿದ್ದು ಹೇಗೆ ?: 1999ರ ಜನವರಿಯಲ್ಲಿ ಹೂಗಾರ ಪ್ಲಾಟ್​ನ್ನು ಕೊಳಚೆ ಪ್ರದೇಶವೆಂದು ಕೊಳಚೆ ನಿಮೂಲನಾ ಮಂಡಳಿ ಘೋಷಿಸಿದೆ. ಆ ಪ್ರದೇಶದಲ್ಲಿ ಜನರು ಎಷ್ಟು ವರ್ಷಗಳಿಂದ ವಾಸಿಸುತ್ತಿದ್ದಾರೆ ? ಅವರಲ್ಲಿ ಚುನಾವಣೆ ಗುರುತಿನ ಚೀಟಿ ಇದೆಯೇ ? ಅವರು ವಾಸಿಸುವ ಮನೆಗಳ ದಾಖಲೆ ಸಮರ್ಪಕವಾಗಿದೆಯೇ ? ಎಂಬ ಹಲವಾರು ದಾಖಲೆಯನ್ನು ಕೊಳಚೆ ನಿಮೂಲನಾ ಮಂಡಳಿ ಪರಿಶೀಲಿಸುತ್ತದೆ. ಆದರೆ, ಅಲ್ಲಿನ ನಿವಾಸಿಗಳ ಬಳಿ ಸಮರ್ಪಕ ದಾಖಲೆಗಳು ಇರದೇ ಇದ್ದರೂ ಮಂಡಳಿ ಅಧಿಕಾರಿಗಳು ಹೂಗಾರ ಪ್ಲಾಟ್​ನ್ನು ಕೊಳಚೆ ಪ್ರದೇಶವೆಂದು ಘೋಷಿಸಿದ್ದು ಹೇಗೆಂಬುದು ಯಕ್ಷಪ್ರಶ್ನೆಯಾಗಿದೆ.

ಮಹಾನಗರ ಪಾಲಿಕೆಯ ಪತ್ರ ಅಥವಾ ತೆರಿಗೆ ಪಾವತಿಸಿದ ರಸೀದಿ ಇರದಿದ್ದರೂ ಸ್ಥಳೀಯ ಜನಪ್ರತಿನಿಧಿಗಳ ಸೂಚನೆ ಮೇರೆಗೆ ಕೆಲವೊಮ್ಮೆ ಅಕ್ರಮ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗುತ್ತದೆ. ವಿದ್ಯುತ್ ಮೂಲ ಸೌಕರ್ಯ ಆಗಿರುವುದರಿಂದ ಸಂಪರ್ಕ ನಿರಾಕರಣೆ ಮಾಡುವಂತಿಲ್ಲ. | ಆಂಜನೇಯಪ್ಪ, ಎಇಇ, ಹೆಸ್ಕಾಂ

ಹೂಗಾರ ಪ್ಲಾಟ್ 1999ರಲ್ಲಿಯೇ ಕೊಳಚೆ ಪ್ರದೇಶವೆಂದು ಘೋಷಣೆಯಾಗಿದೆ. ಅಂದಿನ ನಿಯಮಗಳು ಹೇಗಿದ್ದವೆಂಬುದು ಗೊತ್ತಿಲ್ಲ. ಈಗ ಕೊಳಚೆ ಪ್ರದೇಶವೆಂದು ಘೋಷಿಸುವ ಮೊದಲು ಆ ಬಡಾವಣೆಯಲ್ಲಿನ ನಿವಾಸಿಗಳು ಎಷ್ಟು ವರ್ಷದಿಂದ ಅಲ್ಲಿದ್ದಾರೆ ? ಅವರ ಬಳಿ ಚುನಾವಣೆ ಗುರುತಿನ ಚೀಟಿ, ಆಧಾರ ಗುರುತಿನ ಚೀಟಿ ಸೇರಿ ಇನ್ನಿತರ ದಾಖಲೆಗಳಿರುವುದರ ಬಗ್ಗೆ ಖಾತ್ರಿ ಮಾಡಿಕೊಳ್ಳಲಾಗುತ್ತದೆ. | ಎಸ್.ವಿ. ಹಿರೇಮಠ, ಎಇಇ, ಕೊಳಚೆ ನಿಮೂಲನಾ ಮಂಡಳಿ, ಧಾರವಾಡ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...