ತೋಟಗಾರಿಕೆಯಲ್ಲಿ ಅವ್ಯವಹಾರ!

Latest News

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹೆಬ್ಬಾಳ ಶ್ರೀಬೋಳೋಡಿ ಬಸವೇಶ್ವರ ರಥೋತ್ಸವ ಡಿ.10 ರಂದು

ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಯೋಗಿಗಳ ಮಾಹಿತಿ | ಶ್ರೀಶೈಲ ಜಗದ್ಗುರುಗಳ ಸಾನ್ನಿಧ್ಯ ಕಂಪ್ಲಿ: ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ, ಡಿ.10ರಂದು ಸಂಜೆ...

ಬ್ಯಾಡಗಿ: 2014-15ರಿಂದ 2019ರ ವರೆಗೂ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಪ್ರೋತ್ಸಾಹ ಧನದಲ್ಲಿ ಸಾಕಷ್ಟು ಹಣ ದುರ್ಬಳಕೆಯಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಲೋಕಾಯುಕ್ತ ಪೊಲೀಸರಿಗೆ ರೈತ ಶಶಿಧರಸ್ವಾಮಿ ಛತ್ರದಮಠ ದೂರು ಸಲ್ಲಿಸಿದರು.

ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಹಾವೇರಿ ವಿಭಾಗದಿಂದ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಕುಂದು-ಕೊರತೆ ಅಹವಾಲು ಆಲಿಕೆ ಸಭೆಯಲ್ಲಿ ರೈತ ಶಶಿಧರಸ್ವಾಮಿ ಛತ್ರದಮಠ ದೂರು ನೀಡಿ, 2014-15ರಲ್ಲಿ ಪ್ರೋತ್ಸಾಹಧನ ಯೋಜನೆಯ 2 ಕೋಟಿ ರೂ. ಮೊತ್ತದಲ್ಲಿ 81 ಲಕ್ಷ ರೂ. ವಾಪಸ್ ಕಳುಹಿಸಿರುವ ದಾಖಲೆ ನೀಡಿದ್ದರು. 2 ತಿಂಗಳ ಬಳಿಕ ಪುನಃ 41 ಲಕ್ಷ ರೂ. ಖರ್ಚು ತೋರಿಸಿದ್ದು, ಸುಳ್ಳು ಮಾಹಿತಿ ನೀಡಿದ್ದಾರೆ. ಹನಿ ನೀರಾವರಿ ಯೋಜನೆ ಅಳವಡಿಸುವ ಏಜೆನ್ಸಿಯೊಂದಿಗೆ ಇಲಾಖೆ ನಿರ್ದೇಶಕರು, ಸ್ಥಳೀಯ ಅಧಿಕಾರಿಗಳು ಶಾಮೀಲಾಗಿ, ಖೊಟ್ಟಿ ದಾಖಲೆ ಸೃಷ್ಟಿಸಿ ಸರ್ಕಾರದ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ. ರೈತರ ಬೆಳೆ ವಿಮೆ ಆಣೆವಾರಿ ಮಾಡುವಾಗಿ ತಪ್ಪು ವರದಿ ನೀಡಿ, ರೈತರಿಗೆ ಮೋಸವೆಸಗಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸ್ಪಂದಿಸಿದ ಲೋಕಾಯುಕ್ತ ಇನ್ಸ್​ಪೆಕ್ಟರ್ ಕೆ. ರಾಮಲಿಂಗಾರೆಡ್ಡಿ, ತೋಟಗಾರಿಕೆ ನಿರ್ದೇಶಕಿ ಟಿ. ವಿಜಯಲಕ್ಷ್ಮೀ ಅವರನ್ನು ಕರೆಸಿ ವಿಚಾರಣೆ ನಡೆಸಿದರು. ಆಗ ನಿರ್ದೇಶಕಿ, ನಾನು ರಜೆ ಮೇಲೆ ಇದ್ದಾಗ ಘಟನೆ ನಡೆದಿದೆ ಎಂದಾಗ, ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸಬೇಡಿ. ಜವಾಬ್ದಾರಿಯಿಂದ ಉತ್ತರಿಸಬೇಕು. ತಕ್ಷಣ ಸಂಪೂರ್ಣ ದಾಖಲೆಗಳೊಂದಿಗೆ ಮಾಹಿತಿ ನೀಡಬೇಕು ಎಂದು ರಾಮಲಿಂಗಾರೆಡ್ಡಿ ಸೂಚಿಸಿದರು.

ಇದೇ ವೇಳೆ ದುಮ್ಮಿಹಾಳ ಗ್ರಾಮದ ಪರಿಶಿಷ್ಟ ಜಾತಿಯ ಮೀಸಲು ಜಮೀನಿನ ಹಕ್ಕುಪತ್ರ ವಿತರಣೆ, ಗುಮ್ಮನಹಳ್ಳಿ ಗ್ರಾಮದ ರುದ್ರಭೂಮಿಗೆ ತೆರಳುವ ರಸ್ತೆ ಕುರಿತು ಸ್ಥಳದಲ್ಲಿದ್ದ ಕಂದಾಯ ಸಿಬ್ಬಂದಿಯಿಂದ ಪೂರ್ಣ ಮಾಹಿತಿ ಪಡೆದು, ಕೂಡಲೇ ದೂರುದಾರರಿಗೆ ನ್ಯಾಯ ಒದಗಿಸಲು ಸೂಚಿಸಿದರು.

ಲೋಕಾಯುಕ್ತ ಪೊಲೀಸ್ ಇನ್ಸ್​ಪೆಕ್ಟರ್ ಕೆ.ರಾಮಲಿಂಗಾರೆಡ್ಡಿ ಮಾತನಾಡಿ, ಸಾರ್ವಜನಿಕರಿಗೆ ವಿವಿಧ ಯೋಜನೆ, ಸೌಲಭ್ಯ ನೀಡಲು ವಿಳಂಬ ನೀತಿ ಅನುಸರಿಸುವುದು ಸಲ್ಲ. ಸರ್ಕಾರಿ ಯೋಜನೆಗಳನ್ನು ಅರ್ಹರನ್ನು ಬಿಟ್ಟು ಅನರ್ಹರಿಗೆ ನೀಡುವುದು, ದುರುಪಯೋಗಪಡಿಸಿಕೊಳ್ಳುವುದು, ಮಂಜೂರಾತಿಗೆ ವಿವಿಧ ರೂಪದಲ್ಲಿ ಫಲಾಪೇಕ್ಷೆ ಬಯಸುವುದು, ಮಾಹಿತಿ ಹಕ್ಕುಗಳಿಗೆ ಸಲ್ಲಿಸಿದ ಅರ್ಜಿಗೆ ಮಾಹಿತಿ ನೀಡದೆ ಕಾನೂನಿಗೆ ವಿರುದ್ಧವಾಗಿ ನಡೆದುಕೊಳ್ಳುವುದು, ಅರ್ಜಿದಾರರ ಕೆಲಸ ಮಾಡುವಲ್ಲಿ ನಿರ್ಲಕ್ಷ್ಯ, ದುರ್ವವರ್ತನೆ ತೋರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಮಾಸಾಶನಕ್ಕೆ ಅಂಗವಿಕಲನ ಗೋಳಾಟ: ತಾಲೂಕಿನ ಅಳಲಗೇರಿ ಗ್ರಾಮದ ಅಂಗವಿಕಲ ಹನುಮಂತಪ್ಪ ಗೊಲ್ಲರ ಮನವಿ ಸಲ್ಲಿಸಿ, ನನಗೆ 600 ರೂ. ಮಾಸಾಶನ ಮಂಜೂರಾಗಿತ್ತು. ಶೇ. 76ರಷ್ಟು ಅಂಗವೈಕಲ್ಯ ಪ್ರಮಾಣಪತ್ರ ಹೊಂದಿದ ಫಲಾನುಭವಿಗೆ 2017ರಿಂದ 1200 ರೂ. ಮಾಸಾಶನ ನೀಡಲಾಗುತ್ತಿದೆ. ಅದಕ್ಕಾಗಿ ಅರ್ಜಿ ಸಲ್ಲಿಸಿ, ಹತ್ತಾರು ಬಾರಿ ಅಲೆದಾಡಿದರೂ ಮಂಜೂರು ಮಾಡುತ್ತಿಲ್ಲ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡು, ತಪ್ಪು ಮಾಡಿದವರಿಂದ ನನಗೆ ಪರಿಹಾರ ಕೊಡಿಸಿ ಎಂದು ದೂರಿದರು.

ಆಗ ತಹಸೀಲ್ದಾರ್ ಟಿ. ಗುರುಬಸವರಾಜ ಪ್ರತಿಕ್ರಿಯಿಸಿ, ಈ ಹಿಂದೆ ಇದ್ದ ಗ್ರೇಡ್-2 ತಹಸೀಲ್ದಾರ್ ಅರ್ಜಿ ಪರಿಶೀಲಿಸಿ, ರದ್ದು ಮಾಡಿದ್ದಾರೆ ಎಂದರು. ಆಗ ಲೋಕಾಯುಕ್ತ ಇನ್ಸ್​ಪೆಕ್ಟರ್, ಮಾಹಿತಿ ಹಕ್ಕಿನಡಿಯೂ ಅರ್ಜಿದಾರನಿಗೆ ಉತ್ತರ ನೀಡಿಲ್ಲ. ಶೇ. 76 ಅಂಗವೈಕಲ್ಯ ಹೊಂದಿದ್ದರೂ, ಮಾಸಾಶನ ಏಕೆ ನಿಲ್ಲಿಸಿದ್ದೀರಿ. ಕಚೇರಿಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.

10ಕ್ಕೂ ಅಧಿಕ ಸಾರ್ವಜನಿಕರು ವಿವಿಧ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದರು. ಪುರಸಭೆ ಮುಖ್ಯಾಧಿಕಾರಿ ವಿ.ಎಂ. ಪೂಜಾರ, ಜಿಪಂ ಇಂಜಿನಿಯರ್ ಟಿ. ನಟರಾಜ, ವಿಸ್ತರಣಾಧಿಕಾರಿ ಗೀತಾ ಕುಂದಾಪುರ ಇತರರಿದ್ದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...