28.5 C
Bengaluru
Monday, January 20, 2020

ತೋಟಗಾರಿಕೆ ಬೆಳೆಗಳ ವೈಯಕ್ತಿಕ ಬೆಳೆ ನಷ್ಟಕ್ಕೆ ಪರಿಹಾರ ನೀಡಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಕೋಲಾರ: ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ ರೈತರ ವೈಯಕ್ತಿಕ ಬೆಳೆ ನಷ್ಟಕ್ಕೆ ವಿಮೆ ಪರಿಹಾರ ದೊರಕಿಸುವ ಸಂಬಂಧ ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಚರ್ಚಿಸಬೇಕು ಎಂದು ಆಲೂಗಡ್ಡೆ ಬೆಳೆಗಾರರ ನಿಯೋಗದಿಂದ ಜಿಲ್ಲಾ ಪಂಚಾಯಿತಿ ಸಿಇಒ ಎಚ್.ವಿ. ದರ್ಶನ್‌ಗೆ ಮನವಿ ಸಲ್ಲಿಸಲಾಯಿತು.

ಜಿಪಂ ಕಚೇರಿಗೆ ಬುಧವಾರ ಭೇಟಿ ಮಾಡಿದ ನಿಯೋಗದ ಪರವಾಗಿ ಮಾತನಾಡಿದ ಗೋವಿಂದಗೌಡ, ಡಿಸೆಂಬರ್‌ನಲ್ಲಿ ಆಲೂಗಡ್ಡೆ ಬೆಳೆಯುವ ಸಮಯ. ಬೆಳೆಗಾರರಿಗೆ ಇಲಾಖೆಯಿಂದ ಸಹಕಾರ ಸಿಗುತ್ತಿಲ್ಲ. ರೈತರೇ ಹೊರ ರಾಜ್ಯ, ಜಿಲ್ಲೆಗಳಿಂದ ಬಿತ್ತನೆ ಗಡ್ಡೆ ಖರೀದಿಸುತ್ತಾರೆ. ಇಲಾಖೆಯ ಸಹಾಯಧನ ಕಳ್ಳರ ಕೈ ಸೇರುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಆಲೂಗಡ್ಡೆ ಬೆಳೆಗೆ ಬಾಧಿಸಿರುವ ಅಂಗಮಾರಿ ರೋಗದಿಂದ ರೈತರು ಕಳವಳಗೊಂಡಿದ್ದಾರೆ. ಖಾಸಗಿ ಅಂಗಡಿ ಮಾಲೀಕರು ನೀಡುತ್ತಿರುವ ಕೀಟನಾಶಕಗಳಿಂದ ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ. ತೋಟಗಾರಿಕೆ ಇಲಾಖೆ ಸೂಕ್ತ ಔಷಧ ಶಿಫಾರಸು ಮಾಡಬೇಕು. ರೈತ ಸಂಪರ್ಕ ಕೇಂದ್ರ, ಹಾಪ್‌ಕಾಮ್ಸ್‌ಗಳಲ್ಲಿ ಮಾಹಿತಿ ಸಿಗುವಂತಾಗಬೇಕು. ಪ್ರಾಮಾಣೀಕರಿಸಿದ ಆಲೂ ಬಿತ್ತನೆಗಡ್ಡೆ ಮತ್ತು ಔಷಧ ಇಲಾಖೆ ಸಿಗುವಂತಾದರೆ ರೈತರು ಮೋಸ ಹೋಗುವುದು ತಪ್ಪುತ್ತದೆ ಎಂದರು.

ಹಿಂದಿನ ವರ್ಷಗಳಲ್ಲಿ ಆಲೂಗಡ್ಡೆಗೆ ಬೆಳೆ ವಿಮೆ ಮಾಡಿಸಿಕೊಂಡ ರೈತರಿಗೆ ಸರಿಯಾಗಿ ಪರಿಹಾರ ಬರಲಿಲ್ಲ. ಅಧಿಕಾರಿಗಳು ವಿಮಾ ಕಂಪನಿಯೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸಬೇಕು. ವೈಯಕ್ತಿಕ ಬೆಳೆ ನಷ್ಟ ಆಧರಿಸಿ ಪರಿಹಾರ ನೀಡುವ ವ್ಯವಸ್ಥೆಯಾಗಬೇಕು ಎಂದು ಒತ್ತಾಯಿಸಿದರು.

ಜಿಪಂ ಸಿಇಒ ಎಚ್.ವಿ.ದರ್ಶನ್ ಮಾತನಾಡಿ, ಮುಂಗಾರು ಮತ್ತು ಹಿಂಗಾರು ಬೆಳೆಗೆ ವಿಮೆ ಕುರಿತು ವ್ಯಾಪಕ ಪ್ರಚಾರ ನೀಡಲಾಗುತ್ತಿದೆ. ಆಲೂಗಡ್ಡೆ ಬೆಳೆಗಾರರಿಂದಲೂ ವಿಮೆ ಪಾವತಿಗೆ ಅರ್ಜಿ ಆಹ್ವಾನಿಸಲಾಗಿತ್ತಾದರೂ ನಿರೀಕ್ಷಿತ ಮಟ್ಟದಲ್ಲಿ ಪಾವತಿಸಿಲ್ಲ. ಬೆಳೆ ನಷ್ಟ ಪರಿಹಾರ ಕಲ್ಪಿಸುವುದು ಜಿಲ್ಲಾಧಿಕಾರಿ ಆಧೀನದಲ್ಲಿ ಬರುವುದರಿಂದ ಅವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಗಾಯತ್ರಿ ಮಾತನಾಡಿ, ಆಲೂಗಡ್ಡೆ ಬಿತ್ತನೆ ವೆಚ್ಚದ ಶೇ.50ರಂತೆ ಗರಿಷ್ಠ 2 ಹೆಕ್ಟೇರ್‌ಗೆ 7,500 ಪ್ರೋತ್ಸಾಹಧನ ನೀಡಲಾಗುವುದು. ಸಸ್ಯ ಸಂರಕ್ಷಣಾ ಔಷಧ ಖರೀದಿಗೆ ಪ್ರತಿ ಹೆಕ್ಟೇರ್‌ಗೆ 7,200 ರೂ.ನಂತೆ ಒಟ್ಟು 14,700 ರೂ. ನೀಡಲಾಗುವುದು. ಸಹಾಯಧನ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗುವುದು. ಇಲಾಖೆ ತಾಂತ್ರಿಕ ವಿಭಾಗದ ಸಿಬ್ಬಂದಿ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಹಾಯಧನ ಮಂಜೂರು ಮಾಡಲು ಫಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ ಎಂದರು.

ಅಲೂಗಡ್ಡೆ ಬೆಳೆಗಾರರಾದ ಹೆಬ್ಬಟ ನಾರಾಯಣಗೌಡ, ಶ್ರೀರಾಮರೆಡ್ಡಿ, ವೆಂಟರೆಡ್ಡಿ, ವಾನರಾಶಿ ಶಿವಾನಂದ, ವಿಶ್ವನಾಥಗೌಡ, ಶಿವಕುಮಾರ್, ಕೃಷ್ಣೇಗೌಡ, ಶ್ರೀನಿವಾಸ್, ನರೇಶ್ ಮುಂತಾದವರು ಹಾಜರಿದ್ದರು.

 

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...