ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಗೈದ ಜೊಲ್ಲೆ ಕುಟುಂಬ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಜೊಲ್ಲೆ ಕುಟುಂಬದ ಸದಸ್ಯರು ತ್ರಿವೇಣಿ ಸಂಗಮದಲ್ಲಿ ಭಾನುವಾರ ಪುಣ್ಯ ಸ್ನಾನ ಮಾಡಿದರು.
ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಯುವ ಮುಖಂಡರಾದ ಬಸವಪ್ರಸಾದ ಜೊಲ್ಲೆ, ಜ್ಯೋತಿ ಪ್ರಸಾದ ಜೊಲ್ಲೆ, ಪ್ರಿಯಾ ಜೊಲ್ಲೆ, ಯಶಸ್ವಿನಿ ಜೊಲ್ಲೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಗೈದರು.
ಈ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರ ವಿಶೇಷ ಪ್ರಯತ್ನದಿಂದ ಮಹಾಕುಂಭಮೇಳ ಯಶಸ್ವಿಯಾಗಿ ಜರುಗುತ್ತಿದ್ದು, ನಿತ್ಯ ಲಕ್ಷಾಂತರ ಜನರು ಪುಣ್ಯಸ್ನಾನ ಮಾಡುತ್ತಿದ್ದಾರೆ. ನಾವು ಕುಟುಂಬ ಸಮೇತ ತಿವೇಣಿ ಸಂಗಮದಲ್ಲಿ ಸ್ನಾನ ಮಾಡಿದೆವು. ಇದೊಂದು ಅವಿಸ್ಮರಣೀಯ ಕ್ಷಣ ಎಂದು ತಿಳಿಸಿದರು.