25.5 C
Bangalore
Monday, December 16, 2019

ತ್ವರಿತ ನ್ಯಾಯದಾನಕ್ಕೆ ಸರ್ವ ಪ್ರಯತ್ನ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಗದಗ: ನ್ಯಾಯಾಂಗ ವ್ಯವಸ್ಥೆಯಲ್ಲಿ ಕಕ್ಷಿದಾರರಿಗೆ ತ್ವರಿತ ನ್ಯಾಯ ಒದಗಿಸಲು ಸರ್ವ ಪ್ರಯತ್ನಗಳು ನಡೆಯುತ್ತಿದ್ದು, ಗದಗನ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅವಶ್ಯಕ ಮೂಲಸೌಕರ್ಯ ಒದಗಿಸುವ ಮೂಲಕ ಉತ್ತಮ ಹೆಜ್ಜೆಯನ್ನಿರಿಸಿದೆ ಎಂದು ಕರ್ನಾಟಕ ಹೈಕೋರ್ಟ್ ಹಾಗೂ ಗದಗ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಆರ್. ದೇವದಾಸ್ ಹೇಳಿದರು.

- Advertisement -

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ವಕೀಲರ ಸಂಘ ಹಾಗೂ ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಹಯೋಗದಲ್ಲಿ ನ್ಯಾಯಾಲಯ ಕಟ್ಟಡದಲ್ಲಿ ನೂತನವಾಗಿ ನಿರ್ವಿುಸಲಾದ 2 ಮತ್ತು 3ನೇ ಮಹಡಿಯ ಉದ್ಘಾಟನೆ ಶನಿವಾರ ನೆರವೇರಿಸಿ ಅವರು ಮಾತನಾಡಿದರು.

ದೇಶದ ನ್ಯಾಯಾಂಗ ವ್ಯವಸ್ಥೆಯು ಹಲವು ಕೊರತೆಗಳ ಮಧ್ಯೆಯೂ ಉತ್ತಮ ನ್ಯಾಯದಾನಕ್ಕೆ ಪ್ರಯತ್ನ ನಡೆಸಿದೆ. ಮೂಲಸೌಕರ್ಯ ಒದಗಿಸುವುದರ ಜೊತೆಗೆ ಜನರಲ್ಲಿ ಕಾನೂನು ಜಾಗೃತಿ ಕಾರ್ಯ ಮಾಡಲಾಗುತ್ತಿದೆ. ಇದು ನ್ಯಾಯ ವ್ಯವಸ್ಥೆ ಚುರುಕಾಗಲು ಪೂರಕವಾಗಿವೆ. ಜಿಲ್ಲಾ ನ್ಯಾಯಾಲಯದಲ್ಲಿ ಮೂಲಸೌಲಭ್ಯಗಳ ಒದಗುವಿಕೆಯಿಂದ ಕಕ್ಷಿದಾರರಿಗೆ ಅನುಕೂಲವಾಗಲಿದೆ ಎಂದರು.

ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಜಿಲ್ಲಾ ನ್ಯಾಯಾಲಯದ 2 ಮತ್ತು 3ನೇ ಮಹಡಿ ಕಾಮಗಾರಿ ಪೂರ್ಣಗೊಳ್ಳುವಿಕೆಯಿಂದ 6 ನ್ಯಾಯಾಲಯಗಳು ನ್ಯಾಯದಾನ ಮಾಡಲು ಅನುಕೂಲ ಕಲ್ಪಿಸಿದಂತಾಗಿದೆ. ನ್ಯಾಯಾಲಯ ಸಂಕೀರ್ಣದಲ್ಲಿ ನಿರ್ವಿುಸಲಾದ ಸಾಕ್ಷಿದಾರರ ಕೊಠಡಿಗಳು ಬಳಕೆಯಾಗದೇ ಇರುವುದು ಸರಿಯಲ್ಲ. ಇಡೀ ನ್ಯಾಯದಾನದ ವ್ಯವಸ್ಥೆಯ ಸತ್ಯ, ನ್ಯಾಯ, ಶೋಧನೆಗೆ ಮುಖ್ಯರಾದ ಸಾಕ್ಷಿದಾರರಿಗೆ ಅನುಕೂಲವಾಗುವಂತೆ ಸಾಕ್ಷಿದಾರರ ಕೊಠಡಿಯಲ್ಲಿ ತಕ್ಷಣವೇ ಅಗತ್ಯದ ಮೂಲಸೌಲಭ್ಯ ಒದಗಿಸುವ ಮೂಲಕ ಉದ್ದೇಶ ಈಡೇರಿಸಬೇಕು ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ವಿ.ಬಿ. ಹುಬ್ಬಳ್ಳಿ ಮಾತನಾಡಿ, ಜಿಲ್ಲಾ ವಕೀಲರ ಸಂಘದ ಮೊದಲ ಮಹಡಿ ಕಟ್ಟಡ ನಿರ್ವಣಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಶೀಘ್ರ ಆರಂಭಿಸುವಂತೆ ಕ್ರಮ ಕೈಗೊಳ್ಳಬೇಕು. ಕಕ್ಷಿದಾರರಿಗೆ ನ್ಯಾಯಾಲಯ ಆವರಣದಲ್ಲಿ ಕುಳಿತುಕೊಳ್ಳಲು ಆಸನ ಹಾಗೂ ಶೌಚಗೃಹ ವ್ಯವಸ್ಥೆ ಮಾಡಬೇಕು. ನ್ಯಾಯಾಲಯ ಒಳಭಾಗದಲ್ಲಿ ಹವಾನಿಯಂತ್ರಣ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷೆ ಸಿ.ಎಚ್. ಸಮಿಉನ್ನಿಸಾ ಅಬ್ರಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಕುಲಕರ್ಣಿ, ಲೋಕೋಪಯೋಗಿ ಮತ್ತು ಒಳನಾಡು ಜಲಸಾರಿಗೆ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ. ಹಂಗರಗಿ, ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳಾದ ಆರ್.ಕೆ. ಕಾಗದಗಾರ, ಎಂ.ಎಸ್. ಕಾರಡಗಿ, ವೈ.ಡಿ. ತಳವಾರ ಉಪಸ್ಥಿತರಿದ್ದರು. ನ್ಯಾಯವಾದಿಗಳಾದ ಸಿ.ಎಸ್. ಶೆಟ್ಟರ್, ಕೆ.ರೂಪಾ ಅತಿಥಿ ಪರಿಚಯ ನೀಡಿದರು. ಆರ್.ಬಿ. ಚಳ್ಳಮರದ ನಿರ್ವಹಿಸಿದರು.

 

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...