21 C
Bengaluru
Wednesday, January 22, 2020

ಥರ್ಡ್​ ಕ್ಲಾಸ್ ಸಿನಿಮಾ ಜ.3ಕ್ಕೆ ಬಿಡುಗಡೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.


ವಿಜಯವಾಣಿ ಸುದ್ದಿಜಾಲ ಕಲಬುರಗಿ
ನಾಯಕ ನಟ ನಮ್ಮ ಜಗದೀಶ ಮತ್ತು ಖ್ಯಾತ ನಟಿ ರೂಪಿಕಾ ನಟಿಸಿರುವ `ಥರ್ಡ ಕ್ಲಾಸ್’ ಸಿನಿಮಾ ಹೊಸ ವರ್ಷದ ಕೊಡುಗೆಯಾಗಿ ಜನವರಿ 3ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಾಯಕ ಕಮ್ ನಿಮರ್ಾಪಕ ನಮ್ಮ ಜಗದೀಶ ತಿಳಿಸಿದರು.
ಪ್ರೇಕ್ಷಕರೇ ದೇವರಿದ್ದಂತೆ. ಹೀಗಾಗಿ ಮಾಲ್ಗಳಲ್ಲಿರುವ ಸಿನಿಮಾ ಹಾಲ್ಗಳಲ್ಲಿ ಹೊರತುಪಡಿಸಿದ ಉಳಿದ ಚಿತ್ರಮಂದಿರಗಳಲ್ಲಿ ಮೊದಲ ದಿನ ವಿಐಪಿ ಪ್ರೀಮಿಯರ್ ಶೋ ಆಗಿ ಸಾರ್ವಜನಿಕರಿಗೆ ಉಚಿತ ಪ್ರದರ್ಶನ ಇರಲಿದೆ ಎಂದು ಅವರು ನಗರದಲ್ಲಿ ಬುಧವಾರ ಟೀಸರ್ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ತಂದೆ-ಮಗಳ ಸಂಬಂಧ ಅತ್ಯಂತ ಆದರ್ಶ ರೀತಿಯಲ್ಲಿ ತೋರಿಸಲಾಗಿದೆ. ಬೇರೆ ಸಿನಿಮಾಗಳಿಗೂ ವಿಭಿನ್ನ ಹಾಗೂ ಉತ್ತಮ ಕಥೆ, ಸಾಹಿತ್ಯ, ಹಾಡುಗಳಿವೆ. ಸಾಮಾಜಿಕ ಹೊಣೆಗಾರಿಕೆ ಕಥಾ ಹಂದರ ಹೊಂದಿದೆ. ಅಶೋಕ ದೇವ ನಿರ್ದೇಶಿಸಿದ್ದು, ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ನಾಗೇಂದ್ರಪ್ರಸಾದ್ ಸಾಹಿತ್ಯದಲ್ಲಿ ಐದು ಹಾಡುಗಳನ್ನು ಖ್ಯಾತ ಗಾಯಕರು ಹಾಡಿದ್ದಾರೆ ಎಂದರು.
ಹಿರಿಯ ಕಲಾವಿದರಾದ ಅವಿನಾಶ್, ರಮೇಶ ಭಟ್ ಹಾಗೂ ಮಜಾ ಭಾರತದ ಪವನ್ ನಟಿಸಿದ್ದಾರೆ. ಬೆಂಗಳೂರಿನ ಸುತ್ತಮುತ್ತ, ಕೇರಳ, ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಈಚೆಗೆ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಚಿತ್ರದ ಧ್ವನಿಸುರಳಿಯನ್ನು ಅಂಧ ಮಕ್ಕಳು ಹಾಗೂ ಮಾಜಿ ಸೈನಿಕರಿಂದ ಬಿಡುಗಡೆ ಮಾಡಿಸಲಾಗಿದೆ ಎಂದು ಹೇಳಿದರು.
ಸೆವನ್ ಹಿಲ್ಸ್ ಹೌಸ್ ಲಾಭಕ್ಕಾಗಿ ಸಿನಿಮಾ ಮಾಡಿಲ್ಲ. 200 ಆಟೋ ಚಾಲಕರು ಮತ್ತು ಅಂಧ, ಅನಾಥ ಮಕ್ಕಳ ಜೀವ ವಿಮೆ ಮಾಡಿದ್ದೇವೆ. ಸಿನಿಮಾದ 2ನೇ ವಾರದ ಮೊದಲ ದಿನದ ಪ್ರದರ್ಶನದಿಂದ ಸಂಗ್ರಹವಾಗುವ ಹಣವನ್ನು ಪ್ರವಾಹ ಪೀಡಿತ ಗ್ರಾಮವೊಂದರ ಅಭಿವೃದ್ಧಿಗೆ ಮೀಸಲಿಡಲಾಗುವುದು ಎಂದು ಜಗದೀಶ ತಿಳಿಸಿದರು.
ಮುಖಂಡರಾದ ರಾಮಚಂದ್ರ ಜಾಧವ್, ವಿಠ್ಠಲ್ ಜಾಧವ್, ಪ್ರೇಮಸಿಂಗ್ ಚವ್ಹಾಣ್, ಶ್ರೀಧರ ಚವ್ಹಾಣ್, ಅರುಣ ಪವಾರ್ ಇತರರಿದ್ದರು. 

ಥರ್ಡನಿಂದ ಫಸ್ಟ್ ಕ್ಲಾಸ್
ಸಿನಿಮಾಕ್ಕಿಂತ ಹೆಸರು ಪ್ರಚಾರಕ್ಕೆ ವರದಾನವಾಗಿದೆ. ಆದರೆ ಥರ್ಡ  ಕ್ಲಾಸ್ ಸಿನಿಮಾದಿಂದ ಫಸ್ಟ್ ಕ್ಲಾಸ್ ಆಗಿರುವ ಮೆಸೇಜ್ ಸಮಾಜಕ್ಕೆ ಹೋಗುತ್ತದೆ. ಇದೊಂದು ಸವಾಲಿನ ಚಿತ್ರ. ಹೆಚ್ಚು ಖುಷಿಕೊಟ್ಟ ಸಿನಿಮಾ. ಕ್ವಾಲಿಟಿ ತಂಡದವರಿದ್ದಾರೆ ಎಂದು ನಾಯಕಿ ರೂಪಿಕಾ ಹೇಳಿಕೊಂಡರು. ಭರತನಾಟ್ಯ ಮತ್ತು ರಂಗಭೂಮಿ ಕಲಾವಿದೆಯಾಗಿದ್ದು, ಹಲವಾರು ಪ್ರದರ್ಶನ ನೀಡಿ ಪ್ರಶಸ್ತಿ ಪಡೆದಿದ್ದೇನೆ. ಇದು ನನ್ನ 15ನೇ ಚಿತ್ರ. ಟೀಸರ್ ಜನಪ್ರಿಯವಾಗಿದೆ. ಹಾಡುಗಳನ್ನು ಜನರು ಗುನುಗುತ್ತಿದ್ದಾರೆ. ಚಿತ್ರದ ಟೀಸರ್ ತೋರಿಸಿದಾಗ ಒನ್ಸ್ ಮೋರ್ ಎನ್ನುತ್ತಿದ್ದಾರೆ. ಇದಕ್ಕಿಂತ ಖುಷಿ ಮತ್ತೊಂದಿಲ್ಲ. ಗೃಹಮಂತ್ರಿ ಮಗಳ ಪಾತ್ರದಲ್ಲಿ ಕಾಣಿಸಿದ್ದೇನೆ ಎಂದು ರೂಪಿಕಾ ತಿಳಿಸಿದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...