ದಕ್ಷಿಣ ಕನ್ನಡ, ಉಡುಪಿಯಲ್ಲಿ ಕ್ರಿಸ್‌ಮಸ್ ಸಂಭ್ರಮಕ್ಕೆ ಚಾಲನೆ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ವಿಜಯವಾಣಿ ಸುದ್ದಿಜಾಲ ಮಂಗಳೂರು/ಉಡುಪಿ
ಕರಾವಳಿಯಾದ್ಯಂತ ಕ್ರಿಸ್‌ಮಸ್ ಮೊದಲ ದಿನವಾದ ಸೋಮವಾರವೇ ಹಬ್ಬದ ದಿನದ ಸಂಭ್ರಮ ತುಂಬಿದೆ.
ಮಧ್ಯರಾತ್ರಿಯಲ್ಲಿ ಯೇಸುವಿನ ಜನನ ಹಿನ್ನೆಲೆಯಲ್ಲಿ ರಾತ್ರಿ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕ್ರಿಸ್‌ಮಸ್ ಜಾಗರಣೆಯನ್ನೂ ಆಚರಿಸಿದರು.
ಸೋಮವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು ಸುಗಂಧಗಳನ್ನು ಅರ್ಪಿಸುವ ಮೂಲಕ ಯೇಸು ಸ್ವಾಮಿಯ ಜನನವನ್ನು ಸ್ವಾಗತಿಸಿದರು.
ಚರ್ಚ್‌ಗಳು ವರ್ಣಮಯ ದೀಪಗಳಿಂದ ಜಗಮಗಿಸಿದರೆ, ಸಮುದಾಯದವರ ಮನೆ ಆವರಣದಲ್ಲಿ ಆಕರ್ಷಕ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಮರಗಳಲ್ಲಿ, ಮನೆಗಳ ಮೂಲೆಗಳಲ್ಲಿ ವಿವಿಧ ಆಕಾರದ ಕ್ರಿಸ್‌ಮಸ್ ನಕ್ಷತ್ರಗಳು ಸಂಭ್ರಮಕ್ಕೆ ಹೆಚ್ಚಿನ ಮೆರಗು ನೀಡಿವೆ. ಚರ್ಚ್‌ಗಳಲ್ಲಿ ರಾತ್ರಿ ವೇಳೆ ಜರುಗಿದ ವಿಶೇಷ ಪ್ರಾರ್ಥನೆಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕ್ರೈಸ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ರಾತ್ರಿ ನಡೆದ ಸಂಭ್ರಮದ ಬಲಿಪೂಜೆಯಲ್ಲಿ ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನ ಸಂದೇಶ ನೀಡಿದರು. ಧರ್ಮಪ್ರಾಂತ್ಯ ಪ್ರಧಾನ ಧರ್ಮಗುರು ಮ್ಯಾಕ್ಸಿಂ ಎಲ್.ನೊರೊನ್ಹಾ, ಕೆಥೆಡ್ರಲ್‌ನ ಪ್ರಧಾನಗುರು ಜೆ.ಬಿ.ಕ್ರಾಸ್ತಾ ಮತ್ತು ಇತರ ಗುರುಗಳು ಪಾಲ್ಗೊಂಡಿದ್ದರು. ಬಲಿಪೂಜೆ ಬಳಿಕ ಕ್ರೈಸ್ತ ಬಾಂಧವರು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಇದೇ ಸಂದರ್ಭ ಕೇಕ್ ವಿತರಿಸಲಾಯಿತು.
ಬಲ್ಮಠದಲ್ಲಿರುವ ಚರ್ಚ್ ಆ್ ಸೌತ್ ಇಂಡಿಯಾ (ಸಿಎಸ್‌ಐ) ಮಹಾ ದೇವಾಲಯದಲ್ಲಿ ಮತ್ತು ಇತರ ಸಿಎಸ್‌ಐ ದೇವಾಲಯಗಳಲ್ಲಿಯೂ ವಿಶೇಷ ಬಲಿಪೂಜೆಗಳು ನಡೆದವು.
ಮಂಗಳವಾರ ಕ್ರಿಸ್‌ಮಸ್ ಹಬ್ಬದ ಆಚರಣೆ ನಡೆಯಲಿದೆ.


ಮನುಷ್ಯರಲ್ಲೇ ದೇವರನ್ನು ಕಾಣೋಣ: ಎಲ್ಲರ ಮನುಷ್ಯರ ಹೃದಯದಲ್ಲೇ ಭಗವಂತನನ್ನು ಕಾಣಬಹುದು. ಪರಸ್ಪರ ಪ್ರೀತಿ, ಕರುಣೆಯ ನಡವಳಿಕೆಯಿಂದ ಇದು ಸಾಧ್ಯವಾಗುವುದು. ದೇವರ ಸಾನ್ನಿಧ್ಯಕ್ಕಾಗಿ ಆಕಾಶಕ್ಕೆ ಏರಬೇಕಾಗಿಲ್ಲ. ಅಥವಾ ಇನ್ಯಾವುದೇ ಕಠಿಣ ಮಾರ್ಗ ತುಳಿಯಬೇಕಾಗಿಲ್ಲ ಎಂದು ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ ಸಂದೇಶ ನೀಡಿದರು.
ರೊಜಾರಿಯೋ ಕೆಥೆಡ್ರಲ್‌ನಲ್ಲಿ ರಾತ್ರಿ ಬಲಿಪೂಜೆ ನೆರವೇರಿಸುವ ಮೊದಲು ಮಾತನಾಡಿದರು. ಜಗತ್ತಿನೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ ತುಂಬಿದೆ. ಎಲ್ಲೆಡೆ ದೀಪಗಳು ಉರಿಯುತ್ತವೆ. ಇಂದು ಕ್ರಿಸ್ತ ಜನಿಸಿದ ದಿನ. ನಮ್ಮ ಜೀವನವನ್ನೇ ಮಾರ್ಪಾಡುಗೊಳಿಸಿದ ದಿನ. ಉತ್ತಮ ನಡವಳಿಕೆ ಮೂಲಕ ನಾವು ಎಲ್ಲರೂ ಭಗವಂತನ ಕೃಪೆಗೆ ಪಾತ್ರರಾಗೋಣ. ಜಗತ್ತನ್ನು ಇನ್ನಷ್ಟು ಸುಂದರಗೊಳಿಸೋಣ ಎಂದವರು ಹೇಳಿದರು.


ಉಡುಪಿ ಬಿಷಪ್ ಬಲಿಪೂಜೆ: ಕಲ್ಯಾಣಪುರದ ಮಿಲಾಗ್ರಿಸ್ ಕೆಥೆಡ್ರಲ್ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್ ಐಸಾಕ್ ಲೋಬೊ ಬಲಿಪೂಜೆ ನೆರವೇರಿಸಿ ಹಬ್ಬದ ಸಂದೇಶ ನೀಡಿದರು.
ಜಿಲ್ಲೆಯ ಪ್ರಮುಖ ಚರ್ಚ್‌ಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ಡೆನಿಸ್ ಡೆಸಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ವಲೇರಿಯನ್ ಮೆಂಡೊನ್ಸಾ, ಕುಂದಾಪುರ ಹೊಲಿ ರೋಸರಿ ಚರ್ಚ್‌ನಲ್ಲಿ ಸ್ಟ್ಯಾನಿ ತಾವ್ರೊ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಜಾರ್ಜ್ ಡಿಸೋಜ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯ ಬಲಿಪೂಜೆಗಳು ನಡೆದವು.
ಹಬ್ಬದ ಅಂಗವಾಗಿ ಚರ್ಚ್‌ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳ ಪ್ರೀತಿಗೆ ಪಾತ್ರನಾದ ಸಾಂತಾಕ್ಲಾಸ್ ವೇಷ, ಭಕ್ತರಿಗೆ ಕ್ರಿಸ್‌ಮಸ್ ಕೇಕ್ ವಿತರಣೆ ನಡೆಯಿತು. ಬಲಿಪೂಜೆಯ ಬಳಿಕ ಕ್ರೈಸ್ತರು ಪರಸ್ಪರ ಕ್ರಿಸ್‌ಮಸ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...