23.2 C
Bangalore
Saturday, December 14, 2019

ದಕ್ಷಿಣ ಕನ್ನಡ ಮುಂದುವರಿದ ಆರೆಂಜ್ ಅಲರ್ಟ್

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ದಿನವಿಡೀ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ತನಕ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಸೆ.6ರ ಬೆಳಗ್ಗೆ 8.30ರ ವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಸೆ.6ರಿಂದ 9ರ ವರೆಗೆ ಎರಡು ದಿನಗಳ ಕಾಲ ಯಲ್ಲೋ ಅಲರ್ಟ್ ನೀಡಲಾಗಿದೆ. ಜಿಲ್ಲೆಯಲ್ಲಿ 64.5 ಮಿ.ಮೀ-115.5 ಮಿ.ಮೀ. ಮಳೆ ನಿರೀಕ್ಷೆಯಿದೆ.

ಸುಬ್ರಹ್ಮಣ್ಯ, ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ, ಮಂಗಳೂರು, ಕಟೀಲು, ಸುರತ್ಕಲ್, ಬಜ್ಪೆ ಮೊದಲಾದ ಕಡೆ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದು ದಿನವಿಡೀ ಉತ್ತಮ ಮಳೆಯಾಗಿದೆ. ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ತೊಂದರೆ ಅನುಭವಿಸಿದರು.

ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ, ಪಯಸ್ವಿನಿ, ಫಲ್ಗುಣಿ ನದಿಗಳು ತುಂಬಿ ಹರಿಯುತ್ತಿವೆ. ದಿನವಿಡೀ ಸುರಿದ ಮಳೆಯಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಕಂಡು ಬಂತು. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಸುಬ್ರಹ್ಮಣ್ಯ, ಧರ್ಮಸ್ಥಳದ ಸ್ನಾನ ಘಟ್ಟಗಳು ಮುಳುಗಡೆಯಾಗಿದ್ದವು.

ನಗರದ ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ಪ್ರದೇಶ ಸೇರಿದಂತೆ ನಗರದ ಹಲವು ಕಡೆಗಳಲ್ಲಿ ಡ್ರೈನೇಜ್ ಉಕ್ಕಿ ಹರಿಯಲಾರಂಭಿಸಿದೆ. ಅರೆಕೆರೆಬೈಲ್ ಪ್ರದೇಶದಲ್ಲಿ ಪ್ರತಿ ಮಳೆಗೂ ಡ್ರೈನೇಜ್ ಉಕ್ಕಿ ಕೃತಕ ನೆರೆ ಉಂಟಾಗುವುದು ಸಾಮಾನ್ಯವಾಗಿದೆ. ತೋಡುಗಳು, ರಾಜ ಕಾಲುವೆಗಳು ತುಂಬಿ ಹರಿಯುತ್ತಿವೆ.

ಜಿಲ್ಲಾಧಿಕಾರಿ ಸೂಚನೆ: ಮಳೆಯಿಂದ ನೆರೆ ಅಥವಾ ಇನ್ಯಾವುದೇ ತೊಂದರೆ ಆದರೂ ಅದನ್ನು ಎದುರಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹರಕ್ಷಕದಳ, ಅಗ್ನಿಶಾಮಕದಳ ಸಿಬ್ಬಂದಿ ಬೋಟ್, ಲೈಫ್ ಜಾಕೆಟ್‌ನೊಂದಿಗೆ ಸಜ್ಜುಗೊಂಡಿದ್ದಾರೆ.

ಮಳೆ ವಿವರ: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ರಿಂದ ಬುಧವಾರ ಬೆಳಗ್ಗೆ 8.30ರ ವರೆಗೆ 48.3 ಮಿ.ಮೀ. ಮಳೆಯಾಗಿದೆ. ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ 54.6 ಮಿ.ಮೀ., ಬೆಳ್ತಂಗಡಿ 75.5 ಮಿ.ಮೀ., ಮಂಗಳೂರು 41.6 ಮಿ.ಮೀ., ಪುತ್ತೂರು 30.5 ಮಿ.ಮೀ. ಹಾಗೂ ಸುಳ್ಯ ತಾಲೂಕಿನಲ್ಲಿ 39.2 ಮಿ.ಮೀ. ಮಳೆಯಾಗಿದೆ.

ಉಡುಪಿ ಮಳೆ ವರದಿ: ಉಡುಪಿ: ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಮುಂದುವರೆದಿದೆ. ಸೋಮವಾರ ತಡರಾತ್ರಿ, ಮಂಗಳವಾರ ಬಿಟ್ಟುಬಿಟ್ಟು ಉತ್ತಮ ಮಳೆ ಸುರಿದಿದೆ. ಮೋಡ ಕವಿದ ವಾತಾವರಣ ನಡುವೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಕಾರ್ಕಳ, ಹೆಬ್ರಿ, ಬ್ರಹ್ಮಾವರ, ಕಾಪು, ಪಡುಬಿದ್ರಿ, ಉಡುಪಿ, ಕುಂದಾಪುರ, ಬೈಂದೂರು ಭಾಗದಲ್ಲಿಯು ಸಾಧಾರಣ ಮಳೆಯಾಗಿದೆ.

  •  ನದಿ ನೀರಿನ ಮಟ್ಟ
    ನೇತ್ರಾವತಿ(ಬಂಟ್ವಾಳ)-5.5 ಮೀಟರ್
    ನೇತ್ರಾವತಿ(ಉಪ್ಪಿನಂಗಡಿ)-25.9 ಮೀಟರ್
    ಕುಮಾರಧಾರಾ(ಉಪ್ಪಿನಂಗಡಿ)-18ಮೀಟರ್

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...