ತರೀಕೆರೆ: ದಲಿತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಡಿವೈಎಸ್ಪಿ ಡಾ.ಆರ್.ಹಾಲಮೂರ್ತಿ ರಾವ್ ಹೇಳಿದರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಅಜ್ಜಂಪುರ ಮತ್ತು ತರೀಕೆರೆ ತಾಲೂಕಿನ ದಲಿತರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಅಜ್ಜಂಪುರ ಹಾಗೂ ತರೀಕೆರೆ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಎಲ್ಲ ಕೋಮಿನವರು ಸೌರ್ಹಾದತೆಯಿಂದ ನೆಲೆಸಿದ್ದಾರೆ. ಅಲ್ಲಲ್ಲಿ ಸಣ್ಣಪುಟ್ಟ ಸಮಸ್ಯೆಗಳ ಹೊರತು ಗಂಭೀರ ಸಮಸ್ಯೆಗಳಿಲ್ಲ.
ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದ್ದು ಅಹಿತಕರ ಘಟನೆಗಳಿಗೆ ಅವಕಾಶ ನೀಡಿಲ್ಲ ಎಂದರು.
ದಲಿತ ಮುಖಂಡರು ಮಾತನಾಡಿ, ಪಟ್ಟಣದ ಸುಂದರೇಶ್ ಬಡಾವಣೆಯಲ್ಲಿ ಯುವಕರು ಗಾಂಜಾ ಸೇವನೆಗೆ ಬಲಿಯಾಗುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ಬೀಟ್ ವ್ಯವಸ್ಥೆ ಬಲಪಡಿಸಬೇಕು.
ಅಲ್ಲದೆ ಅರಣ್ಯ ಇಲಾಖೆ ಸಿಡುಕನಹಳ್ಳಿ ಗ್ರಾಮದ ದಲಿತರ ಜಮೀನಿನಲ್ಲಿ ಬೆಳೆದಿರುವ ನೀಲಗಿರಿ ಮರಗಳನ್ನು ತೆರವುಗೊಳಿಸಿ ಸಾಗುವಳಿಗೆ ಅವಕಾಶ ಮಾಡಿಕೊಡಬೇಕು ಎಂದು
ಒತ್ತಾಯಿಸಿದರು.
ಸಭೆಯಲ್ಲಿ ಗ್ರೇಡ್-2 ತಹಸೀಲ್ದಾರ್ ನೂರುಲ್ ಹುದಾ, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ರಾಮಚಂದ್ರನಾಯಕ, ಕೆ.ವೀರೇಂದ್ರ, ಪಿಡಬ್ಲ್ಯುಡಿ ಎಇಇ ನಾಗೇಂದ್ರಪ್ಪ, ವಕೀಲ ಚಂದ್ರಪ್ಪ
ಮತ್ತಿತರರಿದ್ದರು.
ದಲಿತರ ಸಮಸ್ಯೆಗಳಿಗೆ ಪರಿಹಾರ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…