25.7 C
Bangalore
Sunday, December 15, 2019

ದಸರಾದಲ್ಲಿ ಶ್ರೀಗಳ ಸ್ತಬ್ಧಚಿತ್ರ

Latest News

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ತುಮಕೂರು: ಶತಮಾನ ಕಂಡ ಮಹಾಸಂತ, ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಸ್ಮರಣೆಯೊಂದಿಗೆ ಸಮಗ್ರಕೃಷಿ ಪದ್ಧತಿ ಮೂಲಕ ರೈತನ ಉನ್ನತಿ ಕಲ್ಪನೆಯಲ್ಲಿ ಮೂಡಿಬರುತ್ತಿರುವ ಸ್ತಬ್ಧಚಿತ್ರ ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದೆ.
ಕಳೆದ ಬಾರಿಯ ಮೈಸೂರು ದಸರಾದಲ್ಲಿ ಸಾಕಷ್ಟು ಪ್ರಶಂಸೆಗೆ ಒಳಗಾಗಿದ್ದ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಸ್ತಬ್ಧಚಿತ್ರ ನಿರ್ಮಿಸಿದ್ದ ತಿಪಟೂರು ಕೃಷ್ಣ ಹಾಗೂ ತಂಡದವರೇ ಈ ಬಾರಿಯೂ ಸ್ತಬ್ಧಚಿತ್ರ ರೂಪಿಸುತ್ತಿದ್ದಾರೆ. ಸರ್ವ ಧರ್ಮ ಸಮನ್ವಯಕ್ಕೆ ಹೆಸರಾದ ಕ್ಷೇತ್ರ ಹಾಗೂ ತ್ರಿವಿಧ ದಾಸೋಹದ ಮೂಲಕ ಜ್ಞಾನ ದೇಗುಲ ಎಂದೇ ಕರೆಯಲ್ಪಡುವ ಸಿದ್ಧಗಂಗಾ ಮಠದ ಆರಾಧ್ಯದೈವ ಲಿಂಗೈಕ್ಯ ಶಿವಕುಮಾರ ಶ್ರೀಗಳ ಸ್ಮರಣೆ ಜತೆಗೆ ಸಮಗ್ರ ಕೃಷಿ ಪದ್ಧತಿ ರೈತನ ಉನ್ನತಿ ಕಲ್ಪನೆಯನ್ನಿಟ್ಟುಕೊಂಡು ಸ್ತಬ್ಧಚಿತ್ರದ ಮೂಡಿಸುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ.
ದಸರಾದಲ್ಲಿ ಗಮನ ಸೆಳೆಯಲಿದೆ ಸ್ತಬ್ಧಚಿತ್ರ: ತಿಪಟೂರು ಮತ್ತು ಕೃಷ್ಣ ತಂಡದವರು ನಿರ್ಮಿಸಿರುವ ಸ್ತಬ್ಧಚಿತ್ರ 4ನೇ ಬಾರಿ ಮೈಸೂರು ದಸಾರದಲ್ಲಿ ಪಾಲ್ಗೊಳ್ಳುತ್ತಿದೆ. 2014ರಲ್ಲಿ ಅರಳಗುಪ್ಪೆಯ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದ ಸ್ತಬ್ಧಚಿತ್ರಕ್ಕೆ ವಿಭಾಗೀಯಮಟ್ಟದ ಪ್ರಥಮ ಬಹುಮಾನ ಬಂದಿತ್ತು. 2017ರಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಾಸ್ಥಾನ ಸ್ತಬ್ಧಚಿತ್ರಕ್ಕೂ ಬಹುಮಾನ ಸಿಕ್ಕಿತ್ತು. 2018ರಲ್ಲಿ ಶತಮಾನದ ಸಂತ ಶಿವಕುಮಾರ ಶ್ರೀಗಳ ಸ್ತಬ್ಧಚಿತ್ರ ಸಾಕಷ್ಟು ಹೆಸರು ಪಡೆದಿತ್ತು. ಈ ಬಾರಿ ಶ್ರೀಗಳು ಸ್ಮರಣೆ ಜತೆಗೆ ಸಮಗ್ರ ಕೃಷಿ ಪದ್ಧತಿ ರೈತನ ಉನ್ನತಿ ಸ್ತಬ್ಧಚಿತ್ರ ಸಹಜವಾಗಿ ದಸಾರದಲ್ಲಿ ಗಮನಸೆಳೆಯಲಿದೆ.
23 ಜನರ ತಂಡದ ಶ್ರಮ: ವರ್ಗ, ಜಾತಿಯ ಭೇದವಿಲ್ಲದೇ ಸಮಾನವಾಗಿ ಉಚಿತ ಅನ್ನ, ವಸತಿ ಶಿಕ್ಷಣ ನೀಡಿ ಶಿವನ ಸಾನ್ನಿಧ್ಯ ಸೇರಿರುವ ಸಿದ್ಧಗಂಗೆಯ ಶಿವಕುಮಾರ ಶ್ರೀಗಳನ್ನು ಸ್ಮರಿಸುವ ಜತೆಗೆ ಸಾಲದ ಶೂಲಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಅನ್ನದಾತನಿಗೆ ಆತ್ಮವಿಶ್ವಾಸ ಮೂಡಿಸುವ ಸಂದೇಶ ಸ್ತಬ್ಧಚಿತ್ರದ ಮೂಲಕ ಮೂಡಿಬರಲಿದೆ. ಶ್ರೀಗಳ ಸ್ಮರಣೆಯೊಡಗೂಡಿ ಸಮಗ್ರ ಕೃಷಿ ಪದ್ಧತಿ ತಿಳಿಸುವ ಸ್ತಬ್ಧಚಿತ್ರ ನಿರ್ಮಾಣ ಕಾರ್ಯದಲ್ಲಿ ತಿಪಟೂರಿನ 23ಕ್ಕೂ ಹೆಚ್ಚು ಕಲಾವಿದರು ತೊಡಗಿದ್ದಾರೆ. ಈ ಬಾರಿ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಅಳವಡಿಸಿ ರೈತರಲ್ಲಿ ಆತ್ಮಸ್ಥೈರ್ಯ ತುಂಬುವ ಜತೆಗೆ ಸಮಗೃ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲಾಗುವುದು ಎಂದು ಕಲಾವಿದ ತಿಪಟೂರು ಕೃಷ್ಣ ಮಾಹಿತಿ ಹಂಚಿಕೊಂಡರು.

ರೈತನ ಬದುಕು ತೀರಾ ಶೋಚನೀಯ ಸ್ಥಿತಿ ತಲುಪಿದೆ. ಅವೈಜ್ಞಾನಿಕ ಆಲೋಚನೆ, ತಾಂತ್ರಿಕತೆಯ ಕೊರತೆ, ಆಧುನಿಕ ಕೃಷಿ ಬಗ್ಗೆ ಆಸಕ್ತಿ ಇಲ್ಲದಿರುವುದು ಸಾಲದ ಶೂಲಕ್ಕೆ ಸಿಲುಕುವಂತೆ ಮಾಡಿದೆ. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಸಮಸ್ಯೆಯಿಂದ ಹೊರಬಂದು ಆರ್ಥಿಕವಾಗಿ ಅಭಿವೃದ್ಧಿ ಹೊಂದಬಹುದು ಎಂಬುದು ನಮ್ಮ ಸ್ತಬ್ಧಚಿತ್ರದ ಸಂದೇಶ.
ತಿಪಟೂರು ಕೃಷ್ಣ ಕಲಾವಿದ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...