ದಿಯಾ ಅರಸ್‌ಗೆ ಚಿನ್ನದ ಪದಕ

ಮೈಸೂರು: ನಗರದ ವಿವಿಎಸ್ ಜಿಜೆ ಪಿಯು ಕಾಲೇಜು ವಿದ್ಯಾರ್ಥಿ ದಿಯಾ ಅರಸ್ ರಾಜ್ಯಮಟ್ಟದ ಕರಾಟೆ ಟೂರ್ನಿಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.


ದಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಟೂರ್ನಿಯ 21 ವರ್ಷದೊಳಗಿನ ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇದರೊಂದಿಗೆ ಜ.28 ರಿಂದ 31ರವರೆಗೆ ಚನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಟೂರ್ನಿಗೆ ಆಯ್ಕೆಯಾಗಿದ್ದಾರೆ.