ದುಡಿಯುವ ಕೈಗಳಿಗೆ ಕೆಲಸ ಗ್ಯಾರಂಟಿ

blank

ಚಿತ್ರದುರ್ಗ: ಜಿಲ್ಲೆಯ ಮೇಟಿಕುರ್ಕಿ ಗ್ರಾಮದ ಬಳಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಯಾಗಲಿದ್ದು, ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವದ ಸಾಧನೆಯಾಗಲಿದೆ. ಅಲ್ಲದೆ, ದುಡಿಯುವ ಕೈಗಳಿಗೆ ಕೆಲಸ ಗ್ಯಾರಂಟಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.

ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನಡುವಿನ ನೇರ ರೈಲು ಮಾರ್ಗ ನಿರ್ಮಾಣಕ್ಕೆ 1ಸಾವಿರ ಎಕರೆಗೂ ಹೆಚ್ಚು ಜಮೀನನ್ನು ಸ್ವಾಧೀನಪಡಿಸಿಕೊಂಡು, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ತಿಂಗಳು ಜಿಲ್ಲೆಯ ಫಲಾನುಭವಿಗಳಿಗಾಗಿ 20.96 ಕೋಟಿ ರೂ., ಗೃಹಲಕ್ಷ್ಮೀ ಯೋಜನೆಯಡಿ 3,95,471 ಮಹಿಳೆಯರಿಗೆ ಮಾಸಿಕ 2 ಸಾವಿರ ರೂ., ಯುವನಿಧಿ ಯೋಜನೆಯಡಿ ಅರ್ಹರ ಖಾತೆಗೆ 7.86 ಕೋಟಿ ರೂ. ಜಮಾ ಆಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ನಿತ್ಯ 65 ಸಾವಿರ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದಕ್ಕಾಗಿ ನಿಗಮಕ್ಕೆ 138 ಕೋಟಿ ರೂ., ಗೃಹಜ್ಯೋತಿ ಯೋಜನೆಯಡಿ ಈವರೆಗೂ 3,78,084 ಮಂದಿ ನೋಂದಾಯಿಸಿದ್ದು, 234 ಕೋಟಿ ರೂ. ಸರ್ಕಾರದಿಂದ ಪಾವತಿಸಲಾಗುತ್ತಿದೆ ಎಂದು ಹೇಳಿದರು.

ಸಂಸದ ಗೋವಿಂದ ಎಂ. ಕಾರಜೋಳ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಎಂಎಲ್ಸಿ ಕೆ.ಎಸ್.ನವೀನ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌ಪೀರ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಎಸ್‌ಪಿ ರಂಜಿತ್‌ಕುಮಾರ್ ಬಂಡಾರು, ಎಡಿಸಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ, ತಹಸೀಲ್ದಾರ್ ಡಾ.ನಾಗವೇಣಿ, ಪೌರಾಯುಕ್ತೆ ಎಂ.ರೇಣುಕಾ, ಎಎಸ್‌ಪಿ ಕುಮಾರಸ್ವಾಮಿ ಇತರರಿದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…