ದುರ್ಗದ ಗಣಪ ಮೆರವಣಿಗೆಗೆ 3 ಲಕ್ಷ ಜನ ನಿರೀಕ್ಷೆ

ಚಿತ್ರದುರ್ಗ: ನಗರದಲ್ಲಿ ಸೆ.28ರಂದು ನಡೆಯಲಿರುವ ಹಿಂದು ಮಹಾಗಣಪತಿಯ ಶೋಭಾಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ದದಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹಿಂದು ಮಹಾಗಣಪತಿ ಮಹೋತ್ಸವ ಸಮಿತಿ ಸದಸ್ಯರಿಗೆ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿದ ಅವರು, ಈ ಮಹೋತ್ಸವದ ಶೋಭಾಯಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಜಿಲ್ಲೆಗಳಿಂದ 3 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಶಾಂತಿ ಹಾಗೂ ಸುವ್ಯವಸ್ಥಿತ ಮೆರವಣೆಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್‌ಗೆ ಕ್ರಮ ಕೈಗೊಂಡಿದೆ. ಅಂದು ಬೆಳಗ್ಗೆ 11ಗಂಟೆಗೆ ಮೆರವಣಿಗೆ ಪ್ರಾರಂಭಿಸಿ ರಾತ್ರಿ 9 ಗಂಟೆ ಒಳಗೆ ಪೂರ್ಣಗೊಳಿಸಬೇಕು. ಬಿ.ಡಿ.ರಸ್ತೆ ಹಾಗೂ ಹೊಳಲ್ಕೆರೆ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಕೆ, ವಾಚ್ ಟವರ್ ನಿರ್ಮಾಣ, ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಂಚಾರ ಶೌಚಗೃಹಕ್ಕೆ ವ್ಯವಸ್ಥೆ ಮಾಡಬೇಕು. ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚಬೇಕು ಎಂದು ತಿಳಿಸಿದರು.
ಮೆರವಣಿಗೆ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಸಾರ್ವಜನಿಕರು ಹತ್ತದಂತೆ ನಿರ್ಬಂಧ ವಿಧಿಸಬೇಕು. ತುರ್ತು ಆರೈಕೆಗೆ ಸೇಫ್‌ಹೌಸ್‌ಗಳನ್ನು ಗುರುತಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮೀಸಲಿರಿಸಿ, ಅಗತ್ಯ ವೈದ್ಯರನ್ನು ನೇಮಿಸಬೇಕು. 4 ಆಂಬುಲೆನ್ಸ್‌ಗಳನ್ನು ನಿಯೋಜಿಸಬೇಕು. ವಿದ್ಯುತ್ ಅಡಚಣೆಯಾಗದಂತೆ ಹಾಗೂ ವಿದ್ಯುತ್ ತಂತಿಗಳನ್ನು ಎತ್ತರಿಸುವಂತೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಮಾತನಾಡಿ, ಶೋಭಾಯಾತ್ರೆಗೆ 14 ಡಿವೈಸ್‌ಪಿ, 33 ಸಿಪಿಐ, 112 ಪಿಎಸ್‌ಐ, 167 ಎಎಸ್‌ಐ, ಗೃಹರಕ್ಷಕ ದಳದ ಸಿಬ್ಬಂದಿ ಸಹಿತ ಮೂರು ಸಾವಿರ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗುವುದು ಎಂದು ಹೇಳಿದರು.
15 ಕೆಎಸ್‌ಆರ್‌ಪಿ, 11 ಡಿಎಆರ್, 4 ಕ್ಯೂಆರ್‌ಟಿ ತುಕಡಿಗಳು ಇರುತ್ತವೆ. 81 ಕಡೆ ಸಿಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗುವುದು. 20 ವಿಡಿಯೋಗ್ರಾಫರ್‌ಗಳು ಚಿತ್ರೀಕರಣ ಮಾಡಲಿದ್ದಾರೆ. 9 ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗುವುದು ಎಂದರು.
ಪಟಾಕಿ ಬಳಕೆಗೆ ಅವಕಾಶವಿಲ್ಲ. ಡಿಜೆ ಬಳಸಲು ಪೊಲೀಸ್ ಇಲಾಖೆ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸುವ ಪೊಲೀಸರಿಗೆ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು. ಸೆ.27, 28ರಂದು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಶೋಭಾಯಾತ್ರೆ ವಾಹನಗಳ ಸಂಚಾರ ನಿರ್ಬಂಧಿಸಲಾಗುವುದೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಅಬಕಾರಿ ಡಿಸಿ ಡಾ.ಮಾದೇಶ್, ಎಸಿ ಎಂ.ಕಾರ್ತಿಕ್, ಆರ್‌ಟಿಒ ಭರತ ಎಂ.ಕಾಳಿಸಿಂಗೆ, ನಗರಸಭೆ ಆಯುಕ್ತೆ ಎಂ.ರೇಣುಕಾ, ತಹಸೀಲ್ದಾರ್ ಡಾ.ನಾಗವೇಣಿ, ಸಮಿತಿ ಅಧ್ಯಕ್ಷ ಬಿ.ನಯನ್, ಕುಡಾ ಮಾಜಿ ಅಧ್ಯಕ್ಷ ಬದ್ರಿನಾಥ್, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾ ಪ್ರಧಾನ ಕಾರ‌್ಯದರ್ಶಿ ಉಮೇಶ್ ಕಾರಜೋಳ ಇದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…