18 C
Bangalore
Friday, December 6, 2019

ದುರ್ಗಾದೇವಿ ಕೆರೆ ಅಭಿವೃದ್ಧಿಗೆ ಚಾಲನೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಹಿರೇಕೆರೂರ: 5 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ಶ್ರೀ ದುರ್ಗಾದೇವಿ ಕೆರೆ ಹೂಳು ಎತ್ತುವುದು ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಶಾಸಕ ಬಿ.ಸಿ. ಪಾಟೀಲ ಭೂಮಿ ಪೂಜೆ ನೆರವೇರಿಸಿದರು.

ದುರ್ಗಾದೇವಿ ಕೆರೆ ಅಭಿವೃದ್ಧಿ ಕಾಮಗಾರಿ ಜಿಲ್ಲೆಯಲ್ಲೇ ಮಾದರಿಯಾಗಲಿದ್ದು, ಬರುವ ದಿನಗಳಲ್ಲಿ ಕೆರೆ ಪ್ರವಾಸಿ ತಾಣವಾಗುವ ಜತೆಗೆ, ಸುತ್ತಲಿನ ರೈತರಿಗೂ ಅನುಕೂಲವಾಗಲಿದೆ. ಈಗಾಗಲೇ ಕುಮದ್ವತಿ ನದಿಯಿಂದ ಪೈಪ್ ಲೈನ್ ಮೂಲಕ ನೀರು ತರುವ ಯೋಜನೆ ಅಂತಿಮ ಹಂತ ತಲುಪಿದೆ. ಕೆರೆಯ ಮಧ್ಯಭಾಗದ 10 ಎಕರೆ ಪ್ರದೇಶದಲ್ಲಿ ಉದ್ಯಾನ, 100 ಅಡಿ ಸರ್ವಜ್ಞ ಮೂರ್ತಿಯ ಸ್ಥಾಪನೆ, ಬೋಟಿಂಗ್ ವ್ಯವಸ್ಥೆ, ಕಲ್ಲಿನ ಕಟ್ಟಡ ನಿರ್ವಿುಸಲಾಗುವುದು. ಸರ್ವಜ್ಞ ಏತ ನೀರಾವರಿ ಯೋಜನೆ ಮೂಲಕ ತಾಲೂಕಿನ ಚಿನ್ನಮುಳಗುಂದ, ಹಿರೇಬೂದಿಹಾಳ, ಚಿಕ್ಕಬೂದಿಹಾಳ, ಚಿಕ್ಕೇರೂರು, ಭೋಗಾವಿ ಸೇರಿ 285 ಕೆರೆಗಳನ್ನು ತುಂಬಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಮಾತನಾಡಿ, ಕೆರೆಯಲ್ಲಿ ನೀರು ಸಂಗ್ರಹವಾಗುವುದರಿಂದ 40 ಹಳ್ಳಿಗಳ ಅಂತರ್ಜಲ ವೃದ್ಧಿಯಾಗಲಿದೆ ಎಂದರು.

ಜಿ.ಪಂ. ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ, ತಹಸೀಲ್ದಾರ್ ರಿಯಾಜುದ್ದಿನ್ ಭಾಗವಾನ್ ಮಾತನಾಡಿದರು. ತಾ.ಪಂ. ಅಧ್ಯಕ್ಷ ಹೇಮಪ್ಪ ಮುದಿರೆಡ್ಡೇರ, ಜಿ.ಪಂ. ಸದಸ್ಯರಾದ ಸುಮಿತ್ರಾ ಪಾಟೀಲ, ಪ್ರಕಾಶ ಬನ್ನಿಕೋಡ, ಮಹದೇವಕ್ಕ ಗೋಪಕ್ಕಳಿ, ಶಿವರಾಜ ಹರಿಜನ, ಎನ್.ಎಂ. ಈಟೇರ, ಎಪಿಎಂಸಿ ಅಧ್ಯಕ್ಷ ವಸಂತ ದ್ಯಾವಕ್ಕಳವರ, ಉಪಾಧ್ಯಕ್ಷೆ ಕವಿತಾ ಭರಮಗೌಡ್ರ, ಪ.ಪಂ., ತಾ.ಪಂ. ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಪ.ಪಂ. ಮುಖ್ಯಾಧಿಕಾರಿ ರಾಜಾರಾಮ್ ಪವಾರ್, ಅಧಿಕಾರಿಗಳಾದ ಡಿ. ನಾಗರಾಜ, ನಾಗರಾಜ ಶ್ಯಾಮನೂರು ನಿರ್ವಹಿಸಿದರು.

ಕಾಮಗಾರಿ ವಿಳಂಬ, ಮಾತಿನ ಚಕಮಕಿ

ಬಿಜೆಪಿಯ ಜಿ.ಪಂ. ಸದಸ್ಯ ಎನ್.ಎಂ. ಈಟೇರ ಮಾತನಾಡಿ, ಕೆರೆ ಕಾಮಗಾರಿಯನ್ನು ಸ್ವಲ್ಪ ಮುಂಚಿತವಾಗಿ ಆರಂಭಿಸಿದ್ದರೆ ಇಲ್ಲಿನ ಫಲವತ್ತಾದ ಮಣ್ಣನ್ನು ರೈತರು ತಮ್ಮ ಜಮೀನಿಗೆ ಹಾಕಿಕೊಳ್ಳುತ್ತಿದ್ದರು. ಮಳೆಗಾಲ ಸಮೀಪವಿರುವಾಗ ಕಾಮಗಾರಿ ಆರಂಭಿಸಿರುವುದು ಸರಿಯಲ್ಲ. ಅಕಸ್ಮಾತ್ ಮಳೆ ಬಂದರೆ ಕಾಮಗಾರಿ ಆರ್ಧಕ್ಕೆ ನಿಲ್ಲುತ್ತದೆ ಎಂದು ಏರು ಧ್ವನಿಯಲ್ಲಿ ಹೇಳಿದರು. ಇದಕ್ಕೆ ಶಾಸಕ ಪಾಟೀಲ ಹಾಗೂ ಜಿಲ್ಲಾಧಿಕಾರಿ ಉತ್ತರಿಸಲು ಮುಂದಾಗುತ್ತಿದ್ದಂತೆ ಕೆಲ ಕಾಲ ಮಾತಿನ ಚಕಮಕಿ ನಡೆದು, ಗೊಂದಲದ ವಾತಾವರಣ ನಿರ್ವಣವಾಯಿತು. ಕೊನೆಗೆ ಪ.ಪಂ. ಸದಸ್ಯ ಮಹೇಂದ್ರ ಬಡಳ್ಳಿ, ಡಿ.ಸಿ. ಪಾಟೀಲ ಸೇರಿ ಅನೇಕರು, ‘ಟೆಂಡರ್ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಚುನಾವಣೆ ನೀತಿ ಸಂಹಿತೆ ಬಂದಿದೆ. ಹೀಗಾಗಿ ಕಾಮಗಾರಿ ಈಗ ಪ್ರಾರಂಭಗೊಂಡಿದೆ’ ಎಂದು ಸಮಜಾಯಿಸಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

ಅಧಿಕಾರಿಗಳ ಮಧ್ಯೆ ಟಾಕ್ ವಾರ್

ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಪ.ಪಂ. ಸದಸ್ಯ ಮಹೇಂದ್ರ ಬಡಳ್ಳಿ, ‘ಪಟ್ಟಣ ಪಂಚಾಯಿತಿಯಲ್ಲಿ 3 ವರ್ಷದಿಂದ ಇಂಜಿನಿಯರ್ ಹುದ್ದೆ ಖಾಲಿ ಇದೆ. ಇದರಿಂದ ಪಟ್ಟಣದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಯಾವಾಗ ಇಂಜಿನಿಯರ್ ನೇಮಿಸುವಿರಿ ಎಂದು ಜಿಲ್ಲಾ ಯೋಜನಾಧಿಕಾರಿ ಆರ್.ವಾಸಣ್ಣ ಅವರನ್ನು ಪ್ರಶ್ನಿಸಿದರು. ಯಾವುದೇ ಪ್ರತಿಕ್ರಿಯೆ ಬರದಿದ್ದಾಗ ಕೋಪಗೊಂಡ ಬಡಳ್ಳಿ, ಅಧಿಕಾರಿಯನ್ನು ಏರು ಧ್ವನಿಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಹೀಗೇ ಮುಂದುವರಿದರೆ ಪ.ಪಂ. ಇಲಾಖೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ನಂತರ ಮಧ್ಯ ಪ್ರವೇಶಿಸಿದ ಶಾಸಕ ಬಿ.ಸಿ. ಪಾಟೀಲ ಪರಿಸ್ಥಿತಿ ಶಾಂತಗೊಳಿಸಿದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...